
ಕನ್ನಡಪ್ರಭ ವಾರ್ತೆ ತುಮಕೂರು
ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ವತಿಯಿಂದ ಬಡವರ ನೋವನ್ನು ತಮ್ಮ ಬರವಣಿಗೆಯ ಮೂಲಕ ಜಗತ್ತಿಗೆ ಸಾದರಪಡಿಸಿದ ಸಾಹಿತ್ಯ ಲೋಕದ ಅಪ್ರತಿಮ ದೈತ್ಯ ಪ್ರತಿಭೆ ದಲಿತ ಕವಿ ಡಾ. ಸಿದ್ದಲಿಂಗಯ್ಯನವರ ಜನ್ಮ ದಿನಾಚರಣೆಯನ್ನು ನಗರದ ಅಮಾನಿಕೆರೆ ಗಾಜಿನ ಮನೆಯ ಆವರಣದಲ್ಲಿ ಆಚರಿಸಲಾಯಿತು. ಈ ವೇಳೆ ದಲಿತ ಕವಿ ಸಿದ್ದಲಿಂಗಯ್ಯರವರ ಕುರಿತು ಮಾತನಾಡಿದ ಅವರು, ಸಿದ್ದಲಿಂಗಯ್ಯನವರು ಪ್ರೊ. ಜಿ.ಎಸ್. ಶಿವರುದ್ರಪ್ಪನವರ ಮಾರ್ಗದರ್ಶನದಲ್ಲಿ `ಗ್ರಾಮದೇವತೆಗಳು'''''''''''''''' ಎಂಬ ಪ್ರೌಢ ಪ್ರಬಂಧವನ್ನು ಮಂಡಿಸಿ ಪಿಎಚ್.ಡಿ. ಪದವಿ ಗಳಿಸಿದರು. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕರಾಗಿ ಕಾರ್ಯನಿರ್ವಹಿಸಿದ ಸಿದ್ದಲಿಂಗಯ್ಯನವರು, ಪ್ರಾಧ್ಯಾಪಕರಾಗಿ, ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ ಎಂದು ಹೇಳಿದರು.
ವಿದ್ಯಾರ್ಥಿ ದೆಸೆಯಿಂದಲೇ ಸಮಾಜದಲ್ಲಿನ ಅಸಮಾನತೆಗಳ ಬಗ್ಗೆ ತಮ್ಮೊಳಗೆ ಮೊಳೆಯುತ್ತಿದ್ದ ಸಿಟ್ಟು, ಆಕ್ರೋಶಗಳನ್ನು ವ್ಯಕ್ತಿಪಡಿಸಲು ಸಿದ್ದಲಿಂಗಯ್ಯನವರು ಆಯ್ದುಕೊಂಡದ್ದು ಕಾವ್ಯ ಮಾಧ್ಯಮ. ಹೀಗೆ ಅವರು ಬರೆದ ಹಲವಾರು ಕವನಗಳ ಸಂಕಲನ `ಹೊಲೆಮಾದಿಗರ ಹಾಡು'''''''''''''''' ಪ್ರಕಟಗೊಂಡಿತು. ಮುಂದೆ ಅವರ `ಸಾವಿರಾರು ನದಿಗಳು'''''''''''''''', `ಕಪ್ಪು ಕಾಡಿನ ಹಾಡು'''''''''''''''', `ಮೆರವಣಿಗೆ'''''''''''''''', `ನನ್ನ ಜನಗಳು ಮತ್ತು ಇತರ ಕವಿತೆಗಳು'''''''''''''''', `ಆಯ್ದ ಕವನಗಳು'''''''''''''''' ಮುಂತಾದ ಕವನ ಸಂಕಲನಗಳು ಪ್ರಕಟಗೊಂಡಿವೆ, ಇಂತಹ ಮಹಾನ್ ಚೇತನರ ಜನ್ಮ ದಿನಾಚರಣೆಯನ್ನು ಮಾಡುತ್ತಾ ಅವರು ಸಮಾಜಕ್ಕಾಗಿ ಮಾಡಿರುವ ಸೇವಾ ಕಾರ್ಯಗಳನ್ನು ನೆನೆಯುವುದಕ್ಕೆ ಬಹಳ ಖುಷಿ ಎನಿಸುತ್ತಿದೆ ಎಂದು ಸ್ಮರಿಸಿದರು.ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಮಾತನಾಡುತ್ತಾ ಸಿದ್ದಲಿಂಗಯ್ಯನವರ `ಪಂಚಮ ಮತ್ತು ನೆಲಸಮ'''''''''''''''', `ಏಕಲವ್ಯ'''''''''''''''' ಪ್ರಮುಖ ನಾಟಕಗಳು, ಇವಲ್ಲದೆ ರಸಗಳಿಗೆಗಳು, ಎಡಬಲ, ಹಕ್ಕಿನೋಟ, ಜನಸಂಸ್ಕೃತಿ, ಉರಿಕಂಡಾಯ ಮುಂತಾದ ಲೇಖನಗಳನ್ನು ಬರೆದ ಖ್ಯಾತಿ ಅವರಿಗಿದೆ ಎಂದು ತಿಳಿಸಿದರು.
ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ಎಸ್.ಲಕ್ಷ್ಮೀ ನಾರಾಯಣರವರು ಮಾತನಾಡಿ ಸಿದ್ಧಲಿಂಗಯ್ಯನವರ ಸೃಜನಶೀಲ ಸಾಹಿತ್ಯ ಸಾಧನೆಗಾಗಿ ರಾಜ್ಯೋತ್ಸವ ಪ್ರಶಸ್ತಿ, ಡಾ. ಅಂಬೇಡ್ಕರ್ ಶತಮಾನೋತ್ಸವ ವಿಶೇಷ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಜಾನಪದ ತಜ್ಞ ಪ್ರಶಸ್ತಿ, ಡಾ. ಅಂಬೇಡ್ಕರ್ ಪ್ರಶಸ್ತಿ, ಸತ್ಯಕಾಮ ಪ್ರತಿಷ್ಠಾನ ಪ್ರಶಸ್ತಿ, ಬಾಬು ಜಗಜೀವನ ರಾಮ್ ಪ್ರಶಸ್ತಿ, ಹಂಪಿ ವಿಶ್ವವಿದ್ಯಾಲಯದ ನಾಡೋಜ ಪ್ರಶಸ್ತಿ ಸಂದಿದ್ದವು ಎಂದು ತಿಳಿಸಿದರು.