ಯಕ್ತಾಪುರ ಗ್ರಾಮದಲ್ಲಿ ಕುಡಿಯವ ನೀರಿಗಾಗಿನ ಹಾಹಾಕಾರ ಹಾಗೂ ಜಿಲ್ಲೆಯ 250 ಹಳ್ಳಿಗಳಲ್ಲಿ ನೀರಿನ ತತ್ವಾರ ಕುರಿತು ಮಾ.5 ರಂದು ಕನ್ನಡಪ್ರಭದಲ್ಲಿ ಪ್ರಕಟಗೊಂಡಿದ್ದ ವರದಿಯನ್ನು ಉಲ್ಲೇಖಿಸಿ, ಗುರುವಾರ ವಿಧಾನ ಪರಿಷತ್ತಿನಲ್ಲಿ ಪ್ರಸ್ತಾಪಿಸಿದ ಸದಸ್ಯ ಬಿ. ಜಿ. ಪಾಟೀಲ್ ಸರ್ಕಾರದ ಗಮನ ಸೆಳೆದಿದ್ದಾರೆ.
ಯಾದಗಿರಿ : ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಸಮೀಪದ ಯಕ್ತಾಪುರ ಗ್ರಾಮದಲ್ಲಿ ಕುಡಿಯವ ನೀರಿಗಾಗಿನ ಹಾಹಾಕಾರ ಹಾಗೂ ಜಿಲ್ಲೆಯ 250 ಹಳ್ಳಿಗಳಲ್ಲಿ ನೀರಿನ ತತ್ವಾರ ಕುರಿತು ಮಾ.5 ರಂದು ಕನ್ನಡಪ್ರಭದಲ್ಲಿ ಪ್ರಕಟಗೊಂಡಿದ್ದ ವರದಿಯನ್ನು ಉಲ್ಲೇಖಿಸಿ, ಗುರುವಾರ ವಿಧಾನ ಪರಿಷತ್ತಿನಲ್ಲಿ ಪ್ರಸ್ತಾಪಿಸಿದ ಸದಸ್ಯ ಬಿ. ಜಿ. ಪಾಟೀಲ್, ಈ ಕುರಿತು ಸರ್ಕಾರದ ಗಮನ ಸೆಳೆದಿದ್ದಾರೆ.
ಇನ್ನು, ಯಕ್ತಾಪುರ ಗ್ರಾಮಕ್ಕೆ ಗುರುವಾರ ಮಧ್ಯಾಹ್ನ ಭೇಟಿ ನೀಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್ ಒರಡಿಯಾ, ಅಲ್ಲಿನ ಪರಿಸ್ಥಿತಿ ಅವಲೋಕಿಸಿ, ಗ್ರಾಮಸ್ಥರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಕಸ್ತೂರ್ ಬಾ ಬಾಲಕಿಯರ ವಸತಿ ಶಾಲೆ ಹಾಗೂ ಅಲ್ಲಿನ ಆರೋಗ್ಯ ಕೇಂದ್ರದಲ್ಲಿ ನೀರಿನ ಸಮಸ್ಯೆ ಕುರಿತು ಮಾಹಿತಿ ಪಡೆದಿದ್ದಾರೆ. ಸದ್ಯದ ವ್ಯವಸ್ಥೆಯಲ್ಲಿ ಟ್ಯಾಂಕರ್ ಮೂಲಕ ನೀರು ಅಲ್ಲದೆ, ಮುಂದಿನ ದಿನಗಳಲ್ಲಿ ಇಂತಹ ಸಮಸ್ಯೆ ತಲೆದೋರದಂತೆ ಶಾಶ್ವತ ಕುಡಿಯುವ ನೀರಿನ ಯೋಜನೆ ರೂಪುರೇಷೆಗಳ ಕುರಿತು ಸಂಬಂಧಿತ ಇಲಾಖೆ ಅಧಿಕಾರಿಗಳೊಡನೆ ಚರ್ಚಿಸಿದ್ದಾರೆ.
6ವೈಡಿಆರ್15 : ವಿಧಾನ ಪರಿಷತ್ತಿನಲ್ಲಿ ಕನ್ನಡಪ್ರಭ ವರದಿ ಪ್ರಸ್ತಾಪಿಸಿದ ಸದಸ್ಯ ಬಿ. ಜಿ. ಪಾಟೀಲ್.
6ವೈಡಿಆರ್16 : ಮಾ. 5 ರಂದು ಕನ್ನಡಪ್ರಭದಲ್ಲಿ ಪ್ರಕಟಗೊಂಡ ವರದಿ.
6ವೈಡಿಆರ್17 : ಯಕ್ತಾಪುರ ಗ್ರಾಮಕ್ಕೆ ಗುರುವಾರ ಮಧ್ಯಾಹ್ನ ಭೇಟಿ ನೀಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್ ಒರಡಿಯಾ, ಅಲ್ಲಿನ ಪರಿಸ್ಥಿತಿ ಅವಲೋಕಿಸಿ, ಗ್ರಾಮಸ್ಥರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.
ಕೆಂಭಾವಿ ಸಮೀಪದ ಯಕ್ತಾಪುರದಲ್ಲಿ ಜಲಕ್ಷಾಮ
- ಯಾದಗಿರಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತ ವರದಿ
- ಜಿಲ್ಲಾ ಪಂಚಾಯತ್ ಸಿಇಒ ಲವೀಶ ಒರಡಿಯಾ ಗ್ರಾಮಕ್ಕೆ ಭೇಟಿ: ಪರಿಶೀಲನೆ