ಸಂವಿಧಾನವನ್ನು ಓದಿ ಅರಿವು ಮೂಡಿಸಿಕೊಳ್ಳಿ: ಪುಟ್ಟಸ್ವಾಮಿಗೌಡ

KannadaprabhaNewsNetwork |  
Published : Jan 31, 2025, 12:48 AM IST
30ಕೆಎಂಎನ್ ಡಿ20 | Kannada Prabha

ಸಾರಾಂಶ

ದೇಶದ ಸಂವಿಧಾನವು ಎಲ್ಲಾ ವರ್ಗದ ಜನರಿಗೂ ಸಮಾನ ಹಕ್ಕು ಅವಕಾಶಗಳನ್ನು ಒದಗಿಸಿಕೊಟ್ಟಿದೆ. ಸಮಾಜದಲ್ಲಿನ ಅಸಮಾನತೆ ತೊಡೆದು ಹಾಕಲು ಕಾಯ್ದೆಯ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ಹಲಗೂರು

ದೇಶದ ಸಂವಿಧಾನವು ಎಲ್ಲಾ ವರ್ಗದ ಜನರಿಗೂ ಸಮಾನ ಹಕ್ಕು ಅವಕಾಶಗಳನ್ನು ಒದಗಿಸಿಕೊಟ್ಟಿದೆ. ಸಮಾಜದಲ್ಲಿನ ಅಸಮಾನತೆ ತೊಡೆದು ಹಾಕಲು ಕಾಯ್ದೆಯ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕು ಎಂದು ಶಿಕ್ಷಕ ಪುಟ್ಟಸ್ವಾಮಿಗೌಡ ತಿಳಿಸಿದರು.

ಕರ್ನಾಟಕ ಪಬ್ಲಿಕ್ ಸ್ಕೂಲ್ ಅವರಣದಲ್ಲಿ ಅಂಬೇಡ್ಕರ್ ಗ್ರಾಮೀಣಾಭಿವೃದ್ಧಿ ಸಾಂಸ್ಕೃತಿಕ ಸಂಘದಿಂದ ಸಂವಿಧಾನ ಓದು ಪುಸ್ತಕ ವಿತರಿಸಿ ಮಾತನಾಡಿದರು. ಇದೇ ವೇಳೆ ಶಾಲೆಯ 100ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೂ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಬರೆದಿರುವ ಸಂವಿಧಾನ ಓದು ಪುಸ್ತಕವನ್ನು ವಿತರಣೆ ಮಾಡಲಾಯಿತು.

ಈ ವೇಳೆ ತಾಲೂಕು ಶಿಕ್ಷಕರ ಸಂಘದ ನಿರ್ದೇಶಕ ಪುಟ್ಟಸ್ವಾಮಿಗೌಡ, ಉಪ ಪ್ರಾಂಶುಪಾಲೆ ಅನುರಾಧ, ಶಿಕ್ಷಕರಾದ ಅಂಬೇಡ್ಕರ್ ಗ್ರಾಮೀಣಾಭಿವೃದ್ಧಿ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಶಿವಣ್ಣ, ಪ್ರಧಾನ ಕಾರ್ಯದರ್ಶಿ ಕೆ.ಜಿ.ಸಿದ್ದಲಿಂಗಮೂರ್ತಿ, ಸಂಘದ ಪದಾಧಿಕಾರಿಗಳು ಸೇರಿದಂತೆ ಶಿಕ್ಷಕ ವರ್ಗ ಭಾಗವಹಿಸಿದ್ದರು.

ಗಾಂಧೀಜಿ ಸ್ಮಾರಕಕ್ಕೆ ಪ್ರಜ್ಞಾವಂತರ ವೇದಿಕೆ ವತಿಯಿಂದ ಪುಷ್ಪಾರ್ಚನೆ

ಶ್ರೀರಂಗಪಟ್ಟಣ:

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 77 ಹುತಾತ್ಮ ದಿನದ ಅಂಗವಾಗಿ ಪಶ್ಚಿಮ ವಾಹಿನಿಯ ಅವರ ಸ್ಮಾರಕಕ್ಕೆ ಪ್ರಜ್ಞಾವಂತರ ವೇದಿಕೆ ವತಿಯಿಂದ ಪುಷ್ಪಾರ್ಚನೆ ನೇರವೇರಿಸಿದರು.

ವೇದಿಕೆ ಸಂಚಾಲಕ ವೆಂಕಟೇಶ್ ನೇತೃತ್ವದಲ್ಲಿ ಪಶ್ಚಿಮ ವಾಹಿನಿಯ ಮಹಾತ್ಮ ಗಾಂಧೀಜಿಯವರ ಚಿತಾಭಸ್ಮ ಬಿಟ್ಟ ಸ್ಥಳದಲ್ಲಿರುವ ಸ್ಮಾರಕಕ್ಕೆ ವೇದಿಕೆ ಕಾರ್ಯಕರ್ತರು ಪೂಜೆ ಸಲ್ಲಿಸಿ ಪುಷ್ಪ ನಮನ ಸಲ್ಲಿಸಿದರು.

ನಂತರ ವೆಂಕಟೇಶ್ ಮಾತನಾಡಿ, ಮಹಾತ್ಮ ಗಾಂಧೀಜಿಯವರು ಎಲ್ಲಾ ಧರ್ಮಗಳನ್ನು ಪ್ರೀತಿಸುತ್ತಿದ್ದರು. ಯಾವುದೇ ಜಾತಿ ಧರ್ಮದ ಹೆಸರಿನಲ್ಲಿ ಕೂಗದೆ ಮೇಲು ಕೀಳು ಎಂಬ ಭಾವನೆ ಮಾಡದೆ ಆಧುನಿಕ ಭಾರತದಲ್ಲಿ ಗಾಂಧೀಜಿಯವರ ಮೌಲ್ಯಗಳನ್ನು ಕಾಪಾಡಬೇಕಿದೆ. ಅವರು ಬಿಟ್ಟು ಹೋಗಿರುವ ಸಿದ್ದಾಂತಗಳನ್ನು ನಾವುಗಳು ಹೆಚ್ಚು ಗೌರವಿಸಬೇಕು ಎಂದರು.

ಈ ವೇಳೆ ಡಾ. ಶ್ರೀನಿವಾಸ್, ಗ್ರಾಪಂ ಸದಸ್ಯ ಅಪ್ಪಾಜಿ, ಪುರಸಭೆ ಮಾಜಿ ಅಧ್ಯಕ್ಷೆ ಶೀಲಾ ನಂಜುಂಡಯ್ಯ, ಜಯಶಂಕರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೋಗಿಲು ನಿರಾಶ್ರಿತರಿಗೆ 5ರ ನಂತರ ವಸತಿ ಭಾಗ್ಯ
ಹೊಸ ವರ್ಷಕ್ಕೆ ಶೇ.40 ಮದ್ಯ ಮಾರಾಟ ಹೆಚ್ಚಳ!