ಕನ್ನಡಪ್ರಭ ವಾರ್ತೆ ಬೆಳಗಾವಿ
ನಗರದ ವಾರ್ತಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಘಟಿಕೋತ್ಸವದ ಅಧ್ಯಕ್ಷತೆಯನ್ನು ರಾಜ್ಯಪಾಲ ಥಾವರ್ ಚಂದ ಗೆಹ್ಲೋಟ್ ವಹಿಸುವರು. ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ನೂತನ ಪದವೀಧರರನ್ನು ಉದ್ದೇಶಿ ಮಾತನಾಡಲಿದ್ದಾರೆ. ಹಿರಿಯ ಇಂಗ್ಲಿಷ ಪ್ರಾಧ್ಯಾಪಕರು, ಸಾಹಿತ್ಯ ವಿಮರ್ಶಕ ಪದ್ಮಶ್ರೀ ಪುರಸ್ಕೃತ ಪ್ರೊ.ಗಣೇಶ ನಾರಾಯಣದಾಸ ದೇವಿ ಘಟಿಕೋತ್ಸವದ ಭಾಷಣ ಮಾಡುವರು ಎಂದರು.
ರಾಣಿ ಚನ್ನಮ್ಮ ವಿಶ್ವವಿದ್ಯಾಲಯವರು ಅಭಿವೃದ್ಧಿ ಯೋಜನೆಗಳನ್ನು ರೂಪಿಸಿಕೊಳ್ಳುತ್ತ ಜ್ಞಾನಮುಖಿ, ಸಮಾಜಮುಖಿ, ಉದ್ಯೋಗಮುಖಿ ಚಿಂತನೆಗಳನ್ನು ಯಶಸ್ವಿಯಾಗಿ ಕಾರ್ಯರೂಪಕ್ಕೆ ತರುವುದರೊಂದಿಗೆ ಶೈಕ್ಷಣಿಕವಾಗಿ ಹಾಗೂ ಗುಣಾತ್ಮಕವಾಗಿ ಬೆಳೆಯುತ್ತಿದೆ. ಹಿರೇಬಾಗೆವಾಡಿಯಲ್ಲಿ 126 ಎಕರೆ ಪ್ರದೇಶದಲ್ಲಿ ಆಡಳಿತ ಕಟ್ಟಡಗಳು ಹಾಗೂ ಶೈಕ್ಷಣಿಕ ಕಟ್ಟಡಗಳ ನಿರ್ಮಾಣ ಕಾರ್ಯವು ಮುಕ್ತಾಯ ಹಂತದಲ್ಲಿದ್ದು, ಮೂಲಭೂತ ಸೌಕರ್ಯಗಳಾದ ರಸ್ತೆ ಹಾಗೂ ನೀರು ಸರಬರಾಜು ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ತಿಳಿಸಿದರು.ಈ ವಿಶ್ವವಿದ್ಯಾಲಯಕ್ಕೆ ಬೆಳಗಾವಿ ಹಾಗೂ ವಿಜಯಪುರ ಜಿಲ್ಲೆಗಳ 361 ಮಹಾವಿದ್ಯಾಲಯಗಳು ಸಂಯೋಜನೆಗೊಂಡಿದ್ದು 1.4 ಲಕ್ಷ ಸ್ನಾತಕ, ಸ್ನಾತಕೋತ್ತರ ಹಾಗೂ ಪಿಎಚ್‌ಡಿ ವಿಧ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಪೀಠ, ರಾಣಿ ಚನ್ನಮ್ಮ ಅಧ್ಯಯನ ಪೀಠ, ಸಂಗೋಳ್ಳಿ ರಾಯಣ್ಣ ಅಧ್ಯಯನ ಪೀಠಗಳು ವಿಶ್ವವಿದ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿವೆ. ಪ್ರಸ್ತುತ ನಾಲ್ಕು ವಿಷಯಗಳಲ್ಲಿ ಪಿ.ಜಿ. ಡಿಪ್ಲೊಮಾ ಕೋರ್ಸ್‌ಗಳು ಹಾಗೂ 334ಕ್ಕಿಂತ ಹೆಚ್ಚು ಸಂಶೋಧನಾರ್ಥಿಗಳಿಂದ ಹಲವಾರು ವಿಷಯಗಳ ಕುರಿತು ಪಿಎಚ್‌ಡಿ ಸಂಶೋಧನೆಗಳು ಜರುಗುತ್ತಿವೆ ಎಂದರು.
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವದ ಸಂದರ್ಭದಲ್ಲಿ ಕೃಷಿ, ಶಿಕ್ಷಣ ಮತ್ತು ಸಮಾಜಸೇವೆಗಾಗಿ ನಿಡಸೋಸಿಯ ದುರುದುಂಡೇಶ್ವರ ಸಿದ್ಧಸಂಸ್ಥಾನ ಮಠದ ಪೀಠಾದಿಪತಿ ಪಂಚಮ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿಗೆ ಗೌರವ ಡಾಕ್ಟರೇಟ್ ಪದವಿಯನ್ನು, ಸಂವಿಧಾನ ಜಾಗೃತಿಯಲ್ಲಿ ಕಾರ್ಯತತ್ಪರಾದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸಗೆ ಡಾಕ್ಟರ್ ಆಫ್ ಲಾ ಗೌರವ ಹಾಗೂ ಶಿಕ್ಷಣ, ಸಹಕಾರ ಮತ್ತು ಸಾಮಾಜಿಕ ಸೇವೆಗಾಗಿ ವಿಜಯಪುರದ ಸೀಕ್ಯಾಬ್ ಅಧ್ಯಕ್ಷ ಶಮಸುದ್ಧಿನ್ ಅಬ್ದುಲ್ಲಾ ಪುಣೇಕರ್‌ಗೆ ಡಾಕ್ಟರ್ ಆಫ್ ಸೈನ್ಸ್ ಗೌರವ ಸಲ್ಲಿಸಲಾಗುವುದೆಂದು ತಿಳಿಸಿದರು.
ಸ್ವರ್ಣ ಪದಕ ವಿಜೇತರು:
ಸುದ್ದಿಗೋಷ್ಠಿಯಲ್ಲಿ ಆರ್‌ಸಿಯು ಕುಲಸಚಿವರಾದ ಸಂತೋಷ ಕಾಮಗೌಡ, ರವೀಂದ್ರನಾಥ ಕದಮ್, ಹಣಕಾಸು ಅಧಿಕಾರಿ ಎಂ.ಎ.ಸಪ್ನ, ಪ್ರೊ.ಕಮಲಾಕ್ಷಿ ತಡಸದ ಹಾಗೂ ಪ್ರೊ.ಅಶೋಕ ಡಿಸೋಜಾ ಉಪಸ್ಥಿತರಿದ್ದರು.