-ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದ ಶಾಸಕರು
ದಾಬಸ್‍ಪೇಟೆ: ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು ಹಾಗೂ ಅನುದಾನದ ಬಗ್ಗೆ ಅಧಿವೇಶನದಲ್ಲಿ ಸರ್ಕಾರದ ಗಮನಕ್ಕೆ ಸೆಳೆದಿದ್ದೇನೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.ನೆಲಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಲ್ಲೂರು, ತೊರೆರಾಂಪುರ, ತೊರೆಚನ್ನಹಳ್ಳಿ ಗ್ರಾಮಗಳಲ್ಲಿ ಸುಮಾರು 3 ಕೋಟಿ ವೆಚ್ಚದ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ಶಾಸಕರ ಕ್ಷೇತ್ರಕ್ಕೆ ಗಂಗಾಜಲ, ಕಾಂಗ್ರೆಸ್ ಶಾಸಕರ ಕ್ಷೇತ್ರಕ್ಕೆ ಕೊಳಚೆ ನೀರು ಆಗಲು ಸಾಧ್ಯವೇ ಎಂದು ಪ್ರಶ್ನಿಸಿದ ಅವರು, ನೆಲಮಂಗಲ ತಾಲೂಕಿನ ಕೆರೆಗಳಿಗೆ ವೃಷಭಾವತಿ ಸಂಸ್ಕರಿಸಿದ ನೀರನ್ನು ತರಲು ನಾನು ಬದ್ದನಾಗಿದ್ದೇನೆ. ಆದರೆ ತಾಲೂಕಿನ ರಿಯಲ್ ಎಸ್ಟೇಟ್ ಮಾಫಿಯಾದವರು ಕೃಷಿ ಭೂಮಿ ಬೆಲೆ ಹೆಚ್ಚಾಗುವ ಆತಂಕದಲ್ಲಿ ಇಲ್ಲಸಲ್ಲದ ಅಪಪ್ರಚಾರ ಮಾಡುತ್ತಿದ್ದಾರೆ. ಒಂದು ಹನಿ ಕೊಳಚೆ ನೀರು ನೆಲಮಂಗಲಕ್ಕೆ ಬರುವುದಿಲ್ಲ ಶುದ್ದ ನೀರು ಮಾತ್ರ ಬರಲಿದೆ ಎಂದರು.
ಕೆಲಸ ಪ್ರಗತಿಯಲ್ಲಿದೆ: ಕೆಡಿಎಸ್‌ನ ಕೇಂದ್ರ ಸಚಿವ ಕುಮಾರಸ್ವಾಮಿ ಕೆಸಿ ವ್ಯಾಲಿ, ಎಚ್‌ಎಂ ವ್ಯಾಲಿಗೆ ಹಣ ನೀಡಿ ಕೆರೆಗೆ ನೀರು ಹರಿಸಿದ್ದಾರೆ. ಬಿಜೆಪಿಯ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ನೀರಾವರಿ ಸಚಿವರಾಗಿದ್ದ ಮಾಧುಸ್ವಾಮಿ, ವೃಷಭಾವತಿ ಯೋಜನೆಗೆ ಡಿಪಿಆರ್ ಮಾಡಿ ಹಣ ನೀಡದೆ ದ್ರೋಹ ಮಾಡಿದ್ದರು. ಇದನ್ನು ಗಮನಿಸಿ ನಮ್ಮ ಸರ್ಕಾರ ರೈತರ ಅನುಕೂಲಕ್ಕಾಗಿ ತಾಲೂಕಿನ ಕೆರೆಗಳಿಗೆ ನೀರು ತುಂಬಿಸಲು ಮುಂದಾದರೆ ವಿರೋಧಪಕ್ಷಗಳು ಟೀಕೆ ಮಾಡುತ್ತಾರೆ. ವೃಷಭಾವತಿ ಕೆಲಸ ಪ್ರಗತಿಯಲ್ಲಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಆರ್.ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ, ಗ್ರಾಪಂ ಅಧ್ಯಕ್ಷ ಗಂಗರಂಗಯ್ಯ, ಹನುಮಂತರಾಜು, ನವೀನ್ ಕುಮಾರ್ ಇತರರಿದ್ದರು.
ಪೋಟೋ 3 :ನೆಲಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಲ್ಲೂರು, ತೊರೆರಾಂಪುರ, ತೊರೆಚನ್ನಹಳ್ಳಿ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎನ್.ಶ್ರೀನಿವಾಸ್ ಭೂಮಿಪೂಜೆ ನೆರವೇರಿಸಿದರು.