ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲ 4 ವಿಧಾನಸಭಾ ಕ್ಷೇತ್ರಗಳು, ಯಲಹಂಕ ವಿಧಾನಸಭಾ ಕ್ಷೇತ್ರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ 3 ವಿಧಾನಸಭಾ ಕ್ಷೇತ್ರಗಳು ಸೇರಿದಂತೆ 8 ತಾಲೂಕುಗಳ ವ್ಯಾಪ್ತಿಯನ್ನು ಒಳಗೊಂಡ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾ ಚುನಾವಣಾಧಿಕಾರಿಗಳು ಸಕಲ ಸಿದ್ಧತೆಗಳನ್ನ ಮಾಡಿಕೊಂಡಿದ್ದಾರೆ.
ಚುನಾವಣಾಧಿಕಾರಿ ಪಿ.ಎನ್.ರವೀಂದ್ರ ಮಾತನಾಡಿ, ಮತ ಎಣಿಕೆ ಕಾರ್ಯ ಬೆಳಿಗ್ಗೆ 8 ಗಂಟೆಗೆ ಆರಂಭವಾಗಲಿದ್ದು, ಮತ ಎಣಿಕೆ ಕೇಂದ್ರಕ್ಕೆ ಕೇವಲ ಎಣಿಕಾ ಸಿಬ್ಬಂದಿ ಹಾಗೂ ಏಜೆಂಟ್ ಗಳು ಸೇರಿದಂತೆ ಅನುಮತಿ ನೀಡಲಾದ ಮಾಧ್ಯಮದವರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ. ಮತ ಎಣಿಕಾ ಕೇಂದ್ರದೊಳಗೆ ಮೊಬೈಲ್ ಸಂಪೂರ್ಣ ನಿಷೇಧ ಮಾಡಲಾಗಿದೆ ಎಂದು ವಿವರಿಸಿದರು.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ನಡೆಯಲಿದ್ದು, 370ಕ್ಕೂ ಹೆಚ್ಚು ಮಂದಿ ಮತ ಎಣಿಕಾ ಕಾರ್ಯದಲ್ಲಿ ತೊಡಗಿಲಿದ್ದಾರೆ. ಮುಂಜಾಗ್ರತಾ ಕ್ರಮವಾಗಿ 600ಕ್ಕೂ ಹೆಚ್ಚು ಪೊಲೀಸರನ್ನು ಬಂದೋಬಸ್ತ್ ಗೆ ನಿಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.3ಕೆಡಿಬಿಪಿ4- ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮತ ಎಣಿಕೆ ಸಿದ್ದತೆ ವೀಕ್ಷಿಸಿದ ಚುನಾವಣಾಧಿಕಾರಿ ರವೀಂದ್ರ.3ಕೆಡಿಬಿಪಿ5-ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮತ ಎಣಿಕೆಗೆ ಟೇಬಲ್‌ಗಳ ವ್ಯವಸ್ಥೆ.