ಮುದ್ದೇಬಿಹಾಳ : ತಾಲೂಕಿನ ನಾಗರಬೆಟ್ಟದ ವಿದ್ಯಾಸ್ಫೂರ್ತಿ ಶೈಕ್ಷಣಿಕ ಹಾಗೂ ಗ್ರಾಮೀಣಾಭಿವೃದ್ಧಿ ವತಿಯಿಂದ ನಡೆಸುತ್ತಿದ್ದ ವಿದ್ಯಾಸ್ಫೂರ್ತಿ ಇಂಟರ್‌ನ್ಯಾಶನಲ್ ಪಬ್ಲಿಕ್ ಸ್ಕೂಲ್‌ನ ನೋಂದಣಿ/ಅನುಮತಿಯನ್ನು ಶಿಕ್ಷಣ ಇಲಾಖೆ ಆಯುಕ್ತರ ಕಚೇರಿ, ಧಾರವಾಡಆದೇಶದ ಮೂಲಕ ರದ್ದುಪಡಿಸಿದೆ.
ಮುದ್ದೇಬಿಹಾಳ :ತಾಲೂಕಿನ ನಾಗರಬೆಟ್ಟದ ವಿದ್ಯಾಸ್ಫೂರ್ತಿ ಶೈಕ್ಷಣಿಕ ಹಾಗೂ ಗ್ರಾಮೀಣಾಭಿವೃದ್ಧಿ ವತಿಯಿಂದ ನಡೆಸುತ್ತಿದ್ದ ವಿದ್ಯಾಸ್ಫೂರ್ತಿ ಇಂಟರ್‌ನ್ಯಾಶನಲ್ ಪಬ್ಲಿಕ್ ಸ್ಕೂಲ್‌ನ ನೋಂದಣಿ/ಅನುಮತಿಯನ್ನು ಶಿಕ್ಷಣ ಇಲಾಖೆ ಆಯುಕ್ತರ ಕಚೇರಿ, ಧಾರವಾಡಆದೇಶದ ಮೂಲಕ ರದ್ದುಪಡಿಸಿದೆ.
ಶಾಲೆಯ ಮಾನ್ಯತೆ ಕುರಿತು ಸಲ್ಲಿಕೆಯಾಗಿದ್ದ ದೂರಿನ ಹಿನ್ನೆಲೆಯಲ್ಲಿ ಇಲಾಖೆಯು ಸಂಬಂಧಿತ ಅಧಿಕಾರಿಗಳಿಂದ ವರದಿ ಪಡೆದು, ಆಡಳಿತ ಮಂಡಳಿಗೆ ಕಾರಣ ಕೇಳುವ ನೋಟಿಸ್ ನೀಡಿ, ಅವರ ಲಿಖಿತ ಹೇಳಿಕೆ ಹಾಗೂ ಲಭ್ಯ ವರದಿ ದಾಖಲಾತಿ ಪರಿಶೀಲಿಸಿದ ಬಳಿಕ ಈ ಆದೇಶ ಹೊರಡಿಸಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಕರ್ನಾಟಕ ಶಿಕ್ಷಣ ಅಧಿನಿಯಮ, 1983ರ ಸೆಕ್ಷನ್ 34(2) ಹಾಗೂ ಸಂಬಂಧಿತ ಸರ್ಕಾರಿ ಅಧಿಸೂಚನೆಯಡಿ ನೀಡಲಾದ ಅಧಿಕಾರದ ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ.
ಶಾಲೆಯಲ್ಲಿ ಈಗಾಗಲೇ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಯಾವುದೇ ತೊಂದರೆಯಾಗದಂತೆ ಸರ್ಕಾರಿ ಶಾಲೆಗಳಿಗೆ ದಾಖಲಿಸುವುದು ಹಾಗೂ ಅಗತ್ಯ ಶೈಕ್ಷಣಿಕ ದಾಖಲೆಗಳನ್ನು ಸಂಬಂಧಿತ ಅಧಿಕಾರಿಗಳಿಗೆ ಹಸ್ತಾಂತರಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.
ಈ ಆದೇಶದ ಪ್ರತಿಯನ್ನು ಸಂಬಂಧಿತ ಶಿಕ್ಷಣಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಇತರ ಸಂಬಂಧಪಟ್ಟ ಅಧಿಕಾರಿಗಳಿಗೆ ಮುಂದಿನ ಕ್ರಮಕ್ಕಾಗಿ ಕಳುಹಿಸಲಾಗಿದೆ.ಎಂದು ವರದಿಯಲ್ಲಿ ತಿಳಿಸಲಾಗಿದೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.