)
ಉಡುಪಿ : ಅರ್ಜಿಗಳ ಮೂಲಕ ಅಥವಾ ಶಿಫಾರಸು ಮೂಲಕ ಪ್ರಶಸ್ತಿಗಳನ್ನು ಗಳಿಸುವುದು ಸಾಮಾನ್ಯವಾಗಿಬಿಟ್ಟಿದೆ. ಆದರೆ ಸಾಧನೆಯನ್ನು ಹುಡುಕಿಕೊಂಡು ಪ್ರಶಸ್ತಿ ಬರಬೇಕು, ಅದು ನಿಜವಾದ ಗೌರವ, ಉಡುಪಿಯ ಸಾಹಿತ್ಯ ಪರಿಚಾರಕ ರವಿರಾಜ್ ಎಚ್.ಪಿ. ಅವರಿಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಅರ್ಹವಾಗಿಯೇ ಸಂದಿದೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.
ಅಭ್ಯಾಗತರಾಗಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷ ವಿಶ್ವನಾಥ್ ಶೆಣೈ, ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಹರಿಶ್ಚಂದ್ರ, ಕೋಟ ಶಿವರಾಮ ಕಾರಂತ ಪ್ರತಿಷ್ಠಾನ ಅಧ್ಯಕ್ಷ ಗಣನಾಥ ಎಕ್ಕಾರು ಆಗಮಿಸಿದ್ದರು, ಉರಗತಜ್ಞ ಗುರುರಾಜ್ ಸನಿಲ್ ಅಭಿನಂದನಾ ನುಡಿಗಳನ್ನಾಡಿದರು. ವೇದಿಕೆಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಕಾರ್ಯಾಧ್ಯಕ್ಷ ಕುಮಾರ್ ಪ್ರಸಾದ್, ಅಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ, ಉಪಾಧ್ಯಕ್ಷ ಲಕ್ಷ್ಮಣ ಕೊಳ್ಕರ್ ಉಪಸ್ಥಿತರಿದ್ದರು.ಬಳಗದ ಗೌರವಾಧ್ಯಕ್ಷ ಜನಾರ್ದನ ಕೊಡವೂರು ಪ್ರಾಸ್ತಾವಿಕ ಮಾತನಾಡಿದರು. ರಾಜೇಶ್ ಭಟ್ ಫಣಿಯಾಡಿ ಸ್ವಾಗತಿಸಿದರು. ರಾಘವೇಂದ್ರ ಕರ್ವಾಲು ಕಾರ್ಯಕ್ರಮ ನಿರೂಪಿಸಿದರು.