ರಿಯಲ್ ಎಸ್ಟೇಟ್‌, ವೈಯಕ್ತಿಕ ಹಿತಾಸಕ್ತಿಗಾಗಿ ಪ್ರಸ್ತಾವನೆ

KannadaprabhaNewsNetwork |  
Published : Jul 11, 2024, 01:31 AM IST
10ಕೆಆರ್ ಎಂಎನ್ 4.ಜೆಪಿಜಿರೇಷ್ಮೆ ಅಭಿವೃದ್ಧಿ ನಿಗಮ ಮಂಡಳಿ ಮಾಜಿ ಅಧ್ಯಕ್ಷ ಗೌತಮ್ ಗೌಡ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. | Kannada Prabha

ಸಾರಾಂಶ

ರಾಮನಗರ: ರಿಯಲ್ ಎಸ್ಟೇಟ್ ಹಾಗೂ ವೈಯಕ್ತಿಕ ಹಿತಾಸಕ್ತಿಗಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ನಿಯೋಗ ರಾಮನಗರ ಜಿಲ್ಲೆ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವನೆ ಸಲ್ಲಿಸಿದೆ ಎಂದು ರೇಷ್ಮೆ ಅಭಿವೃದ್ಧಿ ನಿಗಮ ಮಂಡಳಿ ಮಾಜಿ ಅಧ್ಯಕ್ಷ ಗೌತಮ್ ಗೌಡ ಟೀಕಿಸಿದರು.

ರಾಮನಗರ: ರಿಯಲ್ ಎಸ್ಟೇಟ್ ಹಾಗೂ ವೈಯಕ್ತಿಕ ಹಿತಾಸಕ್ತಿಗಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ನಿಯೋಗ ರಾಮನಗರ ಜಿಲ್ಲೆ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವನೆ ಸಲ್ಲಿಸಿದೆ ಎಂದು ರೇಷ್ಮೆ ಅಭಿವೃದ್ಧಿ ನಿಗಮ ಮಂಡಳಿ ಮಾಜಿ ಅಧ್ಯಕ್ಷ ಗೌತಮ್ ಗೌಡ ಟೀಕಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮನಗರ ಮತ್ತು ಪ್ರಭು ಶ್ರೀರಾಮನಿಗೂ ನಂಟಿದೆ. ಶ್ರೀರಾಮನ ಹೆಸರಿನಿಂದಲೇ ರಾಮನಗರ ಜಿಲ್ಲೆ ಪ್ರಾರಂಭವಾಗುತ್ತಿದೆ. ಜಿಲ್ಲೆಯ ಹೆಸರು ಬದಲಾವಣೆಗೂ ಮುನ್ನಾ ಸರ್ವ ಪಕ್ಷದ ಮುಖಂಡರ ನೇತೃತ್ವದಲ್ಲಿ ಚರ್ಚಿಸಬೇಕು. ಜತೆಗೆ, ಹೆಸರು ಬದಲಾವಣೆ ಕುರಿತು ಜನಾಭಿಪ್ರಾಯ ಸಂಗ್ರಹಿಸಬೇಕು ಎಂದು ಆಗ್ರಹಿಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಹೆಸರು ಬದಲಾವಣೆ ಸಂಬಂಧ ನಿಯೋಗ ನೀಡಿರುವ ಪ್ರಸ್ತಾವನೆಯನ್ನು ಸಿಎಂ ಸಿದ್ದರಾಮಯ್ಯ ಅವರು ತಿರಸ್ಕರಿಸಬೇಕು. ಇಲ್ಲವಾದರೆ ಬಿಜೆಪಿ ಸಂಘ ಸಂಸ್ಥೆಗಳು ಹಾಗೂ ಜನರ ಅಭಿಪ್ರಾಯ ಸಂಗ್ರಹಿಸಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಕಳೆದ 10 ವರ್ಷದಿಂದ ಕಾಂಗ್ರೆಸ್ಸಿಗರಿಗೆ ಶ್ರೀರಾಮನ ಹೆಸರು ಕೇಳಿದರೆ ಬಾರಿ ಸಂಕಟವಾಗುತ್ತಿದೆ. ಒಂದು ವರ್ಗದವರಿಗೆ ಸಂತೃಪ್ತಿಗೊಳಿಸಬೇಕೆಂಬ ಕಾರಣದಿಂದಾಗಿ ಜಿಲ್ಲೆಯ ಹೆಸರು ಬದಲಾವಣೆ ಮಾಡಲು ಕಾಂಗ್ರೆಸ್ ನಾಯಕರು ಮನಸ್ಸು ಮಾಡಿದಂತೆ ಇದೆ. ಇದಕ್ಕೆಲ್ಲ ಅವಕಾಶ ನೀಡಬಾರದು ಎಂದು ಆಗ್ರಹಿಸಿದರು.ಬಿಜೆಪಿಯು ಅಭಿವೃದ್ಧಿಯ ರಾಜಕಾರಣವನ್ನು ಒಪ್ಪುತ್ತದೆ. ಜಿಲ್ಲೆಯ ಹೆಸರು ಬದಲಾವಣೆ ಮಾಡಿದರೆ, ಅಭಿವೃದ್ಧಿ ಆಗುವುದಾದರೆ ರಾಜ್ಯದ ಇತರೆ ಜಿಲ್ಲೆಗಳಿಗೂ ಬೆಂಗಳೂರು 1,2,3 ಎಂದು ಮರು ನಾಮಕರಣ ಮಾಡಲಿ ಎಂದು ಸವಾಲು ಎಸೆದರು.

ಈ ಹಿಂದೆ ಬಿಜೆಪಿ ಸರ್ಕಾರ ಆಡಳಿತ ನಡೆಸುವ ವೇಳೆ ನಮ್ಮದೆ ಪಕ್ಷದ ಶಾಸಕರು ರಾಮನಗರವನ್ನು ನವ ಬೆಂಗಳೂರು ಎಂದು ಘೋಷಣೆ ಮಾಡುವಂತೆ ಪ್ರಸ್ತಾವನೆ ಸಲ್ಲಿಸಿದ್ದರು. ಈ ಬಗ್ಗೆ ಜನರ ಅಭಿಪ್ರಾಯ ಸಂಗ್ರಹಿಸಿ, ಅದನ್ನು ಅರ್ಧಕ್ಕೆ ನಿಲ್ಲಿಸಲಾಗಿತ್ತು. ಜಿಲ್ಲೆಯ ಹೆಸರು ಬದಲಾವಣೆ ಹಿಂದೆ ರಿಯಲ್ ಎಸ್ಟೇಟ್ ಹಾಗೂ ವೈಯಕ್ತಿಕ ಹಿತಾಸಕ್ತಿ ಅಡಗಿದೆ. ಈ ವಿಚಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ್ದ ಪ್ರಸ್ತಾವನೆಯಲ್ಲಿಯೇ ಉಲ್ಲೇಖವಾಗಿದೆ. ಕೇವಲ ಬೆರಳೆಣಿಕೆ ಮಂದಿಗೆ ಅನುಕೂಲ ಮಾಡಲು ಹೋಗಿ ಉಪಮುಖ್ಯಮಂತ್ರಿಗಳು ಜಿಲ್ಲೆಯ ಜನತೆ ಆಕ್ರೋಶಕ್ಕೆ ತುತ್ತಾಗುತ್ತಿದ್ದಾರೆ ಎಂದರು.

ತುಂಡು ಭೂಮಿ ಅಥವಾ ಒಂದು ಎಕರೆ ಭೂಮಿ ಉಳ್ಳವರು ಯಾರು ರಿಯಲ್ ಎಸ್ಟೇಟ್ ಮಾಡುತ್ತಿಲ್ಲ. ನೂರಾರು ಎಕರೆ ಭೂಮಿ ಹೊಂದಿರುವ ಕೆಲವರು ಮಾತ್ರ ರಿಯಲ್ ಎಸ್ಟೇಟ್ ವ್ಯಾಪಾರ ಮಾಡತ್ತಿದ್ದಾರೆ. ಹೆಸರು ಬದಲಾವಣೆಯಿಂದ ಅವರಿಗೆ ಮಾತ್ರ ಲಾಭವಾಗಲಿದೆ ಎಂದು ಗೌತಮ್ ಗೌಡ ಹೇಳಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಆನಂದಸ್ವಾಮಿ, ಮುಖಂಡರಾದ ರುದ್ರದೇವರು, ಶಿವಾನಂದ, ಎಸ್.ಆರ್.ನಾಗರಾಜು, ಕಾಳಯ್ಯ, ಸುರೇಶ್, ಜೆಡಿಎಸ್ ಮುಖಂಡರಾದ ಜಯಕುಮಾರ್, ಕೆಂಪರಾಜು ಇತರರಿದ್ದರು.ಕೋಟ್ .............ಬಗರ್ ಹುಕುಂ ಸಮಿತಿಗೆ ಸಾಮಾನ್ಯವಾಗಿ ಸ್ಥಳೀಯ ಶಾಸಕರು ಮಾತ್ರ ಅಧ್ಯಕ್ಷರಾಗಿರುತ್ತಾರೆ. ಆದರೆ, ಕನಕಪುರದಲ್ಲಿ ಮಾತ್ರ ಬದಲಾಗಿದ್ದು ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಬಗರ್ ಹುಕುಂ ಸಮಿತಿಗೆ ಅಧ್ಯಕ್ಷರಾಗಿದ್ದಾರೆ. ಇವರ ವೈಯಕ್ತಿಕ ಆಸ್ತಿಗಳ ಮೌಲ್ಯ ಹೆಚ್ಚಿಸಿಕೊಳ್ಳಲು ಹೆಸರು ಬದಲಾವಣೆ ತಂತ್ರ ಮಾಡಿದ್ದಾರೆ. ಸುರೇಶ್ ಅವರು ಸಮಿತಿಯ ಅಧ್ಯಕ್ಷರಾಗಿರುವುದು ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆ ಹೆಸರಿಗೆ ಪ್ರಸ್ತಾವನೆ ಸಲ್ಲಿಸಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.-ಗೌತಮ್‌ಗೌಡ, ಮಾಜಿ ಅಧ್ಯಕ್ಷರು, ರೇಷ್ಮೆ ಅಭಿವೃದ್ಧಿ ನಿಗಮ ಮಂಡಳಿ10ಕೆಆರ್ ಎಂಎನ್ 4.ಜೆಪಿಜಿರೇಷ್ಮೆ ಅಭಿವೃದ್ಧಿ ನಿಗಮ ಮಂಡಳಿ ಮಾಜಿ ಅಧ್ಯಕ್ಷ ಗೌತಮ್‌ಗೌಡ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

PREV

Recommended Stories

ತುಮಕೂರಲ್ಲಿ 20 ನವಿಲುಗಳ ಸಾವು
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ