ಹೆಸ್ಕಾಂನ ಎಲ್ಲಾ ಸಮಸ್ಯೆಗಳ ಇತ್ಯರ್ಥಪಡಿಸಲು ಸಿದ್ಧ: ಶಾಸಕ ಬಸವರಾಜ ಶಿವಣ್ಣನವರ

KannadaprabhaNewsNetwork |  
Published : Feb 11, 2026, 02:30 AM IST
ಪಟ್ಟಣದ ಹೆಸ್ಕಾಂ ಇಲಾಖೆಗೆ ಮಂಜೂರಾಗಿರುವ ನಿರಂತರ ಜಂಗಲ್ ಕಟಾವು ವಾಹನಕ್ಕೆ ಶಾಸಕ ಬಸವರಾಜ ಶಿವಣ್ಣನವರ ಚಾಲನೆ ನೀಡಿದರು. | Kannada Prabha

ಸಾರಾಂಶ

ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಕ್ಕೆ ತಕ್ಕಂತೆ ನಾವೆಲ್ಲರೂ ಹೊಂದಿಕೊಳ್ಳಬೇಕಾಗಿದೆ. ಅದರಲ್ಲೂ ಕೃಷಿಕ್ಷೇತ್ರವನ್ನು ಇನ್ನಷ್ಟು ಚುರುಕುಗೊಳಿಸಬೇಕಾಗಿದ್ದು, ಅದಕ್ಕೆ ಪೂರಕವಾಗಿ ಹೆಸ್ಕಾಂನ ಎಲ್ಲಾ ಸಮಸ್ಯೆಗಳನ್ನು ಇತ್ಯರ್ಥಪಡಿಸುವುದಾಗಿ ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.

ಬ್ಯಾಡಗಿ: ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಕ್ಕೆ ತಕ್ಕಂತೆ ನಾವೆಲ್ಲರೂ ಹೊಂದಿಕೊಳ್ಳಬೇಕಾಗಿದೆ. ಅದರಲ್ಲೂ ಕೃಷಿಕ್ಷೇತ್ರವನ್ನು ಇನ್ನಷ್ಟು ಚುರುಕುಗೊಳಿಸಬೇಕಾಗಿದ್ದು, ಅದಕ್ಕೆ ಪೂರಕವಾಗಿ ಹೆಸ್ಕಾಂನ ಎಲ್ಲಾ ಸಮಸ್ಯೆಗಳನ್ನು ಇತ್ಯರ್ಥಪಡಿಸುವುದಾಗಿ ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.

ಪಟ್ಟಣದ ಹೆಸ್ಕಾಂ ಇಲಾಖೆಗೆ ಮಂಜೂರಾಗಿರುವ ನಿರಂತರ ಜಂಗಲ್ ಕಟಾವು ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಹೆಸ್ಕಾಂ ಇಲಾಖೆ ದಿನದ 24 ಗಂಟೆಯೂ ಎಚ್ಚರವಿರುವ ಹಾಗೂ ಅಷ್ಟೇ ಜವಾಬ್ದಾರಿಯಿಂದ ವರ್ತಿಸಬೇಕಾದ ಇಲಾಖೆಯಾಗಿದೆ. ಬಹಳಷ್ಟು ದಿನಗಳ ಬೇಡಿಕೆಯಾಗಿದ್ದ ಜಂಗಲ್ ಕಟಾವು ವಾಹನ ಮಂಜೂರಾತಿಯಿಂದ ಖುಷಿ ತಂದಿದ್ದು ರೈತರು ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ದುರಪಯೋಗವಾಗದಿರಲಿ: ಸರ್ಕಾರ ಹೆಸ್ಕಾಂ ಇಲಾಖೆಯ ಸಮಸ್ಯೆಗಳನ್ನು ಸರಳೀಕರಣಗೊಳಿಸುವ ನಿಟ್ಟಿನಲ್ಲಿ ವಾಹನವನ್ನು ಮಂಜೂರಾತಿ ನೀಡಿದ್ದು ಯಾವುದೇ ಕಾರಣಕ್ಕೂ ಇದರ ದುರುಪಯೋಗವಾಗದಿರಲಿ, ಇಲ್ಲಿಯೂ ರೈತರಿಂದ ಹಣ ಪಡೆದುಕೊಳ್ಳುವುದಾಗಲಿ ಅಥವಾ ಇನ್ನಿತರ ಉದ್ದೇಶಗಳಿಗೆ ಸದರಿ ವಾಹನ ಬಳಕೆ ಮಾಡದಂತೆ ಸರ್ಕಾರದ ಮೂಲ ಉದ್ದೇಶಗಳನ್ನು ಜನರಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಇಲಾಖೆಯಿಂದ ಅಧಿಕಾರಿಗಳಿಂದ ನಿರೀಕ್ಷಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕಾಧ್ಯಕ್ಷ ಶಂಭನಗೌಡ ಪಾಟೀಲ ಸೇರಿದಂತೆ ಹೆಸ್ಕಾಂ ಸಲಹಾ ಸಮಿತಿ ಸದಸ್ಯರಾದ ಮಂಜುನಾಥ ಹಂಜಗಿ, ಮಾಲತೇಶ ಆಡಿನವರ, ಹೈದರಲಿ ಬೆಂಗಳೂರಿ, ಮಾಲತೇಶ ಶಿಡ್ಲಣ್ಣವರ, ಹೆಸ್ಕಾಂ ಎಇಇ ರಾಜು ಅರಳಿಕಟ್ಟಿ, ಮಾಲತೇಶ ಹುಣಸೀಮರದ, ಮಾಲತೇಶ ಕುರುಬಗೊಂಡ ಸೇರಿದಂತೆ ಇನ್ನಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲಕ್ಷ್ಮೇಶ್ವರ ತಾಲೂಕು ಸಾಹಿತ್ಯ ಸಮ್ಮೇಳನಾಧ್ಯಕ್ಷೆ ಲಲಿತಾ ಕೆರಿಮನಿಗೆ ಅಧಿಕೃತ ಆಹ್ವಾನ
ನಿಸ್ವಾರ್ಥ ಕಾಯಕವೇ ಶರಣತ್ವದ ಮಾರ್ಗ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ