ರೆಡ್ ಕ್ರಾಸ್ ಮಾನವೀಯ ಸೇವೆಯ ಪ್ರತೀಕ

KannadaprabhaNewsNetwork |  
Published : May 09, 2026, 02:15 AM IST
ಪೋಟೊ8ಕೆಎಸಟಿ3: ಕುಷ್ಟಗಿ ಪಟ್ಟಣದ ಹಳೆಯ ಪ್ರವಾಸಿ ಮಂದಿರದಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆ ಅಂಗವಾಗಿ ರೆಡ್ ಕ್ರಾಸ್ ಸಂಸ್ಥೆಯ ಸಂಸ್ಥಾಪಕ  ಜಾನ್ ಹೇನ್ರೀ ಡೂನಾಂಟ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.  | Kannada Prabha

ಸಾರಾಂಶ

ಸಮಾಜದಲ್ಲಿ ಮಾನವೀಯತೆ ಉಳಿಯಬೇಕಾದರೆ ಯುವಕರು ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು

ಕುಷ್ಟಗಿ:ರೆಡ್ ಕ್ರಾಸ್ ಸಂಸ್ಥೆ ಮಾನವೀಯ ಸೇವೆಯ ಪ್ರತೀಕವಾಗಿದ್ದು, ಸಂಕಷ್ಟದ ಸಂದರ್ಭಗಳಲ್ಲಿ ಜನರಿಗೆ ನೆರವಾಗುವ ಮಹತ್ವದ ಸಂಸ್ಥೆಯಾಗಿದೆ ಎಂದು ಡಾ. ರವಿಕುಮಾರ್ ದಾನಿ ಹೇಳಿದರು.

ಪಟ್ಟಣದ ಹಳೆಯ ಪ್ರವಾಸಿ ಮಂದಿರದಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆ ಅಂಗವಾಗಿ ರೆಡ್ ಕ್ರಾಸ್ ಸಂಸ್ಥೆಯ ಸಂಸ್ಥಾಪಕ ಜಾನ್ ಹೇನ್ರೀ ಡೂನಾಂಟ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.

ರಕ್ತದಾನ, ಆರೋಗ್ಯ ಜಾಗೃತಿ ಹಾಗೂ ವಿಪತ್ತು ಸಂದರ್ಭಗಳಲ್ಲಿ ಸೇವಾ ಮನೋಭಾವ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ರೆಡ್ ಕ್ರಾಸ್ ಸೇವಕರ ತ್ಯಾಗ ಹಾಗೂ ಸೇವಾ ಮನೋಭಾವ ಶ್ಲಾಘಿಸಿದರು. ಸಮಾಜದಲ್ಲಿ ಮಾನವೀಯತೆ ಉಳಿಯಬೇಕಾದರೆ ಯುವಕರು ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಪ್ರಮುಖರಾದ ಮಹಾಂತಯ್ಯ ಅರಳೇಲಿಮಠ, ಅಪ್ಪಣ್ಣ ನವಲೆ, ಬಾಲಾಜಿ ಬಳಿಗಾರ, ವೀರಣ್ಣ ಸೊಬರದ, ಮಂಜುನಾಥ ಮಹಾಲಿಂಗಪೂರ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುರುಡೇಶ್ವರದಲ್ಲಿ ಕಾರು ಅಪಘಾತ: ಒಬ್ಬ ಸಾವು, ಮೂವರಿಗೆ ಗಾಯ
ಮುಟ್ಟಳ್ಳಿಯಲ್ಲಿ ವಿಪತ್ತು ನಿರ್ವಹಣಾ ತಂಡದಿಂದ ಜಾಗೃತಿ ಕಾರ್ಯಕ್ರಮ