ಕನ್ನಡಪ್ರಭ ವಾರ್ತೆ ಕಾರ್ಕಳ
ಅವರು ನಗರದ ರೆಡ್‌ಕ್ರಾಸ್ ಭವನದಲ್ಲಿ ಕಾರ್ಕಳದ ಮಂಜುನಾಥ ಪೈ ಸ್ಮಾರಕ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಮೂರು ದಿನಗಳ ವ್ಯಕ್ತಿತ್ವ ವಿಕಸನ ಶಿಬಿರವನ್ನು ಉದ್ಘಾಟಿಸಿ ಮಾತಾನಾಡಿದರು.ಜಿಲ್ಲಾ ರೆಡ್‌ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಶಿಬಿರವು ವಿದ್ಯಾರ್ಥಿಗಳಿಗೆ ಕೌಶಲ್ಯದ ತರಬೇತಿಯನ್ನು ನೀಡುತ್ತದೆ ಎಂದರು. ರೆಡ್‌ಕ್ರಾಸ್ ಖಜಾಂಚಿ ರಮಾದೇವಿ, ವಿಕಲಚೇತನರ ಪುನರ್ವಸತಿ ಕೇಂದ್ರದ ಅಡಿಯಾಲಜಿಸ್ಟ್ ನೆಲಿಶಾ ಮೆರಿಲ್ ಜತ್ತನ್ನ, ಕಾಲೇಜಿನ ರೆಡ್‌ಕ್ರಾಸ್ ಘಟಕದ ನಾಯಕಿ ನವ್ಯಾ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.ಕಾಲೇಜಿನ ರೆಡ್‌ಕ್ರಾಸ್ ಸಂಯೋಜಕಿ ಡಾ. ವಿದ್ಯಾ ಪ್ರಭು ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಸ್ನೇಹ ಕಾರ್ಯಕ್ರಮ ನಿರ್ವಹಿಸಿ, ದಿವ್ಯಾ ದೇವಾಡಿಗ ವಂದಿಸಿದರು.