ಕನ್ನಡಪ್ರಭ ವಾರ್ತೆ ದೇವನಹಳ್ಳಿ
ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸಿದ ಅವರು, ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಏನು ಮಾಡಿದೆ ಎಂದು ಪ್ರಶ್ನಿಸಿದರೆ ₹2 ಸಾವಿರ ಎನ್ನುತ್ತಾರೆ. ಆದರೆ ಕೋವಿಡ್ ಅವಧಿಯಿಂದ ಆರಂಭವಾಗಿ 5 ಕೇಜಿ ಅಕ್ಕಿಯನ್ನು ಕೇಂದ್ರ ಸರ್ಕಾರ ನೀಡಿದೆ. ಮುಂದಿನ ಐದು ವರ್ಷವೂ ಈ ಯೋಜನೆ ಮುಂದುವರಿಸುವುದಾಗಿ ಬಿಜೆಪಿ ತಿಳಿಸಿದೆ. ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಶೇ.33 ಮಹಿಳಾ ಮೀಸಲಾತಿ ತಂದಿದ್ದು, ಇದರಿಂದ ಮಹಿಳೆಯರ ರಾಜಕೀಯ ಸಬಲೀಕರಣ ಸಾಧ್ಯವಾಗಲಿದೆ. ಮಹಿಳೆಯರು ಉದ್ಯಮಿಗಳಾಗಿ ಬೆಳೆಯಲು ಮುದ್ರಾ ಯೋಜನೆಯಡಿ ₹20 ಲಕ್ಷ ಸಾಲ ನೀಡಲಾಗುತ್ತದೆ. ಇದು ನಿಜವಾದ ಸಬಲೀಕರಣವೇ ಹೊರತು ಕೈಗೆ ಹಣ ನೀಡುವುದಲ್ಲ ಎಂದರು.
ಪ್ರಧಾನಿ ನರೇಂದ್ರ ಮೋದಿ ಜನ ಔಷಧಿ ಮಳಿಗೆಗಳನ್ನು ನೀಡಿದ್ದು, ಶೇ.40-50 ರಿಯಾಯಿತಿ ದರದಲ್ಲಿ ಔಷಧಿ ದೊರೆಯುತ್ತಿದೆ. ಇನ್ನು ಮುಂದೆ ಪ್ರಮುಖ ಔಷಧಿಗಳನ್ನು ಶೇ.90 ರಿಯಾಯಿತಿ ದರದಲ್ಲಿ ನೀಡುವುದಾಗಿ ತಿಳಿಸಲಾಗಿದೆ. ಬಡವರಿಗೆ 3 ಕೋಟಿ ಮನೆಗಳನ್ನು ಕಟ್ಟಿಸಿಕೊಡಲಾಗುವುದು. ಈಗಾಗಲೇ 11 ಕೋಟಿ ಕುಟುಂಬಗಳಿಗೆ ಅಡುಗೆ ಅನಿಲ ನೀಡಿದ್ದು, ಇದನ್ನೂ ಮುಂದುವರಿಸಲಾಗುವುದು. ಆದರೆ ಕಾಂಗ್ರೆಸ್ ಸಣ್ಣ ಆಸೆ ತೋರಿಸಿ ಆರ್ಥಿಕ ಪರಿಸ್ಥಿತಿ ಹಾಳು ಮಾಡಿದೆ ಎಂದು ಟೀಕಿಸಿದರು.ಕೋವಿಡ್ ಬಂದಾಗ ನಾನು ಆರೋಗ್ಯ ಸಚಿವನಾಗಿ ಜನರಿಗೆ ಲಸಿಕೆ ನೀಡಿದ್ದೆ. ಆಸ್ಪತ್ರೆಗಳ ಮೂಲಸೌಕರ್ಯ ಹೆಚ್ಚಳ ಮಾಡಿಸಿದ್ದೆ. ಆದರೆ ಈ ಸರ್ಕಾರ ಹಾಲಿನ ಪ್ರೋತ್ಸಾಹಧನ, ಕಿಸಾನ್ ಸಮ್ಮಾನ್, ಹಾಲು ಒಕ್ಕೂಟ ಎಲ್ಲವನ್ನೂ ಕಿತ್ತುಕೊಂಡಿದೆ. ವಿಧಾನಸೌಧದಲ್ಲಿ ಪಾಕಿಸ್ತಾನಕ್ಕೆ ಜಿಂದಾಬಾದ್ ಘೋಷಣೆ ಕೇಳಿಬರುತ್ತದೆ. ಇಂತಹವರು ಸರ್ಕಾರ ಮಾಡಬೇಕಾ ಎಂದು ಪ್ರಶ್ನಿಸಿದರು.
ಸಿದ್ದರಾಮಯ್ಯಗೆ ಸುಧಾಕರ್ ಪ್ರಶ್ನೆ
2019ರಲ್ಲಿ ನಿಮ್ಮ ನಾಯಕ ರಾಹುಲ್ ಗಾಂಧಿ ಅವರು 55,000ಕ್ಕೂ ಹೆಚ್ಚು ಮತಗಳ ಅಂತರದಿಂದ ಅಮೇಥಿಯಲ್ಲಿ ಸೋತಿದ್ದರು. ನಿಮ್ಮ ಪ್ರಕಾರ ರಾಹುಲ್ ಗಾಂಧಿ ಭ್ರಷ್ಟಾಚಾರ ಮಾಡಿದ್ದಕ್ಕೆ ಸೋತಿದ್ದಾ? ನನ್ನ ಮೇಲೆ ತನಿಖೆಗೆ ಆದೇಶ ಮಾಡಿದ್ದೀರಿ. ಆದರೆ ಇನ್ನೂ ತನಿಖೆ ನಡೆಯುತ್ತಿರುವಾಗಲೇ, ಸಾಕ್ಷ್ಯ ಸಿಕ್ಕಿದೆ, ನಮಗೆ ಮಾಹಿತಿ ಇದೆ ಎಂದು ಹೇಳಿದ್ದೀರಿ. ಅದರಲ್ಲೇ ನಿಮ್ಮ ತನಿಖೆ ಎಷ್ಟು ಪೂರ್ವಗ್ರಹ ಪೀಡಿತ, ಎಷ್ಟು ನಿಷ್ಪಕ್ಷಪಾತ ಎಂದು ತಿಳಿಯುತ್ತದೆ ಎಂದು ಅವರು ಹೇಳಿದ್ದಾರೆ.
-ಡಾ। ಕೆ.ಸುಧಾಕರ್, ಎನ್‌ಡಿಎ ಅಭ್ಯರ್ಥಿ, ಚಿಕ್ಕಬಳ್ಳಾಪುರ