ಅಭ್ಯರ್ಥಿ ಯಾರೇ ಆದರೂ ಪಕ್ಷ ನಿಷ್ಠೆಯಿಂದ ಗೆಲ್ಲಿಸಲು ಶ್ರಮಿಸಿ

KannadaprabhaNewsNetwork |  
Published : Nov 01, 2026, 03:00 AM IST
ಪೊಟೊ-30ಕೆಎನ್‌ಎಲ್‌ಎಮ್‌1-ನೆಲಮಂಗಲ ನಗರದ ವಿವಿಎಸ್ ಪಾರ್ಟಿ ಹಾಲ್‌ನಲ್ ಬಿಜೆಪಿ ತಾಲೂಕು ಘಟಕದಿಂದ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ಹಿನ್ನಲೆ ಕರೆದಿದ್ದ ಆಕ್ಷಾಂಕಿಗಳು ಹಾಗೂ ಮುಖಂಡರ ಸಭೆಯನ್ನು ಉದ್ದೇಶಿಸಿಬಿಜೆಪಿ ತಾಲೂಕು ಅದ್ಯಕ್ಷ ಜಗದೀಶ್‌ಚೌಧರಿ ಮಾತನಾಡಿದರು.ಸಂದರ್ಭದಲ್ಲಿ ಮಾಜಿ ಶಾಸಕ ಎಂ.ವಿ.ನಾಗರಾಜು, ಬಿಜೆಪಿ ವಿಭಾಗ ಸಹ ಪ್ರಭಾರಿ ವಾಸುದೇವಮೂರ್ತಿ, ಮುಖಂಡ ಸಪ್ತಗಿರಿಶಂಕರ್‌ನಾಯಕ್,  ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಸತೀಶ್, ರಂಗನಾಥ್‌ಬಾಬುಇದ್ದಾರೆ. | Kannada Prabha

ಸಾರಾಂಶ

ನೆಲಮಂಗಲ: ಪ್ರತಿಯೊಬ್ಬ ಮುಖಂಡರು ಹಾಗೂ ಕಾರ್ಯಕರ್ತರು ಪಕ್ಷದ ಅಭ್ಯರ್ಥಿ ಯಾರೇ ಆಗಲಿ ಪಕ್ಷ ನಿಷ್ಠೆಯಿಂದ ಅಭ್ಯರ್ಥಿಯನ್ನು ಗೆಲ್ಲಿಸುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದ ಬಿಜೆಪಿ ತಾಲೂಕು ಅಧ್ಯಕ್ಷ ಜಗದೀಶ್‌ ಚೌಧರಿ ತಿಳಿಸಿದರು

ನೆಲಮಂಗಲ: ಪ್ರತಿಯೊಬ್ಬ ಮುಖಂಡರು ಹಾಗೂ ಕಾರ್ಯಕರ್ತರು ಪಕ್ಷದ ಅಭ್ಯರ್ಥಿ ಯಾರೇ ಆಗಲಿ ಪಕ್ಷ ನಿಷ್ಠೆಯಿಂದ ಅಭ್ಯರ್ಥಿಯನ್ನು ಗೆಲ್ಲಿಸುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದ ಬಿಜೆಪಿ ತಾಲೂಕು ಅಧ್ಯಕ್ಷ ಜಗದೀಶ್‌ ಚೌಧರಿ ತಿಳಿಸಿದರು. ‌

ನಗರದಲ್ಲಿ ಬಿಜೆಪಿ ತಾಲೂಕು ಘಟಕದಿಂದ ಜಿಪಂ ಹಾಗೂ ತಾಪಂ ಚುನಾವಣೆ ಹಿನ್ನೆಲೆಯಲ್ಲಿ ಕರೆದಿದ್ದ ಆಕ್ಷಾಂಕಿಗಳು ಹಾಗೂ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷ ಕ್ಷೇತ್ರದಲ್ಲಿ ಸದೃಢವಾಗಿದೆ. ಮತ್ತಷ್ಟು ಸಂಘಟಿಸಿ, ಮುಂದಿನ ಪಂಚಾಯಿತಿ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಸಹಕರಿಸಬೇಕು. ಕ್ಷೇತ್ರದಲ್ಲಿ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಯಲ್ಲಿ ಕಾರ್ಯಕರ್ತರು ಮನೆ ಮನೆ ಭೇಟಿ ನೀಡಿ ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡಿದ್ದಾರೆ. ಇದೀಗಾ ಕಾರ್ಯಕರ್ತರೇ ಚುನಾವಣೆಯಲ್ಲಿ ಸ್ಪರ್ದಿಸುವ ಅವಕಾಶ ದೊರಕಿದ್ದು ಮುಂಚೂಣಿಯಲ್ಲಿರುವ ನಾಯಕರು ಕಾರ್ಯಕರ್ತರನ್ನು ಗೆಲ್ಲಿಸಬೇಕಿದೆ ಎಂದರು.

ಕ್ಷೇತ್ರದಲ್ಲಿ ಬಿಜೆಪಿಯಿಂದ ಮುಂದಿನ ಚುನಾವಣೆಗೆ ಆಕಾಂಕ್ಷಿತರ ಪಟ್ಟಿ ಸಿದ್ದ ಪಡಿಸಿದ್ದು ಪಕ್ಷದ ವರಿಷ್ಠರು ತೀರ್ಮಾನ ಮಾಡಲಿದ್ದಾರೆ. ಪಕ್ಷದ ವರಿಷ್ಠರು ಯಾವ ವ್ಯಕ್ತಿಗೆ ಟಿಕೆಟ್ ನೀಡಿದರೂ ಭಿನ್ನಾಭಿಪ್ರಾಯಗಳಿಲ್ಲದೇ ಎನ್‌ಡಿಎ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದರು.

ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ ಮಾತನಾಡಿ, ಎನ್‌ಡಿಎ ಪಕ್ಷ ಕ್ಷೇತ್ರದಲ್ಲಿ ಸಮನ್ವಯತೆಯಿಂದ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರಿಗೆ 33 ಸಾವಿರ ಮತಗಳಿಂದ ಗೆಲುವು ತಂದುಕೊಟ್ಟಿತ್ತು. ಬಿಜೆಪಿ ಪರ ಸುಮಾರು 42 ಸಂಘಟನೆಗಳು ಕರ್ತವ್ಯ ನಿರ್ವಹಿಸುತ್ತಿವೆ. ಗ್ರಾಮಾಂತರ ಜಿಲ್ಲೆಯಲ್ಲೇ ಶಿಕ್ಷಕರ ಕ್ಷೇತ್ರದ ಎ.ಪಿ.ರಂಗನಾಥ್ ಅವರಿಗೆ ಹೆಚ್ಚಿನ ಮತ ನೀಡಿದ್ದು ಅವರ ಗೆಲುವಿಗೆ ಶ್ರಮಿಸಿದ್ದ ಎಲ್ಲರಿಗೂ ಧನ್ಯವಾದ ತಿಳಿಸಿದರು.‌

ಸಭೆಯಲ್ಲಿ ಮಾಜಿ ಶಾಸಕ ಎಂ.ವಿ.ನಾಗರಾಜು, ಬಿಜೆಪಿ ವಿಭಾಗದ ಸಹ ಪ್ರಭಾರಿ ವಾಸುದೇವಮೂರ್ತಿ, ಮುಖಂಡ ಸಪ್ತಗಿರಿ ಶಂಕರ್‌ನಾಯಕ್, ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಸತೀಶ್, ರಂಗನಾಥ್‌ಬಾಬು, ಎಸ್‌ಸಿ ಮೋರ್ಚಾ ಅಧ್ಯಕ್ಷ ಉಮೇಶ್, ಯುವ ಮೋರ್ಚಾ ಅಧ್ಯಕ್ಷ ಮಹೇಶ್, ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ‌ಸುರೇಶ್, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಬೃಂಗೇಶ್, ಮುಖಂಡ ನಾಗರಾಜು, ರಾಜಮ್ಮ ಪ್ರಕಾಶ್, ವೇದಾವತಿ, ಸೌಮ್ಯ, ರಾಜು, ಅಂಜನಮೂರ್ತಿ, ಎಂ.ಎಂ.ಗೌಡ, ಮುರುಳಿಧರ್, ಅರುಣ್‌ಗೌಡ, ಪ್ರಕಾಶ್, ರವೀಶ್, ಲೋಕೇಶ್, ರವಿ, ಕುಮಾರ್, ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.

ಪೊಟೊ-30ಕೆಎನ್‌ಎಲ್‌ಎಮ್‌1-

ನೆಲಮಂಗಲದಲ್ಲಿ ಮುಂದಿನ ಜಿಪಂ, ತಾಪಂ, ಗ್ರಾಮ ಪಂಚಾಯಿತಿ ಚುನಾವಣೆಗಳ ಆಕ್ಷಾಂಕಿಗಳು ಹಾಗೂ ಮುಖಂಡರ ಸಭೆಯಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ಜಗದೀಶ್‌ ಚೌಧರಿ ಮಾತನಾಡಿದರು. ಮಾಜಿ ಶಾಸಕ ಎಂ.ವಿ.ನಾಗರಾಜು, ಬಿಜೆಪಿ ವಿಭಾಗ ಸಹ ಪ್ರಭಾರಿ ವಾಸುದೇವಮೂರ್ತಿ, ಸಪ್ತಗಿರಿ ಶಂಕರ್‌ನಾಯಕ್ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ಹೋಟೆಲ್‌ ಈಜು ಕೊಳದಲ್ಲಿ 2 ವಿದೇಶಿಗರ ಸಾವು
ಪ್ರಜ್ವಲ್‌ ಜೀವಾವಧಿಗೆ ಕಾರಣ ಆದ ಮೂವರಿಗೆ ಕೇಂದ್ರ ಗೃಹ ಪ್ರಶಸ್ತಿ