ಕನ್ನಡಪ್ರಭ ವಾರ್ತೆ ಶಿವಮೊಗ್ಗ
ನಗರದ ವಿಕಾಸ ಪದವಿಪೂರ್ವ ಕಾಲೇಜಿನಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ವಿಕಾಸ ಪದವಿ ಪೂರ್ವ ಕಾಲೇಜು, ಶಿವಮೊಗ್ಗ ಇವುಗಳ ಸಹಯೋಗದೊಂದಿಗೆ ಗುರುವಾರ ಆಯೋಜಿಸಿದ್ದ 2026-27ನೇ ಸಾಲಿನ ರಾಜ್ಯಮಟ್ಟದ ಪದವಿ ಪೂರ್ವ ಕಾಲೇಜುಗಳ ವೇಟ್ ಲಿಫ್ಟಿಂಗ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ವಿದ್ಯಾಭ್ಯಾಸ ಎಷ್ಟು ಮುಖ್ಯವೋ, ಕ್ರೀಡೆಯೂ ಅಷ್ಟೇ ಮುಖ್ಯ. ಶರೀರವನ್ನು ಸದೃಢವಾಗಿಟ್ಟುಕೊಂಡಾಗ ಮಾತ್ರ ಬುದ್ಧಿಯೂ ಚುರುಕಾಗಿ ಕೆಲಸ ಮಾಡಲು ಸಾಧ್ಯ. ಇಂದು ಪಿಯು ಹಂತದಲ್ಲೇ ನೀವು ತೋರಿಸುತ್ತಿರುವ ಈ ಪ್ರತಿಭೆ, ನಾಳೆ ನಮ್ಮ ರಾಜ್ಯ ಹಾಗೂ ದೇಶವನ್ನು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ, ಒಲಿಂಪಿಕ್ಸ್ ನಂತಹ ವೇದಿಕೆಗಳಲ್ಲಿ ಪ್ರತಿನಿಧಿಸುವಂತಾಗಬೇಕು ಎಂದು ಆಶಿಸಿದರು.
ಮುಂದಿನ ಯುವ ದಸರಾದಲ್ಲಿ ವೇಟ್ ಲಿಫ್ಟಿಂಗ್ ಸ್ಪರ್ಧೆ: ನಮ್ಮ ಶಿವಮೊಗ್ಗ ಕ್ರೀಡಾ ಕ್ಷೇತ್ರಕ್ಕೆ ಯಾವಾಗಲೂ ಪ್ರೋತ್ಸಾಹ ನೀಡುತ್ತಾ ಬಂದಿದೆ. ಮುಂದಿನ ಯುವ ದಸರಾದಲ್ಲಿ ವೇಟ್ ಲಿಫ್ಟಿಂಗ್ ಪಂದ್ಯಾವಳಿ ಮಾಡುತ್ತೇವೆ. ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಾರ್ಥಿಗಳು ಭಾಗವಹಿಸಬೇಕು. ಹೆಣ್ಣು ಮಕ್ಕಳು ಇಂದಿನ ವೇಟ್ ಲಿಫ್ಟಿಂಗ್ ಪಂದ್ಯಾವಳಿಯಲ್ಲಿ ಅತ್ಯಂತ ಉತ್ಸುಕತೆಯಿಂದ ಹಾಗೂ ಸ್ಪರ್ಧಾತ್ಮಕವಾಗಿ ಭಾಗವಹಿಸಿದ್ದೀರಿ. ನಿಮ್ಮ ಈ ಮಾನಸಿಕತೆ ಮೆಚ್ಚುವಂತಹದ್ದಾಗಿದ್ದು. ಕ್ರೀಡೆಗೆ ಅಗತ್ಯವಾದ ಎಲ್ಲ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.ಡಿಡಿಪಿಯು ಚಂದ್ರಪ್ಪ ಗುಂಡಪಲ್ಲಿ ಮಾತನಾಡಿ, ಕಳೆದ ವರ್ಷ ಕೋಲಾರದಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟ ಆಯೋಜಿಸಲಾಗಿತ್ತು. ಈ ಬಾರಿ ಶಿವಮೊಗ್ಗದಲ್ಲಿ ಅತ್ಯಂತ ಅಚ್ಚುಕಟ್ಟಾಗಿ ವಿಕಾಸ ಸಂಸ್ಥೆಯಲ್ಲಿ ಆಯೋಜಿಸಲಾಗಿದೆ. ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಒಟ್ಟು 185 ಸ್ಪರ್ಧಾರ್ಥಿಗಳು 72 ಬಾಲಕಿಯರು ಮತ್ತು 113 ಬಾಲಕರು ಭಾಗಹಿಸಿದ್ದಾರೆ ಎಂದರು.
ವಿಕಾಸ ವಿದ್ಯಾ ಸಮಿತಿಯ ಕಾರ್ಯದರ್ಶಿ ಎ.ಜೆ.ರಾಮಚಂದ್ರ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಿತಿಯ ಸಹ ಕಾರ್ಯದರ್ಶಿ ವಿಜಯೇಂದ್ರ ಬಿಂದುರಾವ್ ಸುಳೇಕೇರಿ, ಪ್ರಾಚಾರ್ಯರ ಸಂಘದ ಅಧ್ಯಕ್ಷ ಜಿ.ಎಫ್ ಕುಟ್ರಿ, ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಯೋಗೇಶ್ ಎಸ್, ಅನುದಾನಿತ ಪ್ರಾಂಶುಪಾಲರ ಸಂಘದ ಅಧ್ಯಕ್ಷ ರಾಜು ಕೆ ಎಚ್, ಕ್ರೀಡಾ ಸಂಯೋಜಕ ನಾಗೇಂದ್ರ ಪ್ರಸಾದ್, ಸರ್ಕಾರಿ ನೌಕರರ ಸಂಘದ ನಿರ್ದೇಶಕ ಶಶಿಧರ್, ವೇಟ್ ಲಿಫ್ಟಿಂಗ್ ಅಸೋಸಿಯೇಷನ್‌ನ ಕಾರ್ಯದರ್ಶಿ ಸಿಪಿಆರ್ ಸುಧೀರ್ ಕುಮಾರ್, ವಿಕಾಸ ಪಿಯು ಕಾಲೇಜು ಪ್ರಾಚಾರ್ಯರಾದ ಮಧುಸೂಧನ್, ಗೋಪಾಲಕೃಷ್ಣ, ಪ್ರವೀಣ್, ಹರೀಶ್, ಉಪನ್ಯಾಸಕರು, ದೈಹಿಕ ಶಿಕ್ಷಣ ಶಿಕ್ಷಕರು, ಸ್ಪಧಾರ್ಥಿಗಳು, ಸಿಬ್ಬಂದಿ ಹಾಜರಿದ್ದರು.