ರೋಟರಿ ಕ್ಲಬ್ ಮಂಗಳೂರು ಹಿಲ್ ಸೈಡ್ ಮತ್ತು ಲಯನ್ಸ್ ಕ್ಲಬ್ ಮಂಗಳೂರು ಅಶೋಕ ನಗರ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ರೆಡ್ ಕ್ರಾಸ್ ದಿನಾಚರಣೆ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮ ಶುಕ್ರವಾರ ಲಯನ್ ಅಶೋಕ ಸೇವಾ ಮಂದಿರದ ಆವರಣದಲ್ಲಿ ನಡೆಯಿತು.
ಮಂಗಳೂರು: ವನಮಹೋತ್ಸವ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು. ಗಿಡ ನೆಟ್ಟು ಪೋಷಿಸಿ ಪರಿಸರ ಉಳಿಸಲು ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು. ಹಸಿರು ಇದ್ದರೆ ಉಸಿರು. ಹಸಿರು ಇಲ್ಲವಾದಲ್ಲಿ ಜೀವನ ದುಸ್ತರ ವಾಗಬಹುದು ಎಂದು ದ.ಕ. ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ಮಾಜಿ ಸಭಾಪತಿ ಡಾ.ಮುರಲಿ ಮೋಹನ್ ಚೂಂತಾರು ಹೇಳಿದರು.
ರೋಟರಿ ಕ್ಲಬ್ ಮಂಗಳೂರು ಹಿಲ್ ಸೈಡ್ ಮತ್ತು ಲಯನ್ಸ್ ಕ್ಲಬ್ ಮಂಗಳೂರು ಅಶೋಕ ನಗರ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ರೆಡ್ ಕ್ರಾಸ್ ದಿನಾಚರಣೆ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮ ಶುಕ್ರವಾರ ಲಯನ್ ಅಶೋಕ ಸೇವಾ ಮಂದಿರದ ಆವರಣದಲ್ಲಿ ನಡೆಯಿತು.
ಲಯನ್ ಅಶೋಕ ಸೇವಾ ಮಂದಿರದ ಟ್ರಸ್ಟಿ ಲಯನ್ ಡಾ.ನವೀನ್ ಶೆಟ್ಟಿ, ರೋಟರಿ ಕ್ಲಬ್ ಹಿಲ್ ಸೈಡ್ ಅಧ್ಯಕ್ಷ ಪೀಟರ್ ಆಂಟೋನಿ ಪಿಂಟೋ, ಕಾರ್ಯದರ್ಶಿ ವಾಸುದೇವ ಶೆಟ್ಟಿಗಾರ್, ರೆಡ್ ಕ್ರಾಸ್ ಸದಸ್ಯ ಅಜಯ್ ಇದ್ದರು. ಸುಮಾರು 10 ಹಣ್ಣಿನ ಗಿಡಗಳನ್ನು ನೆಡಲಾಯಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.