ಅಪ್ಪಯ್ಯ ಗೌಡರ ಕುರಿತು ಪಠ್ಯ ಮರು ಸೇರ್ಪಡೆ ಕ್ರಮ: ಪೊನ್ನಣ್ಣ

KannadaprabhaNewsNetwork |  
Published : Nov 01, 2024, 12:06 AM IST
ಚಿತ್ರ :  31ಎಂಡಿಕೆ1 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡರ ಪ್ರತಿಮೆಗೆ ಗೌರವ ಸಲ್ಲಿಸಿದರು.  | Kannada Prabha

ಸಾರಾಂಶ

ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್‌ ಗುಡ್ಡೆಮನೆ ಅಪ್ಪಯ್ ಗೌಡರ ಸಂಸ್ಮರಣಾ ಕಾರ್ಯಕ್ರಮ ನಡೆಯಿತು. ಕೊಡಗು ಸಮಾಜಗಳ ಒಕ್ಕೂಟ ಅಧ್ಯಕ್ಷ ಸೂರ್ತಲೆ ಸೋಮಣ್ಣ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಸ್ವಾತಂತ್ರ್ಯ ಹೋರಾಟಗಾರ ಗುಡ್ಡೆಮನೆ ಅಪ್ಪಯ್ಯ ಗೌಡರ ಕುರಿತು ಮತ್ತು ಅಮರ ಸುಳ್ಯ ದಂಗೆಯ ಹೋರಾಟಗಾರರ ವಿಷಯವನ್ನು ಪಠ್ಯಪುಸ್ತಕದಲ್ಲಿ ಮರು ಸೇರ್ಪಡೆ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ತಿಳಿಸಿದ್ದಾರೆ.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ನಗರದ ಕೋಟೆ ಆವರಣದಲ್ಲಿ ಗುರುವಾರ ಏರ್ಪಡಿಲಾಗಿದ್ದ ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡರ ಸಂಸ್ಮರಣಾ ಕಾರ್ಯಕ್ರಮದಲ್ಲಿ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

1837ರಲ್ಲಿ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರೊಡನೆ ಹೊರಾಡಿ ಗಲ್ಲಿಗೇರಿಸಲ್ಪಟ್ಟ ಸ್ವಾತಂತ್ರ್ಯ ಹೋರಾಟಗಾರ ಗುಡ್ಡೆಮನೆ ಅಪ್ಪಯ್ಯ ಗೌಡ ಹಾಗೂ ಅಮರ ಸುಳ್ಯ ದಂಗೆ ಬಗ್ಗೆ ಈ ಹಿಂದೆ 2012ರಿಂದ 2019ರ ವರೆಗೆ 6ನೇ ತರಗತಿ ರಾಜ್ಯ ಸಮಾಜ ವಿಜ್ಞಾನ ಪಠ್ಯ ಪುಸ್ತಕದಲ್ಲಿ ಉಲ್ಲೇಖವಾಗಿತ್ತು ಎಂಬ ಬಗ್ಗೆ ಕೊಡಗು ಗೌಡ ಯುವ ವೇದಿಕೆ ಗಮನ ಸೆಳೆದಿದ್ದು, ಈ ಸಂಬಂಧ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಪೊನ್ನಣ್ಣ ತಿಳಿಸಿದರು.

ಜಾತಿ, ಧರ್ಮವನ್ನು ಮೀರಿ ದೇಶಕ್ಕಾಗಿ ಪಣತೊಟ್ಟ ವೀರ ಯೋಧರನ್ನು ಸದಾ ಸ್ಮರಿಸಬೇಕು. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಗುಡ್ಡೆಮನೆ ಅಪ್ಪಯ್ಯ ಗೌಡರ ತ್ಯಾಗ, ಬಲಿದಾನ ಇತಿಹಾಸದ ಪುಟದಲ್ಲಿ ಇರಬೇಕು. ಆ ನಿಟ್ಟಿನಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ಯೋಧರ ಚರಿತ್ರೆ ಉಳಿಸಲು ಕೈಜೋಡಿಸಲಾಗುವುದು ಎಂದರು.

ಕೊಡಗು ಗೌಡ ಸಮಾಜಗಳ ಒಕ್ಕೂಟ ಅಧ್ಯಕ್ಷ ಸೂರ್ತಲೆ ಸೋಮಣ್ಣ ಮಾತನಾಡಿ ಸ್ವಾತಂತ್ರ್ಯ ಹೋರಾಟಗಾರ ಗುಡ್ಡೆಮನೆ ಅಪ್ಪಯ್ಯ ಗೌಡ ಅವರನ್ನು ಗಲ್ಲಿಗೇರಿಸಿದ ಸ್ಥಳವು ಕೋಟೆ ಆವರಣದಲ್ಲಿದ್ದು, ಈ ಜಾಗವು ಕೇಂದ್ರ ಪುರಾತತ್ವ ಇಲಾಖೆ ವ್ಯಾಪ್ತಿಗೆ ಬರಲಿದೆ. ಆದ್ದರಿಂದ 15*15 ಅಳತೆಯಲ್ಲಿ ಇಂಟರ್‌ಲಾಕ್ ಅಳವಡಿಸಿ ಅಭಿವೃದ್ಧಿಪಡಿಸಲು ಮುಂದಾಗಬೇಕಿದೆ ಎಂದು ಕೋರಿದರು.

ಭಾರತೀಯ ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ.ದಿನೇಶ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯ ನಿಡ್ಯಮಲೆ ಡಾ.ಎ.ಜ್ಞಾನೇಶ್ ಮಾತನಾಡಿದರು.

* ಪುಷ್ಪ ನಮನ:

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡರ ಸಂಸ್ಮರಣಾ ದಿನಾಚರಣೆ ನಗರದ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆ ಬಳಿ ಗುರುವಾರ ನಡೆಯಿತು.

ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಭಾರತೀಯ ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ.ದಿನೇಶ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಡಿವೈಎಸ್‌ಪಿ ಮಹೇಶ್ ಕುಮಾರ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ, ನಿಕಟಪೂರ್ವ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ಮಾಜಿ ಅಧ್ಯಕ್ಷ ಕೊಲ್ಯದ ಗಿರೀಶ್, ಮಡಿಕೇರಿ ಗೌಡ ಸಮಾಜದ ಅಧ್ಯಕ್ಷ ಪೇರಿಯನ ಜಯಾನಂದ, ಕೊಡಗು ಗೌಡ ವಿದ್ಯಾಸಂಸ್ಥೆಯ ಅಧ್ಯಕ್ಷ ಅಂಬೆಕಲ್ಲು ನವೀನ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯು, ಗ್ಯಾರಂಟಿ ಯೋಜನಾ ಅನುಷ್ಠಾನ ತಾಲೂಕು ಸಮಿತಿ ಅಧ್ಯಕ್ಷ ಮಂದ್ರೀರ ಮೋಹನ್ ದಾಸ್, ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಅಧ್ಯಕ್ಷ ಪೊನ್ನಚ್ಚನ ಶ್ರೀನಿವಾಸ್, ಭಾರತೀಯ ಕಾಫಿ ಮಂಡಳಿ ಸದಸ್ಯರಾದ ತಳೂರು ಕಿಶೋರ್ ಕುಮಾರ್, ಭಾರತ್ ಸೇವಾದಳದ ಜಿಲ್ಲಾ ಸಂಘಟಕರಾದ ಗವಿನ್, ವಿವಿಧ ಗೌಡ ಸಮಾಜದ ಅಧ್ಯಕ್ಷರಾದ ಚಿಲ್ಲನ ಗಣಿಪ್ರಸಾದ್(ಕುಶಾಲನಗರ), ಯಂಕನ ಉಲ್ಲಾಸ(ಸುಂಟಿಕೊಪ್ಪ), ಅಯ್ಯಂಡ್ರ ರಾಘವಯ್ಯ(ಚೆಟ್ಟಳ್ಳಿ), ಮುಕ್ಕಾಟಿ ಗಣಪತಿ(ವಿರಾಜಪೇಟೆ), ಮುಕ್ಕಾಟಿ ಕುಶಾಲಪ್ಪ (ಪಾರಾಣೆ), ಪಾಣತ್ತಲೆ ಹರೀಶ್, (ಮೂರ್ನಾಡು), ಕೊಡಪಾಲು ಗಣಪತಿ(ಚೇರಂಬಾಣೆ), ಕುದುಪಜೆ ಪಳಂಗಪ್ಪ(ಭಾಗಮಂಡಲ), ಕಟ್ಟೆಮನೆ ಜನಾರ್ದನ (ಮರಗೋಡು), ತೂಟೇರ ವೆಂಕಟರಮಣ(ಮಕ್ಕಂದೂರು), ಗುಡ್ಡೆಮನೆ ವಿಶುಕುಮಾರ್(ಗುಡ್ಡೆಹೊಸೂರು), ಗೌಡ ಮಹಿಳಾ ಒಕ್ಕೂಟದ ಅಮೆ ದಮಯಂತಿ, ಕೊಡಗು ಗೌಡ ವಿದ್ಯಾ ಸಂಘದ ಕಾರ್ಯದರ್ಶಿ ಪೇರಿಯನ ಉದಯ, ವಕೀಲರಾದ ಕೊಟ್ಟಕೇರಿಯನ ದಯಾನಂದ, ಕುಡೆಕಲ್ಲು ವಿದ್ಯಾಧರ, ಸಾಹಿತಿ ಕಟ್ರತನ ಲಲಿತಾ ಅಯ್ಯಣ್ಣ, ನಿವೃತ್ತ ನೌಕರರ ಸಂಘದ ಕೋರನ ವಿಶ್ವನಾಥ, ಮಾಜಿ ಸೈನಿಕರ ಸಂಘದ ತುಂತಜೆ ದಯಾನಂದ, ಕುಶಾಲನಗರ ಗೌಡ ಯುವ ವೇದಿಕೆಯ ಕೊಡಗನ ಹರ್ಷ, ಹಿರಿಯರಾದ ದಂಬೆಕೋಡಿ ಆನಂದ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯರಾದ ಪಿ.ಎಂ.ಸಂದೀಪ, ವಿನೋದ್ ಮೂಡಗದ್ದೆ, ಚಂದ್ರಶೇಖರ ಪೆರಾಲು, ತೇಜಕುಮಾರ್ ಕುಡೆಕಲ್ಲು, ಚಂದ್ರಾವತಿ ಬಡ್ಡಡ್ಕ, ಲತಾಪ್ರಸಾದ್ ಕುದ್ಪಾಜೆ, ನಿಡ್ಯಮಲೆ ಡಾ.ಜ್ಞಾನೇಶ್, ಲೋಕೇಶ್ ಊರುಬೈಲು, ಕುದುಪಜೆ ಕೆ.ಪ್ರಕಾಶ, ಪೊನ್ನಚ್ಚನ ಮೋಹನ್, ಕೊಡಗು ಯುವ ವೇದಿಕೆಯ ಸದಸ್ಯರು ಮುಖಂಡರು ಇತರರು ಪುಷ್ಪ ನಮನ ಸಲ್ಲಿಸಿ, ಗೌರವಿಸಿದರು.

ಭಾರತ್ ಸೇವಾದಳದ ರೇವತಿ ರಮೇಶ್, ಕಡ್ಲೇರ ತುಳಸಿ ಮೋಹನ್ ಹಾಗೂ ಚೊಕ್ಕಾಡಿ ಪೇಮ ರಾಘವಯ್ಯ ಅವರು ಗುಡ್ಡೆಮನೆ ಅಪ್ಪಯ್ಯಗೌಡರ ಕುರಿತು ‘ನಮನ ಗೀತೆ’ ಹಾಗೂ ರಾಷ್ಟ್ರಗೀತೆ ಹಾಡಿದರು. ಲಿಟ್ಲ್ ಪ್ಲವರ್ ಶಾಲೆಯ ಮುಖ್ಯಸ್ಥರಾದ ಸುನಿತಾ ಪ್ರೀತು ಮತ್ತು ವಿದ್ಯಾರ್ಥಿಗಳು ಆಶಯ ಗೀತೆ ಹಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸ್ತೆಗೆ ಕಾಲಿಟ್ಟಿರೋ ಹುಷಾರ್‌, ಕಚ್ಲಿಕ್ಕೆ ಕಾಯ್ತಿವೆ ಬೀದಿ ನಾಯಿ
ನಗರದಲ್ಲಿ ಡ್ರಗ್ಸ್ ಮಾರಾಟಕ್ಕೆಯತ್ನಿಸಿದ ಮೂವರ ಬಂಧನ