ರಾಷ್ಟ್ರದ ಅಭಿವೃದ್ಧಿಗೆ ರೆಡ್‍ಕ್ರಾಸ್ ಕೊಡುಗೆ ಅನನ್ಯ: ಎಚ್.ಬಿ.ಪಾಟೀಲ

KannadaprabhaNewsNetwork |  
Published : May 09, 2025, 12:30 AM IST
ಫೋಟೋ- ರೆಡ್‌ ಕ್ರಾಸ | Kannada Prabha

ಸಾರಾಂಶ

ಸಮಾಜದಲ್ಲಿ ಕಂಡುಬರುವ ವಿವಿಧ ಸಮಸ್ಯೆಗಳಿಗೆ ಪರಿಹಾರ, ನೈಸರ್ಗಿಕ ವಿಪತ್ತುಗಳ ನಿರ್ವಹಣೆ, ಜನಜಾಗೃತಿ ಕಾರ್ಯಕ್ರಮ, ತೊಂದರೆಯಲ್ಲಿರುವ ಜನರಿಗೆ ಸಹಾಯ ಸೇರಿದಂತೆ ಅನೇಕ ಜನಪರ ಕಾರ್ಯಗಳನ್ನು ನಿರಂತರವಾಗಿ ಮಾಡುವ ಮೂಲಕ ರೆಡ್‌ ಕ್ರಾಸ್ ಸಂಸ್ಥೆಯು ರಾಷ್ಟ್ರ ಅಭಿವೃದ್ಧಿಗೆ ತನ್ನದೇ ಆದ ಅನನ್ಯವಾದ ಕೊಡುಗೆಯನ್ನು ನೀಡುತ್ತಿದೆಯೆಂದು ಉಪನ್ಯಾಸಕ, ಚಿಂತಕ ಎಚ್.ಬಿ.ಪಾಟೀಲ ಹೇಳೀದರು.

ಕನ್ನಡಪ್ರಭ ವಾರ್ತೆ ಕಲಬುರಗಿ

ಸಮಾಜದಲ್ಲಿ ಕಂಡುಬರುವ ವಿವಿಧ ಸಮಸ್ಯೆಗಳಿಗೆ ಪರಿಹಾರ, ನೈಸರ್ಗಿಕ ವಿಪತ್ತುಗಳ ನಿರ್ವಹಣೆ, ಜನಜಾಗೃತಿ ಕಾರ್ಯಕ್ರಮ, ತೊಂದರೆಯಲ್ಲಿರುವ ಜನರಿಗೆ ಸಹಾಯ ಸೇರಿದಂತೆ ಅನೇಕ ಜನಪರ ಕಾರ್ಯಗಳನ್ನು ನಿರಂತರವಾಗಿ ಮಾಡುವ ಮೂಲಕ ರೆಡ್‌ ಕ್ರಾಸ್ ಸಂಸ್ಥೆಯು ರಾಷ್ಟ್ರ ಅಭಿವೃದ್ಧಿಗೆ ತನ್ನದೇ ಆದ ಅನನ್ಯವಾದ ಕೊಡುಗೆಯನ್ನು ನೀಡುತ್ತಿದೆಯೆಂದು ಉಪನ್ಯಾಸಕ, ಚಿಂತಕ ಎಚ್.ಬಿ.ಪಾಟೀಲ ಹೇಳೀದರು.

ಅವರು ಇಲ್ಲಿನ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ, ನಗರದ ನ್ಯೂ ರಾಘವೇಂದ್ರ ಕಾಲನಿಯಲ್ಲಿರುವ ಶ್ರೀ ವಿವೇಕಾನಂದ ಕೋಚಿಂಗ್ ಸೆಂಟರ್‌ನಲ್ಲಿ ಬುಧವಾರ ಏರ್ಪಡಿಸಿದ್ದ ವಿಶ್ವ ರೆಡ್‍ಕ್ರಾಸ್ ಸಂಸ್ಥೆ ದಿನಾಚರಣೆಯಲ್ಲಿ ಮಾತನಾಡಿದರು.

ಈ ಸಂಸ್ಥೆಯು ಶಾಂತಿ ಕಾಪಾಡುವುದು, ಗಾಯಗೊಂಡ ವ್ಯಕ್ತಿಗಳಿಗೆ ಚಿಕಿತ್ಸೆ ನೀಡುವುದು, ಆಕಸ್ಮಿಕ ಮರಣದ ಪ್ರಮಾಣವನ್ನು ತಗ್ಗಿಸುವುದು, ಸಮುದಾಯದ ಅಭಿವೃದ್ಧಿಯಲ್ಲಿ ತೊಡಗುವ ಮೂಲಕ ಸಬಲೀಕರಣವನ್ನು ಮಾಡುವು ಕಾರ್ಯಗಳನ್ನು ಮಾಡುತ್ತಿದೆ. ಹೆನ್ರಿ ಡ್ಯೂಯೆಟ್ ಅವರ ದೂರದೃಷ್ಠಿಯ ಫಲವೇ ಈ ಸಂಸ್ಥೆಯ ಉಗಮಕ್ಕೆ ಕಾರಣವಾಯಿತೆಂದರು.

ಬಳಗದ ಉಪಾಧ್ಯಕ್ಷ ನರಸಪ್ಪ ಬಿರಾದಾರ ದೇಗಾಂವ ಮತ್ತು ಸಂಸ್ಥೆಯ ಮುಖ್ಯಸ್ಥ ಬಸವರಾಜ ಮಳ್ಳಿ ಮಾತನಾಡಿ, ರೆಡೆಕ್ರಾಸ್ ಸಂಸ್ಥೆಯು ಯುದ್ಧಪೀಡಿತ ಸಂದರ್ಭದಲ್ಲಿ ಕಂಡುಬರುವ ಜೀವಹಾನಿಯನ್ನು ತಪ್ಪಿಸಲು ಪ್ರಯತ್ನಿಸುತ್ತದೆ. ಇದರ ಕೊಡುಗೆ ಮರೆಯುವಂತಿಲ್ಲವೆಂದರು.

ಕಾರ್ಯಕ್ರಮದಲ್ಲಿ ಬಳಗದ ಸದಸ್ಯರಾದ ಮಹಾಂತೇಶ ಬಿರಾದಾರ, ರಾಜಕುಮಾರ ಬಟಗೇರಿ, ಬಸವರಾಜ ದೇಸಾಯಿ, ಸಹ ಶಿಕ್ಷಕರಾದ ಇಂದಿರಾ ಕಿರಣಗಿ, ಭೀಮಾಶಂಕರ ಶೇರಿ, ಮಲ್ಲಿಕಾರ್ಜುನ ಗುಡಬಾ ಸೇರಿದಂತೆ ಸಂಸ್ಥೆಯ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!