ಮೂಲ್ಕಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಆಡಳಿತ ವೈಫಲ್ಯದಿಂದಾಗಿ ಇಂದು ಅಡುಗೆ ಅನಿಲದ ಕೃತಕ ಅಭಾವ ಎದುರಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ಎಂ ರೈ ಹೇಳಿದರು.ಹಳೆಯಂಗಡಿ ಹರಿ ಓಂ ಸಭಾಭವನದಲ್ಲಿ ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಮಾಸಿಕ ಸಭೆ ಉದ್ದೇಶಿಸಿ ಮಾತನಾಡಿದರು.
ಕೆಪಿಸಿಸಿ ಸದಸ್ಯರಾದ ವಸಂತ ಬರ್ನಾಡ್ ಪಕ್ಷ ಸಂಘಟನೆ ಬಗ್ಗೆ ಸಲಹೆ ನೀಡಿದರು.
ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೋಹನ್ ಕೋಟ್ಯಾನ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮೂಲ್ಕಿ ಬ್ಲಾಕ್ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಮಂಜುನಾಥ ಕಂಬಾರ, ನಾಯಕರಾದ ಗೋಪಿನಾಥ ಪಡಂಗ, ಮೋನಪ್ಪ ಶೆಟ್ಟಿ ಎಕ್ಕಾರು, ಹಸನಬ್ಬ ಬಾಳ, ಉಲ್ಲಾಸ್ ಶೆಟ್ಟಿ ಪೆರ್ಮುದೆ, ಸುಬ್ರಹ್ಮಣ್ಯ ಭಟ್ ಶಿಬರೂರು, ಮಹಿಳಾ ಕಾಂಗ್ರೆಸ್ ಅಧ್ಯಕ್ಷ ವಿಲ್ಮಾ ಡಿಕೊಸ್ಥ, ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಿತ್ ಪೂಜಾರಿ ಮುಲ್ಕಿ ಮೊದಲಾದವರು ಇದ್ದರು. ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ಕೌನ್ಸಿಲರ್ ಪ್ರಕಾಶ್ ಆಚಾರ್ಯ ನಿರೂಪಿಸಿದರು.