ಮಂಡ್ಯದಲ್ಲಿ ನೂರು ಎಕರೆ ಭೂಮಿ ನೀಡಲು ಸಿದ್ಧ: ರಾಜ್ಯ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ಪತ್ರ

KannadaprabhaNewsNetwork |  
Published : Feb 11, 2026, 02:00 AM IST
ಬಳ್ಳಾರಿಯ ಸಾಂಸ್ಕೃತಿಕ ಸಮುಚ್ಛಯದ ಹೊಂಗಿರಣ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಕಾಯಕ ಶರಣರ ಜಯಂತಿಯನ್ನು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಉದ್ಘಾಟಿಸಿದರು.  | Kannada Prabha

ಸಾರಾಂಶ

ಆಟೋಮೊಟಿವ್ ರಿಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾ ಅವರು ನೇರವಾಗಿ ಮಾಣಿಕ್ಯ ಮತ್ತು ಕೈಗಾರಿಕಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅವರನ್ನು ಸಂಪರ್ಕಿಸಿ ಯೋಜನೆ ಅನುಷ್ಠಾನಕ್ಕೆ ಅಗತ್ಯವಾದ ಸಲಹೆ, ಸಹಕಾರ ಮತ್ತು ಮಾಹಿತಿಯನ್ನು ಪಡೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಡ್ಯ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸುಮಾರು ₹500 ಕೋಟಿ ವೆಚ್ಚದಲ್ಲಿ ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾ ಸಂಶೋಧನಾ ಕೇಂದ್ರ ತೆರೆಯಲು 105 ಎಕರೆ ಭೂಮಿ ನೀಡಲು ಸಿದ್ಧ ಎಂದು ರಾಜ್ಯ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ಘೋಷಿಸಿದ್ದಾರೆ. ಕೇಂದ್ರ ಸಚಿವ ಎಚ್.ಡಿ .ಕುಮಾರಸ್ವಾಮಿ ಅವರು ಕಳೆದ ಮೂರು ದಿನಗಳ ಹಿಂದೆ ಉದ್ದೇಶಿತ ಯೋಜನೆಯನ್ನು ಜಾರಿ ಮಾಡಲು ನೂರು ಎಕರೆ ಭೂಮಿ ಅಗತ್ಯವಿದ್ದು, ಆದಷ್ಟು ಬೇಗ ಭೂಮಿಯನ್ನು ಮಂಜೂರು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಈ ಪತ್ರದ ಕುರಿತಂತೆ ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ಅವರಿಗೆ ಭೂಮಿ ಗುರುತಿಸುವಂತೆ ಸೂಚಿಸಲಾಗಿತ್ತು. ಅದರಂತೆ ಮಂಡ್ಯ ತಾಲೂಕು ಬಸರಾಳು ಹೋಬಳಿಯ ಮುದ್ದನಘಟ್ಟ ಮತ್ತು ಹೆಗ್ಗಡತಿ ಹಳ್ಳಿ ಬಳಿ 100 ಎಕರೆ ಸರ್ಕಾರಿ ಭೂಮಿ ಕಾಲಿ ಇರುವುದಾಗಿ ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ. ಹಾಲಿ ಗುರುತಿಸಿರುವ ಭೂಮಿ ನಾಗಮಂಗಲ-ಮಂಡ್ಯ ರಾಜ್ಯ ಹೆದ್ದಾರಿಗೆ 500 ಮೀಟರ್ ದೂರದಲ್ಲಿದೆ ಎಂದು ತಿಳಿಸಿದ್ದಾರೆ ಆದಕಾರಣ ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾ ಮತ್ತು ಕೇಂದ್ರ ಬೃಹತ್ ಕೈಗಾರಿಕಾ ಸಚಿವಾಲಯದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಜಂಟಿ ಪರಿಶೀಲನೆ ನಡೆಸಿ ಉದ್ದೇಶಿತ ಜಾಗ ಯೋಜನೆ ವಿಸ್ತರಣೆಗೆ ಪೂರಕವಾಗಿದೆಯೇ ಎಂಬುದನ್ನು ಖಚಿತಪಡಿಸಿದರೆ ಭೂಮಿಯನ್ನು ಮಂಜೂರು ಮಾಡುವುದಾಗಿ ಸಚಿವ ಎಂ.ಬಿ. ಪಾಟೀಲ್ ಭರವಸೆ ನೀಡಿದ್ದಾರೆ. ಆಟೋಮೊಟಿವ್ ರಿಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾ ಅವರು ನೇರವಾಗಿ ಮಾಣಿಕ್ಯ ಮತ್ತು ಕೈಗಾರಿಕಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅವರನ್ನು ಸಂಪರ್ಕಿಸಿ ಯೋಜನೆ ಅನುಷ್ಠಾನಕ್ಕೆ ಅಗತ್ಯವಾದ ಸಲಹೆ, ಸಹಕಾರ ಮತ್ತು ಮಾಹಿತಿಯನ್ನು ಪಡೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ.

--

ಏನಿದು ARAI?ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆಗಳ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಪ್ರಮುಖ ಸ್ವಾಯತ್ತ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ‌ ಇದಾಗಿದ್ದು, ಭಾರತೀಯ ಆಟೋಮೋಟಿವ್ ಉದ್ಯಮದಲ್ಲಿ ಪರೀಕ್ಷೆ, ಪ್ರಮಾಣೀಕರಣ ಮತ್ತು ಸಂಶೋಧನೆಗೆ ಪ್ರಮುಖ ಪ್ರಾಧಿಕಾರವಾಗಿ ಕಾರ್ಯನಿರ್ವಹಿಸುತ್ತಿದೆ. ಪುಣೆಯ ಇದರ ಕೇಂದ್ರ ಸ್ಥಾನವಿದ್ದು, ವಾಹನಗಳ ಸುರಕ್ಷಿತ, ಮಾಲಿನ್ಯ ನಿವಾರಣೆ ಮತ್ತು ತಾಂತ್ರಿಕ ಗುಣಮಟ್ಟ ಸೇರಿದಂತೆ ವಿವಿಧ ಮಾನದಂಡಗಳಿಗೆ ಅನುಗುಣವಾಗಿ ಸರಕಾರ ಮತ್ತು ಆಟೋಮೊಬೈಲ್ ಉದ್ಯಮದ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗರ್ಭಕಂಠ ಕ್ಯಾನ್ಸರ್ ಮುಕ್ತ ಜಿಲ್ಲೆಯನ್ನಾಗಿಸಲು ಕೈಜೋಡಿಸಿ: ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ
ಮಹನೀಯರ ಜಯಂತಿಗೆ ದೇಣಿಗೆ ನೀಡುವೆ ಎಂದು ಶಿವಲಿಂಗೇಗೌಡ