ಪುಟ...2ಕ್ಕೆ ಆಂಕರ್ಜೆ.ಇ ಶಿಕ್ಷಣ ಸಂಸ್ಥೆಗೆ ದಾಖಲೆಯ ಫಲಿತಾಂಶ

KannadaprabhaNewsNetwork |  
Published : Apr 11, 2026, 04:00 AM IST
ಪಿಯು | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಅಥಣಿ ಈ ಬಾರಿ ಪದವಿ ಪೂರ್ವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಸಾಧನೆ ಮಾಡಿರುವುದು ನಮ್ಮೆಲ್ಲರಿಗೆ ಹೆಮ್ಮೆ ತಂದಿದೆ ಎಂದು ಸಂಸ್ಥೆಯ ಕಾರ್ಯಧ್ಯಕ್ಷ ಡಾ.ರಾಮ್ ಕುಲಕರ್ಣಿ ಸಂತಸ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಅಥಣಿ

ಈ ಬಾರಿ ಪದವಿ ಪೂರ್ವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಸಾಧನೆ ಮಾಡಿರುವುದು ನಮ್ಮೆಲ್ಲರಿಗೆ ಹೆಮ್ಮೆ ತಂದಿದೆ ಎಂದು ಸಂಸ್ಥೆಯ ಕಾರ್ಯಧ್ಯಕ್ಷ ಡಾ.ರಾಮ್ ಕುಲಕರ್ಣಿ ಸಂತಸ ವ್ಯಕ್ತಪಡಿಸಿದರು.ಜೆ.ಇ.ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯಿಂದ ಸಾಧಕ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು. ನಮ್ಮ ಜಾದವಜಿ ಶಿಕ್ಷಣ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪಿಯುಸಿ ದ್ವಿತೀಯ ವಾರ್ಷಿಕ ಪರೀಕ್ಷೆಯಲ್ಲಿ ದಾಖಲೆಯ ಫಲಿತಾಂಶ ನೀಡಿದ್ದು, ಶೇ.93.51 ರಷ್ಟಾಗಿದೆ ಎಂದು ಹೇಳಿದರು.ಕಲಾ ವಿಭಾಗದಲ್ಲಿ ಶಿವಾನಂದ ಮುರಿಗೆಪ್ಪ ಬುರ್ಲಟ್ಟಿ 595 ಅಂಕ ಪಡೆದು ಮಹಾವಿದ್ಯಾಲಯಕ್ಕೆ ಪ್ರಥಮ ಸ್ಥಾನ ಹಾಗೂ ರಾಜ್ಯಕ್ಕೆ 2ನೇ ರ‍್ಯಾಂಕ್ ಪಡೆದಿದ್ದಾನೆ. ಆತನ ಮುಂದಿನ ಶಿಕ್ಷಣಕ್ಕೆ ಸಂಸ್ಥೆಯಿಂದ ಮೂಲಕ ಆರ್ಥಿಕ ನೆರವು ನೀಡಲಾಗುವುದು. ಅನನ್ಯಾ ರಮೇಶ್ ಪೂಜಾರಿ 589 ಅಂಕ ಪಡೆದು ಕಾಲೇಜಿಗೆ ದ್ವಿತೀಯ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ತೃತೀಯ ಸ್ಥಾನ ಪಡೆದಿದ್ದಾಳೆ. ಸ್ನೇಹಲ ರಾಮದಾಸ ಪಾಟೀಲ 585 ಅಂಕ ಪಡೆದು ಕಾಲೇಜಿಗೆ ತೃತೀಯ ಸ್ಥಾನ ಪಡೆದಿದ್ದಾಳೆ ಎಂದು ತಿಳಿಸಿದರು. ವಾಣಿಜ್ಯ ವಿಭಾಗದಲ್ಲಿ ಭಕ್ತಿ ಈಲವಕರ 590 ಅಂಕ ಪ್ರಥಮ, ಶ್ರೇಯಾ ಪವಾರ 580 ಅಂಕ ದ್ವಿತೀಯ, ಚಂಪವ್ವ ತಂವಶಿ 577 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಅಭಿನವ ಕುಲಕರ್ಣಿ 587 ಅಂಕ ಪಡೆದು ತಾಲೂಕಿಗೆ ಪ್ರಥಮ, ಪ್ರೀತಿ ಪೂಜಾರಿ 585 ಅಂಕ ಪಡೆದು ದ್ವಿತೀಯ, ಸಮೀಕ್ಷಾ ಕವಟೆಕರ 581 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ. ಸಂಸ್ಥೆಯ 40 ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕಗಳನ್ನು ಪಡೆದಿದ್ದಾರೆ. 100 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಪಾಸಾಗಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಉತ್ತಮ ಮಾರ್ಗದರ್ಶನ ಮಾಡಿದ ಎಲ್ಲ ಉಪನ್ಯಾಸಕರಿಗೆ, ಪರಿಶ್ರಮವಹಿಸಿ ಉತ್ತಮ ಸಾಧನೆ ಮಾಡಿ ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸುವ ಎಲ್ಲ ಸಾಧಕ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿಯ ಪರವಾಗಿ ಅಭಿನಂದಿಸಿದರು. ಸಂಸ್ಥೆಯ ಉಪ ಕಾರ್ಯಧ್ಯಕ್ಷ ಸಂದೀಪ ಸಂಗೋರಾಮ ಮಾತನಾಡಿದರು. ಈ ವೇಳೆ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಿದರು. ಸಂಸ್ಥೆಯ ಕಾರ್ಯದರ್ಶಿ ರವಿ ಕುಲಕರ್ಣಿ, ಸಹ ಕಾರ್ಯದರ್ಶಿ ಆನಂದ ಟೋಣಪಿ, ಹಿರಿಯ ಸದಸ್ಯರಾದ ಎಸ್.ಎಂ. ಪಾಟೀಲ, ಅನೀಲ ದೇಶಪಾಂಡೆ, ಎಂ ವಿ ಜೋಶಿ, ಡಾ. ಅವಿನಾಶ ನಾಯಿಕ , ಹಿಮಾoಶು ಬಾಟೆ, ಅಥರ್ವ ದೇಶಪಾಂಡೆ, ಡಾ.ಶ್ರೀವತ್ಸ ಕುಲಕರ್ಣಿ, ಡಾ. ವಿಶ್ವನಾಥ ಕುಲಕರ್ಣಿ, ಪ್ರಾಚಾರ್ಯ ಎಂ ಪಿ ಮೇತ್ರಿ, ಆಡಳಿತಾಧಿಕಾರಿ ಉದಯಕುಮಾರ ಕೋಠಿವಾಲೆ, ಹಾಗೂ ಮಹಾವಿದ್ಯಾಲಯದ ಬೋಧಕ ಸಿಬ್ಬಂದಿ ಹಾಗೂ ಸಾಧಕ ವಿದ್ಯಾರ್ಥಿಗಳು ಮತ್ತು ಪಾಲಕರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೇಶ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ತರ
ತ್ಯಾಜ್ಯ ವಿಲೇವಾರಿ ಘಟಕ ತೆರವಿಗೆ ಆಗ್ರಹ