ಬಿಜೆಪಿ ಜನ ವಿರೋಧಿ ನೀತಿ ವಿರುದ್ಧ ಹೋರಾಟಕ್ಕೆ ಸಜ್ಜಾಗಿ: ವಿನಯಕುಮಾರ್ ಸೊರಕೆ

KannadaprabhaNewsNetwork |  
Published : Aug 20, 2025, 02:00 AM IST
ಪೊಟೋ೧೯ಎಸ್.ಆರ್.ಎಸ್೫ (ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಾಲಯದಲ್ಲಿ ಜಿಲ್ಲಾ ಪ್ರಚಾರ ಸಮಿತಿಯ ಪದಾಧಿಕಾರಿಗಳ ಸಭೆಯಲ್ಲಿ ವಿನಯಕುಮಾರ ಸೊರಕೆ ಮಾತನಾಡಿದರು.) | Kannada Prabha

ಸಾರಾಂಶ

ಬಿಜೆಪಿಯ ಜನ ವಿರೋಧಿ ನೀತಿ ವಿರುದ್ಧ ಸಂಘಟನಾತ್ಮಕ ಹೋರಾಟಕ್ಕೆ ಸಜ್ಜಾಗಿ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಅವರು ಶಿರಸಿಯಲ್ಲಿ ನಡೆದ ಜಿಲ್ಲಾ ಪ್ರಚಾರ ಸಮಿತಿಯ ಪದಾಧಿಕಾರಿಗಳ ಸಭೆಯಲ್ಲಿ ಕರೆ ನೀಡಿದರು.

ಶಿರಸಿ: ಬಿಜೆಪಿಯ ಜನ ವಿರೋಧಿ ನೀತಿ ವಿರುದ್ಧ ಸಂಘಟನಾತ್ಮಕ ಹೋರಾಟಕ್ಕೆ ಸಜ್ಜಾಗಿ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಹೇಳಿದರು.

ಸೋಮವಾರ ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಾಲಯದಲ್ಲಿ ಜಿಲ್ಲಾ ಪ್ರಚಾರ ಸಮಿತಿಯ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಸಂವಿಧಾನದಲ್ಲಿ ನಂಬಿಕೆ ಇಟ್ಟು ಸಮಾನತೆ ಮತ್ತು ಜಾತ್ಯತೀತ ಭಾವನೆಯಿಂದ ದೇಶವನ್ನು ಅಭಿವೃದ್ಧಿಯತ್ತ ಸಾಗಿಸುವ ಕಾರ್ಯ ಮಾಡಿದೆ. ಆದರೆ, ಬಿಜೆಪಿ ಧಾರ್ಮಿಕ ಭಾವನೆಯಿಂದ ಜನ ಸಾಮಾನ್ಯರನ್ನು ಕೆದಕಿ, ದೇಶದ ಏಕತೆಗೆ ಭಂಗ ತರುವ ಸಂಸ್ಕೃತಿಯನ್ನು ಅಳವಡಿಸಿಕೊಂಡಿರುವುದು ಖೇದಕರ. ಕೇಂದ್ರ ಸರ್ಕಾರ ಚುನಾವಣೆ ಆಯೋಗ, ಇಡಿ, ಸಿಬಿಐ ಸಂಸ್ಥೆ ಮೂಲಕ ವಿರೋಧ ಪಕ್ಷದ ನಾಯಕರ ಹತ್ತಿಕ್ಕುವ ಕಾರ್ಯ ಮಾಡುತ್ತಿರುವುದು ಖಂಡನಾರ್ಹ ಎಂದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಾಯಿನಾಥ ಗಾವಂಕರ ಮಾತನಾಡಿ, ಜಿಲ್ಲೆಯಲ್ಲಿ ಕ್ರಿಯಾಶೀಲ ಕಾಂಗ್ರೆಸ್ ಕಾರ್ಯಕರ್ತರ ಪಡೆ ರಚಿಸಲು ಸನ್ನದ್ಧವಾಗಿದೆ. ಮುಂದಿನ ತಾಪಂ ಮತ್ತು ಜಿಪಂ ಚುನಾವಣೆಯಲ್ಲಿ ಪಕ್ಷ ಸದೃಢವಾಗಿ ಸಂಘಟಿಸಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ರಾಜ್ಯ ಸಮಿತಿಯ ಉಪಾಧ್ಯಕ್ಷ ಮುನೀರ್, ಜೆ.ಡಿ. ನಾಯ್ಕ, ಸಂಯೋಜಕ ಶಂಭು ಶೆಟ್ಟಿ, ಕೊ ಆಡಿನೇಟರ್ ಜ್ಯೋತಿ ಗೌಡ ಪಾಟೀಲ್, ಚಂದ್ರಶೇಖರ ಪುತ್ತೂರು, ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಕೀರ್ತಿ ಗಾವಂಕರ್ ಹಳಿಯಾಳ, ಪ್ರಮುಖರಾದ ವೆಂಕಟೇಶ ಹೆಗಡೆ ಹೊಸಬಾಳೆ, ಹೊನ್ನಪ್ಪ ನಾಯ್ಕ ಕುಮಟಾ, ಅಬ್ಬಾಸ ತೋನ್ಸೆ, ರಾಜು ಉಗ್ರಾಣಕರ್, ನಾಗರಾಜ ಮಡಿವಾಳ ಮತ್ತಿತರರು ಉಪಸ್ಥಿತರಿದ್ದರು.

ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ರವೀಂದ್ರ ನಾಯ್ಕ ಸ್ವಾಗತಿಸಿದರು. ಶಿರಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಶ ಗೌಡ ವಂದಿಸಿದರು. ಕಾರ್ಯಕ್ರಮದಲ್ಲಿ ನೂರಾರು ಕಾಂಗ್ರೆಸ್‌ ಕಾರ್ಯಕರ್ತರು ಪಾಲ್ಗೊಂಡಿದ್ದರು.

PREV

Recommended Stories

ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಎಮ್ಮೆ ಕೊಡಿಸುವುದಾಗಿ ಪ್ರೇಮ್‌ಗೆ ವಂಚನೆ : ₹4.75 ಲಕ್ಷ ಮೋಸ