ಪ್ರತಿ ಕ್ಷೇತ್ರದಲ್ಲಿ 5 ಸಾವಿರ ಮತದಾರರನ್ನು ನೋಂದಾಯಿಸಿ

KannadaprabhaNewsNetwork |  
Published : Nov 23, 2025, 01:15 AM IST
೨೨ಕೆಎಲ್‌ಆರ್-೧ಕೋಲಾರದ ಶಾಸಕ ಕೊತ್ತೂರು ಮಂಜುನಾಥ್ ಗೃಹ ಕಛೇರಿಯಲ್ಲಿ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಯ ಸಂಬಂಧಿಸಿದಂತೆ ಪೂರ್ವ ತಯಾರಿ ಸಭೆಯಲ್ಲಿ ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ತ ಮಾತನಾಡಿದರು. | Kannada Prabha

ಸಾರಾಂಶ

ವಿಧಾನಸಭೆ ಅಷ್ಟೇ ಪ್ರಾಮುಖ್ಯತೆ ವಿಧಾನ ಪರಿಷತ್ತಿಗೂ ನೀಡಬೇಕು. ಪಕ್ಷದಿಂದ ಮತದಾರರನ್ನು ನೋಂದಣಿ ಮಾಡಿಸಿ, ಮುಂದಿನ ಚುನಾವಣೆಯಲ್ಲಿ ಗೆಲ್ಲಬೇಕು ಅದಕ್ಕೆ ಕಾರ್ಯಕರ್ತರು ಮುಖಂಡರು ಜವಾಬ್ದಾರಿ ವಹಿಸಿಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ಕೋಲಾರಆಗ್ನೇಯ ಪದವೀಧರರ ಕ್ಷೇತ್ರ ವ್ಯಾಪ್ತಿಯ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ ಕನಿಷ್ಠ ಐದು ಸಾವಿರ ಮತದಾರರನ್ನು ನೋಂದಣಿ ಮಾಡಿಸಿ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠಗೊಳಿಸುವಂತೆ ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ತ ತಿಳಿಸಿದರು.ನಗರದ ಹೊರವಲಯದ ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕ ಕೊತ್ತೂರು ಮಂಜುನಾಥ್ ಗೃಹ ಕಚೇರಿಯಲ್ಲಿ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಯ ಸಂಬಂಧಿಸಿದಂತೆ ಪೂರ್ವ ತಯಾರಿ ಸಭೆಯಲ್ಲಿ ಮಾತನಾಡಿ, ವಿಧಾನಸಭೆ ಅಷ್ಟೇ ಪ್ರಾಮುಖ್ಯತೆ ವಿಧಾನ ಪರಿಷತ್ತಿಗೂ ನೀಡಬೇಕು. ಪಕ್ಷದಿಂದ ಮತದಾರರನ್ನು ನೋಂದಣಿ ಮಾಡಿಸಿ, ಮುಂದಿನ ಚುನಾವಣೆಯಲ್ಲಿ ಗೆಲ್ಲಬೇಕು ಅದಕ್ಕೆ ಕಾರ್ಯಕರ್ತರು ಮುಖಂಡರು ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದರು.

ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ, ಮುಂದಿನ ವರ್ಷ ನಡೆಯಲಿರುವ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಗೆ ಮತದಾರರನ್ನು ನೋಂದಣಿ ಮಾಡಿಸಿ ಕಾಂಗ್ರೆಸ್ ಪಕ್ಷವನ್ನು ಗಟ್ಟಿಮಾಡಕೊಳ್ಳಬೇಕು, ಪ್ರತಿ ಗ್ರಾ.ಪಂ ಹಂತದಲ್ಲಿ ಆಂದೋಲನ ಮಾಡಬೇಕು, ನಗರದಲ್ಲಿ ವಾರ್ಡ್ ವಾರು ಮಾಡಿಸಬೇಕು, ಈ ಭಾಗದಲ್ಲಿ ನಾಲ್ಕು ಜನ ಎಂಎಲ್ಸಿಗಳನ್ನು ಮಾಡಬೇಕು, ಆವಾಗ ಮಾತ್ರವೇ ಅಭಿವೃದ್ಧಿಗೆ ಸಹಾಯವಾಗುತ್ತದೆ, ಅದಕ್ಕಾಗಿ ಎಲ್ಲರೂ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದರು.ಎಂಎಲ್ಸಿ ಎಂ.ಎಲ್.ಅನಿಲ್ ಕುಮಾರ್ ಮಾತನಾಡಿ, ಪಕ್ಷ ಸಂಘಟನೆಗೆ ಇದು ಸಹಕಾರಿಯಾಗಿದೆ ಯಾವುದೇ ಪ್ರಮುಖ ಮಸೂದೆ ಜಾರಿ ಮಾಡಲು ವಿಧಾನ ಪರಿಷತ್ ಸಂಖ್ಯೆಯು ಮುಖ್ಯವಾಗಿದೆ, ಹಿಂದೆ ಈ ಚುನಾವಣೆಗಳನ್ನು ಕಾಂಗ್ರೆಸ್ ಪಕ್ಷವು ಗಂಭೀರವಾಗಿ ಪರಿಗಣಿಸಿಲ್ಲ. ಇವತ್ತು ಗೆಲ್ಲುವ ಸ್ಥಿತಿಗೆ ಬಂದಿದ್ದೇವೆ, ಐದು ಜಿಲ್ಲೆಗಳ ವ್ಯಾಪ್ತಿಯಲ್ಲಿ ಈ ಕ್ಷೇತ್ರವಿದ್ದು ಶಿಕ್ಷಣ ಸಂಸ್ಥೆಗಳು ಕಾಂಗ್ರೆಸ್ ಪಕ್ಷದ ಅಧೀನದಲ್ಲಿ ಇದ್ದು ಹಿಂದೆ ತ್ರಿಕೋನ ಸ್ಪರ್ಧೆ ಇತ್ತು ಮುಂದೆ ಮೈತ್ರಿಯಾಗಿ ಸ್ಪರ್ಧೆಯಲ್ಲಿ ಇದ್ದು, ಕಾಂಗ್ರೆಸ್ ಪಕ್ಷದಿಂದ ಈಗಿನಿಂದಲೇ ಪೂರ್ವ ತಯಾರಿ ಮಾಡಿಕೊಳ್ಳಬೇಕು, ಈ ವ್ಯಾಪ್ತಿಯ ೩೩ ವಿಧಾನಸಭಾ ಕ್ಷೇತ್ರದಲ್ಲಿ ಮುಂದೆ ಕನಿಷ್ಠ ೩೩ ಸಾವಿರ ಮತದಾರರನ್ನು ಕಾಂಗ್ರೆಸ್ ಪಕ್ಷವು ಮಾಡಿಸಬೇಕು ಎಂದು ತಿಳಿಸಿದರುಮಾಲೂರು ಶಾಸಕ ಕೆ.ವೈ.ನಂಜೇಗೌಡ, ಮಾಜಿ ಎಂಎಲ್ಸಿ ನಾರಾಯಣಸ್ವಾಮಿ, ಕಾಂಗ್ರೆಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ವಿ.ಗೌತಮ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೈಲಾಂಡಹಳ್ಳಿ ಮುರಳಿ, ಸೈಯದ್ ಅಫ್ಸರ್, ಸೀಸಂದ್ರ ಗೋಪಾಲಗೌಡ, ಎಸ್ಟಿ ಘಟಕದ ಜಿಲ್ಲಾ ಅಧ್ಯಕ್ಷ ಅಂಬರೀಷ್, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ