ಸ್ತನ ಕ್ಯಾನ್ಸರ್‌ ಆರಂಭಿಕ ಪತ್ತೆಯಿಂದ ಗುಣಮುಖ: ಡಾ. ಹರೀಶ್‌ ಕಕನಾಳೆ

KannadaprabhaNewsNetwork |  
Published : Oct 30, 2026, 01:45 AM IST
ಚಿತ್ರ 29ಬಿಡಿಆರ್50 | Kannada Prabha

ಸಾರಾಂಶ

ನ ಕ್ಯಾನ್ಸರ್‌ನ ಆರಂಭಿಕ ಪತ್ತೆ, ಸೂಕ್ತ ಸ್ಕ್ಯಾನಿಂಗ್ ಮತ್ತು ಇಮೇಜಿಂಗ್ ಪರೀಕ್ಷೆಗಳು, ತಜ್ಞರ ಸಲಹೆ ಹಾಗೂ ಸಕಾಲಿಕ ಚಿಕಿತ್ಸೆಯಿಂದ ರೋಗದ

ಕನ್ನಡಪ್ರಭ ವಾರ್ತೆ ಬೀದರ್

ಸ್ತನ ಕ್ಯಾನ್ಸರ್‌ನ ಆರಂಭಿಕ ಪತ್ತೆ, ಸೂಕ್ತ ಸ್ಕ್ಯಾನಿಂಗ್ ಮತ್ತು ಇಮೇಜಿಂಗ್ ಪರೀಕ್ಷೆಗಳು, ತಜ್ಞರ ಸಲಹೆ ಹಾಗೂ ಸಕಾಲಿಕ ಚಿಕಿತ್ಸೆಯಿಂದ ರೋಗದ ಪರಿಣಾಮಗಳನ್ನು ಕಡಿಮೆ ಮಾಡಬಹುದು ಎಂದು ಕ್ಯಾನ್ಸರ್ ತಜ್ಞ ಡಾ. ಹರೀಶ್ ಕಕನಾಳೆ ಹಾಗೂ ವಿಕಿರಣಶಾಸ್ತ್ರ ತಜ್ಞೆ ಡಾ. ಅಶ್ವಿನಿ ಎಸ್.ತಿಳಿಸಿದರು.

ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬ್ರಿಮ್ಸ್) ವತಿಯಿಂದ ಸ್ತನ ಕ್ಯಾನ್ಸರ್ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ ಗುರುವಾರ ಸ್ತನ ಕ್ಯಾನ್ಸರ್ ಜಾಗೃತಿ ಜಾಥಾ ಹಾಗೂ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.

ಸ್ತನದಲ್ಲಿ ಗಡ್ಡೆ ಕಾಣಿಸಿಕೊಳ್ಳುವುದು, ಸ್ತನದ ಆಕಾರ ಅಥವಾ ಚರ್ಮದಲ್ಲಿ ಬದಲಾವಣೆ, ಮೊಲೆ ತೊಟ್ಟುಗಳಲ್ಲಿ ವ್ಯತ್ಯಾಸ ಅಥವಾ ಅಸಹಜ ಸ್ರಾವ ಕಂಡುಬಂದಲ್ಲಿ ತಡಮಾಡದೆ ವೈದ್ಯಕೀಯ ಸಲಹೆ ಪಡೆಯಬೇಕು ಎಂದು ತಿಳಿಸಿದರು.

ಭಯ ಮತ್ತು ಹಿಂಜರಿಕೆಯನ್ನು ಬದಿಗಿಟ್ಟು ಸಮಯಕ್ಕೆ ಸರಿಯಾಗಿ ತಪಾಸಣೆ ಮಾಡಿಸಿಕೊಳ್ಳುವಂತೆ ತಜ್ಞರು ಮಹಿಳೆಯರಿಗೆ ಕರೆ ನೀಡಿದರು.

ಬ್ರಿಮ್ಸ್ ನಿರ್ದೇಶಕರಾದ ಡಾ. ಶಾಂತಲಾ ಕೌಜಲಗಿ ಅಧ್ಯಕ್ಷತೆ ವಹಿಸಿದ್ದರು. ಬ್ರಿಮ್ಸ್ ಪ್ರಾಂಶುಪಾಲರಾದ ಡಾ. ರಾಜೇಶ್ ಪಾರಾ, ವೈದ್ಯಕೀಯ ಅಧೀಕ್ಷಕರಾದ ಡಾ. ಶಿವಯೋಗಿ ಬಾಲಿ, ಮುಖ್ಯ ಆಡಳಿತಾಧಿಕಾರಿ ಡಾ. ಪ್ರಕಾಶ್ ಸೂರ್ಯವಂಶಿ ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ಎಂ.ಡಿ. ಅಹಮದ್ದುದ್ದೀನ್ ಅತಿಥಿಗಳಾಗಿ ಉಪಸ್ಥಿತರಿದ್ದರು.

ಬ್ರಿಮ್ಸ್ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಮುಖ್ಯಸ್ಥರಾದ ಡಾ. ಉಮಾ ದೇಶಮುಖ್ ಹಾಗೂ ಶಸ್ತ್ರಚಿಕಿತ್ಸಾ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ರಾಜೇಶ್ ಕಾಮತಿಕರ್ ಕಾರ್ಯಕ್ರಮದ ಸಂಯೋಜಕರಾಗಿ ಕಾರ್ಯ ನಿರ್ವಹಿಸಿದರು.

ಇದಕ್ಕೂ ಮುನ್ನ ಬೆಳಿಗ್ಗೆ 9.30ಕ್ಕೆ ಬ್ರಿಮ್ಸ್ ಕಾಲೇಜಿನಿಂದ ಆಸ್ಪತ್ರೆಯವರೆಗೆ ಜಾಗೃತಿ ಜಾಥಾ ನಡೆಯಿತು. ವೈದ್ಯರು, ಬೋಧಕ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿದರು.

ಸ್ತನ ಕ್ಯಾನ್ಸರ್ ಜಾಗೃತಿಯ ಫಲಕಗಳು ಮತ್ತು ಬ್ಯಾನರ್‌ಗಳನ್ನು ಹಿಡಿದು, ಗುಲಾಬಿ ಬಣ್ಣದ ಉಡುಪು ಧರಿಸಿ ಜಾಥಾದಲ್ಲಿ ಪಾಲ್ಗೊಂಡವರು ಸ್ತನ ಕ್ಯಾನ್ಸರ್ ರೋಗಿಗಳು ಹಾಗೂ ಗುಣಮುಖರಾದವರೊಂದಿಗೆ ಒಗ್ಗಟ್ಟನ್ನು ವ್ಯಕ್ತಪಡಿಸಿದರು.

ಮಹಿಳೆಯರ ಆರೋಗ್ಯ ಸಂರಕ್ಷಣೆ, ರೋಗ ತಡೆಗಟ್ಟುವಿಕೆ ಹಾಗೂ ಸಮುದಾಯದಲ್ಲಿ ಆರೋಗ್ಯ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬ್ರಿಮ್ಸ್ ಕೈಗೊಂಡ ಈ ಕಾರ್ಯಕ್ರಮವು ಮಹತ್ವದ್ದಾಗಿತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೇಪ್‌ ಮಾಡಿದ್ದಕ್ಕಾಗಿ ಅಪಹರಣ ಮೂಲಕ ಪ್ರತೀಕಾರ
ಉತ್ತರ ಪಾಲಿಕೆಯಲ್ಲಿ 18 ಜಂಕ್ಷನ್‌ ಗುರುತು