ಪಂಚ ಗ್ಯಾರಂಟಿಗಳಿಂದ ಸಾಮಾಜಿಕ ನ್ಯಾಯ ಸಾಕಾರ

KannadaprabhaNewsNetwork |  
Published : Mar 26, 2025, 01:31 AM IST
ಚಿತ್ರದುರ್ಗ ಎರಡನೇ ಪುಟದ ಮಿಡ್ಲ್  | Kannada Prabha

ಸಾರಾಂಶ

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಂಚಗ್ಯಾರಂಟಿ ಯೋಜನೆಗಳ ಕಿರುಹೊತ್ತಿಗೆಯ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಬಿಡುಗಡೆ ಮಾಡಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳ ಕುರಿತಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಿಸಿರುವ ಭರವಸೆಯ ಬೆಳಕು- ಪಂಚ ಗ್ಯಾರಂಟಿ ಯೋಜನೆಗಳು ಕಿರುಹೊತ್ತಿಗೆಯನ್ನು ಯೋಜನೆ ಮತ್ತು ಸಾಂಖ್ಯಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬಿಡುಗಡೆ ಮಾಡಿದರು.

ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಹಾಗೂ ಯುವನಿಧಿ ಯೋಜನೆಗಳು ರಾಜ್ಯದಲ್ಲಿ ಅಭೂತಪೂರ್ವ ಯಶಸ್ಸು ಕಂಡಿದ್ದು, ಯೋಜನೆಗಳು ಸರ್ವರಿಗೂ ಸಮಪಾಲು, ಸಾಮಾಜಿಕ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ರಾಜ್ಯದ ಪ್ರತಿ ವರ್ಗಕ್ಕೂ ತಲುಪುತ್ತಿವೆ. ಪ್ರತಿಯೊಬ್ಬ ಪ್ರಜೆಯೂ ಒಂದಲ್ಲ ಒಂದು ರೀತಿಯಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಯಾಗಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಸರ್ಕಾರವು ದೀನ ದಲಿತರ ಹಾಗೂ ಬಡವರ ಶ್ರೇಯೋಭಿವೃದ್ಧಿಗಾಗಿ ನಿರಂತರ ಶ್ರಮಿಸುತ್ತಿದ್ದು, ಚುನಾವಣೆಗೂ ಮುನ್ನ ನೀಡಿದ್ದ ಭರವಸೆಗಳನ್ನು ಈಡೇರಿಸುವುದರೊಂದಿಗೆ ನಮ್ಮದು ನುಡಿದಂತೆ ನಡೆದ ಸರ್ಕಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಕಿರುಹೊತ್ತಿಗೆಯ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ಪಂಚ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಹಾಗೂ ಯುವನಿಧಿ ಯೋಜನೆಗಳ ಫಲಾನುಭವಿಗಳು, ಯೋಜನೆಗಳಿಂದ ತಮಗೆ ಆದ ಅನುಕೂಲ ಹಾಗೂ ಬದುಕಿಗೆ ನೆರವಾದ ಕುರಿತಂತೆ ಅನಿಸಿಕೆಗಳನ್ನು ವ್ಯಕ್ತಪಡಿಸಿದ್ದು, ಫಲಾನುಭವಿಗಳ ಅನಿಸಿಕೆಗಳು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸಂದೇಶವನ್ನು ಭರವಸೆಯ ಬೆಳಕು- ಪಂಚ ಗ್ಯಾರಂಟಿ ಯೋಜನೆಗಳು ಕಿರುಹೊತ್ತಿಗೆ ಒಳಗೊಂಡಿದೆ.

ಶಾಸಕರಾದ ಬಿ.ಜಿ ಗೋವಿಂದಪ್ಪ, ಟಿ.ರಘುಮೂರ್ತಿ, ಎನ್.ವೈ ಗೋಪಾಲಕೃಷ್ಣ, ಕೆ.ಸಿ ವೀರೇಂದ್ರ ಪಪ್ಪಿ, ಡಾ.ಎಂ ಚಂದ್ರಪ್ಪ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಆರ್. ಶಿವಣ್ಣ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಪಂ ಸಿಇಒ ಎಸ್.ಜೆ. ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗುಬ್ಬಿ ಪಟ್ಟಣ ಪಂಚಾಯಿತಿ ಆದಾಯ 2.30 ಕೋಟಿ ರು.
ರೈಲ್ವೆ ಪ್ರವೇಶ ಪರೀಕ್ಷೆ: ಕನ್ನಡಕ್ಕೆ ಅವಕಾಶ ನೀಡಿ