ಓದು, ಬರಹ ಹವ್ಯಾಸ ಜ್ಞಾನವೃದ್ಧಿಗೆ ಪೂರಕ: ಪ್ರೊ. ರಾಮಮೂರ್ತಿ

KannadaprabhaNewsNetwork |  
Published : May 06, 2026, 01:45 AM IST
4ಕೆಎಂಎನ್ ಡಿ21 | Kannada Prabha

ಸಾರಾಂಶ

ವಿದ್ಯಾರ್ಥಿಗಳು ಓದುವ ಜೊತೆಗೆ ಬರೆಯುವ ಹವ್ಯಾಸ ಬೆಳೆಸಿಕೊಂಡರೆ ಜ್ಞಾನದ ಶಕ್ತಿ ಹೆಚ್ಚಾದರೆ ದೇಶದ ಪ್ರಗತಿಗೆ ನಾಂದಿಯಾಗಲಿದೆ ಎಂದು ವಿಶ್ರಾಂತ ಪ್ರಾಂಶುಪಾಲ ಹಾಗೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರೊ.ಕೆ. ರಾಮಮೂರ್ತಿ ರಾವ್ ಹೇಳಿದರು.

- ಜೆಎಸ್‌ಎಸ್‌ ಕಾಲೇಜಿನಲ್ಲಿ ಸಾಂಸ್ಕೃತಿಕ ಮತ್ತು ಕ್ರೀಡಾ ವೇದಿಕೆಗಳ ಸಮಾರೋಪದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಸಲಹೆ

- ಓದು ಬರಹ

---

ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ

ವಿದ್ಯಾರ್ಥಿಗಳು ಓದುವ ಜೊತೆಗೆ ಬರೆಯುವ ಹವ್ಯಾಸ ಬೆಳೆಸಿಕೊಂಡರೆ ಜ್ಞಾನದ ಶಕ್ತಿ ಹೆಚ್ಚಾದರೆ ದೇಶದ ಪ್ರಗತಿಗೆ ನಾಂದಿಯಾಗಲಿದೆ ಎಂದು ವಿಶ್ರಾಂತ ಪ್ರಾಂಶುಪಾಲ ಹಾಗೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರೊ.ಕೆ. ರಾಮಮೂರ್ತಿ ರಾವ್ ಹೇಳಿದರು.

ಪಟ್ಟಣದ ಜೆಎಸ್‌ಎಸ್‌ ಅನುಭವ ಮಂಟಪದಲ್ಲಿ ಜೆಎಸ್‌ಎಸ್‌ ಮಹಾ ವಿದ್ಯಾಪೀಠ ಜೆಎಸ್‌ಎಸ್‌ ಕಲಾ ಮತ್ತು ವಾಣಿಜ್ಯ ಕಾಲೇಜು ಸಾಂಸ್ಕೃತಿಕ ಮತ್ತು ಕ್ರೀಡಾ ವೇದಿಕೆಗಳ ಸಮಾರೋಪ ಉದ್ಘಾಟಿಸಿ ಮಾತನಾಡಿದರು. ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳು ಭಾಗವಹಿಸಬೇಕು ಎಂದರು.

ಬದ್ಧತೆ ಹಾಗೂ ಶಿಸ್ತು, ಶ್ರದ್ಧೆಯಿಂದ ಮಾಡುವ ಯಾವುದೇ ಕೆಲಸವಾಗಲಿ ಯಶಸ್ಸು ಕಾಣಲಿದೆ. ಓದುವುದೇ ಬದ್ಧತೆಯಲ್ಲ. ಸಹ ಪಠ್ಯ ಚಟುವಟಿಕೆಗಳಲ್ಲೂ ಬದ್ಧತೆ ತೋರಿದರೆ ಭವಿಷ್ಯದಲ್ಲಿ ಒಳ್ಳೆಯದಾಗುತ್ತದೆ ಎಂದರು.

ಇತ್ತೀಚಗೆ ಓದುವ ಹವ್ಯಾಸ ಕಡಿಮೆಯಾಗುತ್ತಿದೆ. ಓದುವ ಹಾಗೂ ಬರೆಯುವ ಹವ್ಯಾಸ ರೂಢಿಸಿಕೊಂಡರೆ ಮೆದುಳಿಗೆ ಎಲ್ಲಾ ವಿಷಯಗಳು ಸೇರಲಿವೆ. ಯುವ ಸಮೂಹ ಹಾಗೂ ವಿದ್ಯಾರ್ಥಿಗಳು ಓದುವ ಹಾಗೂ ಬರೆಯುವ ಕೆಲಸ ಮಾಡಿ ಕಿವಿ ಮಾತು ಹೇಳಿದರು.

ವಿದ್ಯಾರ್ಥಿಗಳಲ್ಲಿ ಧೈರ್ಯ, ಶೀಲತೆ ಹಾಗೂ ನೈಪುಣ್ಯತೆ ಇದ್ದರೆ ಖಂಡಿತ ಯಶಸ್ಸು ಸಿಗಲಿದೆ. ಯಶಸ್ಸು ಸಿಕ್ಕರೆ ಮನುಷ್ಯ ಸಂಪೂರ್ಣ ಪರಿಪೂರ್ಣನಾಗುತ್ತಾನೆ. ಪತ್ರಿಕೆಗಳ ವಾಚಕರ ವಾಣಿಗಳಲ್ಲಿ ಸಮಾಜದ ಓರೆ-ಕೋರೆಗಳ ಬಗ್ಗೆ ಬರೆಯುವ ಹವ್ಯಾಸ ಬೆಳೆಸಿಕೊಳ್ಳಿ ಎಂದರು.

ಎಲ್ಲಾ ಕ್ಷೇತ್ರದಲ್ಲೂ ವಿದ್ಯಾರ್ಥಿಗಳು ಕ್ರಿಯಾಶೀಲರಾದರೆ ಮಾತ್ರ ದೇಶದ ಪ್ರಗತಿ ಹಾಗೂ ಚಿತ್ರಣ ಬದಲಾವಣೆಗೆ ಕಾರಣವಾಗುತ್ತದೆ. ಆ ಕೆಲಸ ವಿದ್ಯಾರ್ಥಿಗಳು ಮಾಡಲಿ ಎಂದು ಸಲಹೆ ನೀಡಿದರು.

ಮುಖ್ಯ ಅತಿಥಿಯಾಗಿದ್ದ ರಾಷ್ಟ್ರಮಟ್ಟದ ಬಾಕ್ಸಿಂಗ್‌ ಪಟು ಯಶಸ್ವಿನಿ ಮಾತನಾಡಿದರು.

ಸಮಾರಂಭದಲ್ಲಿ ಪ್ರಾಂಶುಪಾಲರಾದ ಡಾ.ಪಿ. ಮಹದೇವಮ್ಮ, ದೈಹಿಕ ಶಿಕ್ಷಣ ನಿರ್ದೇಶಕ ಎಂ. ಮಲ್ಲುಸ್ವಾಮಿ, ಸಹಾಯಕ ಪ್ರಾಧ್ಯಾಪಕರಾದ ಡಾ.ಎಚ್.ಪಿ. ಪಂಕಜ, ಎ.ಎಸ್. ಅನಿತಾ, ಕಲಾ ವಿಭಾಗದ ಚೇತನ್‌, ವಾಣಿಜ್ಯ ವಿಭಾಗದ ಮಲ್ಲಿಕಾರ್ಜುನ, ಕ್ರೀಡಾ ವಿಭಾಗದ ನಾಗೇಂದ್ರ ಸೇರಿದಂತೆ ವಿದ್ಯಾರ್ಥಿಗಳಿದ್ದರು.

---

ಗುಂಡ್ಲುಪೇಟೆ: ತಾಲೂಕಿನಲ್ಲಿ ಸುತ್ತೂರು ಜಗದ್ಗುರು ರಾಜೇಂದ್ರ ಶ್ರೀಗಳ ದೂರದೃಷ್ಟಿಯ ಫಲವಾಗಿ ಕಾಲೇಜು ಆರಂಭಿಸಿದ್ದ ಫಲವಾಗಿ ಸಾವಿರಾರು ವಿದ್ಯಾರ್ಥಿಗಳು ಅದರಲ್ಲೂ ವಿದ್ಯಾರ್ಥಿನಿಯರು ಮುಖ್ಯ ವಾಹಿನಿಗೆ ಬರಲು ಕಾರಣರಾಗಿದ್ದಾರೆ ಎಂದು ಜೆಎಸ್‌ಎಸ್‌ ಮಹಾ ವಿದ್ಯಾಪೀಠದ ಕಾಲೇಜು ವಿಭಾಗದ ನಿರ್ದೇಶಕ ಪ್ರೊ.ಮೊರಬದ ಮಲ್ಲಿಕಾರ್ಜುನ ಹೇಳಿದರು.ರಾಜೇಂದ್ರ ಶ್ರೀಗಳ ಕಾಳಜಿಯಿಂದ ಗುಂಡ್ಲುಪೇಟೆಯಲ್ಲಿ ಜೆಎಸ್‌ಎಸ್‌ ಸಂಸ್ಥೆ ಹೆಸರಲ್ಲಿ ಪ್ರೌಢ ಶಾಲೆ, ಕಾಲೇಜು ಸ್ಥಾಪನೆ ಮಾಡಿದ್ದು ನಿಮ್ಮೆಲ್ಲರು ಶೈಕ್ಷಣಿಕವಾಗಿ ಮುಂದೆ ಬರಲಿ ಕಾರಣೀಭೂತರು ಎಂದರು.

ಜೆಎಸ್‌ಎಸ್‌ ಸಂಸ್ಥೆ ಶಾಲಾ, ಕಾಲೇಜು ಆರಂಭಕ್ಕೆ ಸೀಮಿತವಾಗದೆ, ರಂಗೋತ್ಸವದ ಮೂಲಕ ಜನಪದಕ್ಕೂ ಅವಕಾಶ ಮಾಡಿ ಕೊಟ್ಟಿದೆ. ಈ ಎಲ್ಲಾ ಅವಕಾಶಗಳನ್ನು ಬಳಸಿಕೊಂಡು ಪ್ರಗತಿಯತ್ತ ಹೆಜ್ಜೆ ಹಾಕಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.---೫ಜಿಪಿಟಿ೧

ಗುಂಡ್ಲುಪೇಟೆಯಲ್ಲಿ ಸಾಂಸ್ಕೃತಿಕ ಮತ್ತು ಕ್ರೀಡಾ ವೇದಿಕೆಗಳ ಸಮಾರೋಪದಲ್ಲಿ ರಾಜೇಂದ್ರ ಶ್ರೀಗಳ ಭಾವಚಿತ್ರಕ್ಕೆ ರಾಜ್ಯೋತ್ಸವ ಪುರಸ್ಕೃತ ಪ್ರೊ.ಕೆ. ರಾಮಮೂರ್ತಿ ಪುಷ್ಪಾರ್ಚನೆ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಂಚಮಸಾಲಿ ಸಮಾಜದ ಸಂಕಲ್ಪ ಈಡೇರಿಸದ ಟ್ರಸ್ಟ್
ಗುಡಾಳ್‌ನಲ್ಲಿ ನೀರಿನ ಬವಣೆ ನೀಗಿಸಿದ ಶಾಸಕ ಬಸವಂತಪ್ಪ