ಬೃಹತ್‌ ಉದ್ಯೋಗ ಮೇಳದಲ್ಲಿ 4000 ಜನಕ್ಕೆ ನೇಮಕಾತಿ ಪತ್ರ

KannadaprabhaNewsNetwork |  
Published : Aug 18, 2024, 01:48 AM IST
NR Ramesh | Kannada Prabha

ಸಾರಾಂಶ

ಪದ್ಮನಾಭನಗರದ ಪುಟ್ಟಲಿಂಗಯ್ಯ ಆಟದ ಮೈದಾನ ಮತ್ತು ಕಾರ್ಮೆಲ್‌ ಶಾಲೆ ಸಭಾಂಗಣದಲ್ಲಿ ನಡೆದ ಉದ್ಯೋಗ ಮೇಳವನ್ನು ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಬೆಂಗಳೂರು

ಬಿಜೆಪಿ ಮುಖಂಡ ಎನ್‌.ಆರ್‌.ರಮೇಶ್‌ ಅವರ ನೇತೃತ್ವದಲ್ಲಿ ಎಂಎಲ್‌ಆರ್‌ ಕುಟುಂಬದ ಸಹಯೋಗದಲ್ಲಿ ಶನಿವಾರ ನಗರದಲ್ಲಿ ಹಮ್ಮಿಕೊಂಡಿದ್ದ ಬೃಹತ್‌ ಉದ್ಯೋಗ ಮೇಳದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ 4 ಸಾವಿರಕ್ಕೂ ಅಧಿಕ ಅಭ್ಯರ್ಥಿಗಳಿಗೆ ಸ್ಥಳದಲ್ಲೇ ನೇಮಕಾತಿ ಪತ್ರ ನೀಡಲಾಯಿತು.

ಪದ್ಮನಾಭನಗರದ ಪುಟ್ಟಲಿಂಗಯ್ಯ ಆಟದ ಮೈದಾನ ಮತ್ತು ಕಾರ್ಮೆಲ್‌ ಶಾಲೆ ಸಭಾಂಗಣದಲ್ಲಿ ನಡೆದ ಉದ್ಯೋಗ ಮೇಳದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಸುಮಾರು 12 ಸಾವಿರಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳು ಪಾಲ್ಗೊಂಡಿದ್ದರು. ಎಸ್ಸೆಸ್ಸೆಎಲ್ಸಿ, ದ್ವಿತೀಯ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಡಿಪ್ಲೊಮಾ, ಎಂಜಿನಿಯರಿಂಗ್‌ ಪದವಿ ಉತ್ತೀರ್ಣ, ಅನುತ್ತೀರ್ಣರಾದ ಉದ್ಯೋಗಾಕಾಂಕ್ಷಿಗಳು ಹಾಗೂ ಅಂಗವಿಕಲರು ಸೇರಿ ಸುಮಾರು 4 ಸಾವಿರ ಮಂದಿಗೆ ನಗರದ ಪ್ರತಿಷ್ಠಿತ ಕಾರ್ಪೋರೆಟ್‌, ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉದ್ಯೋಗಾವಕಾಶ ಕಲ್ಪಿಸಲಾಯಿತು.

ಇದಕ್ಕೂ ಮುನ್ನ ನಿರ್ಮಾಪಕಿ ಅಶ್ವಿನಿ ಪುನೀತ್‌ ರಾಜ್‌ ಕುಮಾರ್‌ ಅವರು ಈ ಬೃಹತ್‌ ಉದ್ಯೋಗ ಮೇಳವನ್ನು ಉದ್ಘಾಟಿಸಿದರು. ಬಳಿಕ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಅವರು ಉದ್ಯೋಗಾಕಾಂಕ್ಷಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು.ಉದ್ಯೋಗ ಮೇಳ ವಲ್ಡ್‌ ರೆಕಾರ್ಡ್‌ಗೆ ಸೇರ್ಪಡೆ

ಬೃಹತ್‌ ಉದ್ಯೋಗ ಮೇಳವನ್ನು ಕಾಗದ ರಹಿತ ಕಾರ್ಯಕ್ರಮವಾಗಿ ಆಯೋಜಿಸಲಾಗಿತ್ತು. ಹೀಗಾಗಿ ಈ ಉದ್ಯೋಗ ಮೇಳ ‘ಲಂಡನ್‌ ಬುಕ್‌ ಆಫ್‌ ವಲ್ಡ್‌ ರೆಕಾರ್ಡ್ಸ್‌’ ದಾಖಲೆಗೆ ಸೇರ್ಪಡೆಯಾಗಿದೆ. ಈ ಉದ್ಯೋಗ ಮೇಳದಲ್ಲಿ ಲಂಡನ್‌ ಬುಕ್‌ ಆಫ್‌ ವಲ್ಡ್‌ ರೆಕಾರ್ಡ್ಸ್‌ ಸಂಸ್ಥೆಯ ಮುಖ್ಯಸ್ಥರು ಹಾಗೂ 200ಕ್ಕೂ ಅಧಿಕ ಕಾರ್ಪೊರೇಟ್‌ ಮತ್ತು ಎಂಎನ್‌ಸಿ ಕಂಪನಿಗಳ ಮುಖ್ಯಸ್ಥರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೋಗಿಲು ನಿರಾಶ್ರಿತರಿಗೆ 5ರ ನಂತರ ವಸತಿ ಭಾಗ್ಯ
ಹೊಸ ವರ್ಷಕ್ಕೆ ಶೇ.40 ಮದ್ಯ ಮಾರಾಟ ಹೆಚ್ಚಳ!