ಸತ್ಯದ ಸಾಕ್ಷಾತ್ಕಾರ ಸಂತಸದಾಯಕ: ಡಾ.ಹೆಗ್ಗಡೆ

KannadaprabhaNewsNetwork |  
Published : Sep 01, 2025, 01:04 AM IST
ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಮಾತನಾಡುತ್ತಿರುವುದು. | Kannada Prabha

ಸಾರಾಂಶ

ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯಿಂದ ಬೆಳ್ತಂಗಡಿ ತಾಲೂಕು ಜೈನಸಮಾಜ ಬಾಂಧವರ ಆಶ್ರಯದಲ್ಲಿ ಬೆಳ್ತಂಗಡಿ ಜೈನಪೇಟೆಯಲ್ಲಿರುವ ಬಸದಿಯಿಂದ ಧರ್ಮಸ್ಥಳಕ್ಕೆ ಬೃಹತ್ ವಾಹನ ಜಾಥಾ ನಡೆಯಿತು.

ಕನ್ನಡಪ್ರಭ ವಾರ್ತೆ ಬೆಳ್ತಂಗಡಿಸತ್ಯದ ಸತ್ವ ಪರೀಕ್ಷೆಯ ಕಾಲ ಇದಾಗಿದ್ದು, ಎಸ್‌ಐಟಿ ತನಿಖೆಯಿಂದ ಅನೇಕ ಸತ್ಯಾಂಶಗಳು ನಮಗೆ ನ್ಯಾಯಯುತವಾಗಿ ಪೂರಕವಾಗಿ ಪ್ರಕಟವಾಗುತ್ತಿದೆ. ಸತ್ಯದ ಸಾಕ್ಷಾತ್ಕಾರವಾಗುತ್ತಿರುವುದು ಸಂತಸದಾಯಕವಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.

ಭಾನುವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯಿಂದ ಬೆಳ್ತಂಗಡಿ ತಾಲೂಕು ಜೈನಸಮಾಜ ಬಾಂಧವರ ಆಶ್ರಯದಲ್ಲಿ ಬೆಳ್ತಂಗಡಿ ಜೈನಪೇಟೆಯಲ್ಲಿರುವ ಬಸದಿಯಿಂದ ಧರ್ಮಸ್ಥಳಕ್ಕೆ ಬೃಹತ್ ವಾಹನ ಜಾಥಾದಲ್ಲಿ ಬಂದ ಜೈನ ಸಮಾಜ ಬಾಂಧವರಿಗೆ ಶುಭ ಹಾರೈಸಿ ಮಾತನಾಡಿದರು.ಧರ್ಮಸ್ಥಳದಲ್ಲಿ ಹುಟ್ಟಿದ ತಾವು ಮತ್ತು ಕುಟುಂಬಸ್ಥರೆಲ್ಲರೂ ಅದೃಷ್ಟಶಾಲಿಗಳು ಹಾಗೂ ಭಾಗ್ಯವಂತರು. ಭಗವಾನ್ ಚಂದ್ರನಾಥ ಸ್ವಾಮಿ, ಶ್ರೀ ಮಂಜುನಾಥ ಸ್ವಾಮಿ, ಅಣ್ಣಪ್ಪಸ್ವಾಮಿ ಹಾಗೂ ಧರ್ಮದೇವತೆಗಳ ಸೇವೆ ಮಾಡುವ ಸುವರ್ಣಾವಕಾಶ ತಮಗೆ ದೊರೆತಿರುವುದು ಬದುಕಿನ ಸೌಭಾಗ್ಯವಾಗಿದೆ. ಜಡಿಮಳೆಯನ್ನೂ ಲೆಕ್ಕಿಸದೆ ಪ್ರೀತಿ-ವಿಶ್ವಾಸ ಹಾಗೂ ಅತೀವ ಅಭಿಮಾನದಿಂದ ಧರ್ಮಸ್ಥಳಕ್ಕೆ ಬಂದು ಎಲ್ಲರೂ ಗೌರವ ಅರ್ಪಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿ ಸರ್ವರಿಗೂ ದೇವರು ಸಕಲ ಸ್ಮಂಗಲವನ್ನುಂಟುಮಾಡಲಿ ಎಂದು ಹಾರೈಸಿದರು.ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ತೀರ್ಥಕ್ಷೇತ್ರದ ಮೂರು ಬಸದಿಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ ತಂದ ಪ್ರಸಾದವನ್ನು ಹೆಗ್ಗಡೆಯವರು ಮತ್ತು ಕುಟುಂಬಸ್ಥರಿಗೆ ಬಸದಿಯ ಪ್ರಧಾನ ಅರ್ಚಕ ಕೆ. ಜಯರಾಜ ಇಂದ್ರ ಮತ್ತು ಬಳಗದವರು ನೀಡಿದರು.ಬೃಹತ್ ವಾಹನ ಜಾಥಾ:ಸುಮಾರು 600ಕ್ಕೂ ಮಿಕ್ಕಿ ವಾಹನಗಳಲ್ಲಿ ಬಂದ ಮೂರು ಸಾವಿರಕ್ಕೂ ಹೆಚ್ಚು ಅಭಿಮಾನಿಗಳು ಮುಖ್ಯ ಪ್ರವೇಶದ್ವಾರದ ಬಳಿಯಿಂದ ಹೆಗ್ಗಡೆಯವರ ಪರವಾಗಿ ಘೋಷಣೆ ಕೂಗಿ ದೇವಸ್ಥಾನದ ಎದುರಿನಿಂದ ಅಮೃತವರ್ಷಿಣಿ ಸಭಾಭವನಕ್ಕೆ ನಡೆದುಕೊಂಡು ಹೋದರು.‘ಖಾವಂದರೊಂದಿಗೆ ನಾವಿದ್ದೇವೆ’, ‘ನಮ್ಮ ಖಾವಂದರು ನಮಗೆ ಹೆಮ್ಮೆ’, ‘ನಮ್ಮ ಖಾವಂದರು ನಮಗೆ ಆಸ್ತಿ’ ಮೊದಲಾದ ಘೋಷಣೆಗಳನ್ನು ಶ್ರದ್ಧಾ-ಭಕ್ತಿಯಿಂದ ಮಾಡಿದರು.ಬಳಿಕ ವಿಶ್ವಶಾಂತಿಗಾಗಿ ಒಂಭತ್ತು ಬಾರಿ ಪಂಚನಮಸ್ಕಾರ ಮಂತ್ರದ ಸಾಮೂಹಿಕ ಪಠಣ ಮಾಡಲಾಯಿತು.ನಂತರ ಎಲ್ಲರೂ ಭಗವಾನ್ ಚಂದ್ರನಾಥ ಸ್ವಾಮಿ ಬಸದಿಗೆ ಹೋಗಿ ದೇವರ ದರ್ಶನ ಮಾಡಿ, ಅಲ್ಲಿ ಕೂಡಾ ವಿಶ್ವಶಾಂತಿಗಾಗಿ ಪಂಚನಮಸ್ಕಾರ ಮಂತ್ರವನ್ನು ಒಂಭತ್ತು ಬಾರಿ ಸಾಮೂಹಿಕ ಪಠಣ ಮಾಡಿದರು.ಹೇಮಾವತಿ ವೀ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಡಾ. ನೀತಾ ರಾಜೇಂದ್ರ ಕುಮಾರ್, ಅಮಿತ್, ಶ್ರದ್ಧಾ ಅಮಿತ್ ಮತ್ತು ಡಿ. ಶ್ರೇಯಸ್ ಕುಮಾರ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಟ್ಟುನಿಟ್ಟು ಮಾಡಿದರೂ ನಿಲ್ಲದ ಪರಪ್ಪನ ಅಗ್ರಹಾರ ಪವಾಡ
ಬೆಂಗಳೂರು : ನಗರದಲ್ಲಿ ನ್ಯಾಯರಥ-ಸಂಚಾರಿ ಕಾನೂನು ಸೇವಾ ಕ್ಲಿನಿಕ್‌