ಕನ್ಹೇರಿ ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲಿಸಿ: ಶ್ರೀಕಾಂತ ಸ್ವಾಮಿ

KannadaprabhaNewsNetwork |  
Published : Nov 14, 2026, 01:30 AM IST
ಚಿತ್ರ 13ಬಿಡಿಆರ್52 | Kannada Prabha

ಸಾರಾಂಶ

ಕಲಬುರಗಿಯಲ್ಲಿ ನ.15ರಂದು ಆಯೋಜಿಸಲಾಗಿರುವ ಕರ್ನಾಟಕ ರಾಜ್ಯ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳ ಸಂಘದ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಬೀದರ್ ಜಿಲ್ಲಾ ಘಟಕವು ಯಾವುದೇ ಬೆಂಬಲ ನೀಡುವುದಿಲ್ಲ ಎಂದು ಸಂಘದ ರಾಜ್ಯ ಖಜಾಂಚಿ ಶರತಕುಮಾರ ಅಭಿಮಾನ, ಜಿಲ್ಲಾಧ್ಯಕ್ಷ ಸಂತೋಷ ಪಾಟೀಲ ಹಾಗೂ ರಾಜ್ಯ ಪರಿಷತ್ ಸದಸ್ಯ ದೇವಪ್ಪ ಚಂಬಾಳೆ ಸ್ಪಷ್ಟಪಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೀದರ್

ಭಾರತದ ಸಂವಿಧಾನದಲ್ಲಿ ಮನುಸ್ಮೃತಿಯ ಅಂಶಗಳಿವೆ ಎಂದು ಹೇಳಿಕೆ ನೀಡಿರುವ ಕನ್ಹೇರಿ ಕಾಡಸಿದ್ದೇಶ್ವರ ಮಠದ ಸ್ವಾಮಿಜಿ ವಿರುದ್ಧ ರಾಜ್ಯ ಸರ್ಕಾರ ಕೂಡಲೇ ಕಠಿಣ ಕಾನೂನು ಕ್ರಮ ಕೈಗೊಂಡು, ದೇಶದ್ರೋಹ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಅಖಿಲ ಭಾರತ ಲಿಂಗಾಯತ ಸಮನ್ವಯ ಸಮಿತಿಯ ರಾಜ್ಯ ಸಂಚಾಲಕ ಶ್ರೀಕಾಂತ ಸ್ವಾಮಿ ಆಗ್ರಹಿಸಿದರು.

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮನುಸ್ಮೃತಿಯು ಶೂದ್ರರು ಹಾಗೂ ಮಹಿಳೆಯರ ವಿರೋಧಿಯಾಗಿದ್ದು, ಅದರಲ್ಲಿ ಸಮಾನತೆ ಮತ್ತು ಸ್ವಾತಂತ್ರ್ಯನದ ಆಶಯಗಳಿಲ್ಲ. ಇಂತಹ ಗ್ರಂಥದ ಅಂಶಗಳು ಸಂವಿಧಾನದಲ್ಲಿ ಇರಲು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದರು.

1927ರ ಡಿಸೆಂಬರ್ 25ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಸಾರ್ವಜನಿಕವಾಗಿ ದಹಿಸಿದ್ದರು. ಡಾ.ಅಂಬೇಡ್ಕರ್ ಅವರೇ ವಿರೋಧಿಸಿ ಸುಟ್ಟು ಹಾಕಿದ ಗ್ರಂಥದ ಅಂಶಗಳನ್ನು ಸಂವಿಧಾನದಲ್ಲಿ ಸೇರಿಸಲಾಗಿದೆ ಎಂದು ಹೇಳುವುದು ಎಷ್ಟು ಸಮಂಜಸ ಎಂದು ಪ್ರಶ್ನಿಸಿದ ಅವರು, ದೇಶದ್ರೋಹದ ಹೇಳಿಕೆ ನೀಡಿರುವ ಕನೇರಿ ಸ್ವಾಮಿಜಿ ಅವರು ತಮ್ಮ ಆರೋಪಕ್ಕೆ ಸಂಬಂಧಿಸಿದಂತೆ ಯಾವುದೇ ದಾಖಲೆಗಳಿದ್ದರೆ ಬಹಿರಂಗಪಡಿಸಿ, ಬಹಿರಂಗ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದರು.

ಹಿರಿಯ ದಲಿತ ಮುಖಂಡ ಶಂಕರರಾವ ದೊಡ್ಡಿ ಮಾತನಾಡಿ, ಕೇಂದ್ರ ಸರ್ಕಾರದ ಮನುವಾದಿ ಸಿದ್ಧಾಂತಗಳಿಗೆ ಬೆಂಬಲವಾಗಿ ನಿಂತಿರುವ ಸ್ವಯಂಘೋಷಿತ ಕನೇರಿ ಸ್ವಾಮಿಜಿ ಈ ಹಿಂದೆ ವಚನಗಳನ್ನು ತಿರುಚಿ ಹೇಳುವ ಕೆಲಸ ಮಾಡಿದ್ದಾರೆ. ಇದೀಗ ಸರ್ವ ಜನಾಂಗದ ಶಾಂತಿಯ ತೋಟವಾಗಿರುವ ರಾಜ್ಯದಲ್ಲಿ ಜನರ ನಡುವೆ ದ್ವೇಷ ಬಿತ್ತುವ ಹೇಳಿಕೆಗಳನ್ನು ನೀಡುತ್ತಿರುವುದು ಖಂಡನೀಯ ಎಂದರು.

ಸಾಮಾಜಿಕ ಚಿಂತಕ ಮಹೇಶ ಗೋರನಾಳಕರ್ ಮಾತನಾಡಿ, ಮನುಸ್ಮೃತಿಯಲ್ಲಿ ಮೌಢ್ಯ, ಜಾತೀಯತೆ ಮತ್ತು ಅಸಮಾನತೆ ಗಳಿವೆ. ಆದರೆ, ಸಂವಿಧಾನವು ಸಮಾನತೆ, ಸ್ವಾತಂತ್ರ್ಯರ ಸೇರಿದಂತೆ ಎಲ್ಲರಿಗೂ ಸಮಾನ ಅವಕಾಶಗಳನ್ನು ಕಲ್ಪಿಸಿದೆ. ಇಂತಹ ಶ್ರೇಷ್ಠ ಸಂವಿಧಾನದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಕನೇರಿ ಸ್ವಾಮಿಜಿ ವಿರುದ್ಧ ಸರ್ಕಾರ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ, ಗಡಿಪಾರು ಮಾಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಸಿದರು.

ಸಮಾಜದಲ್ಲಿ ದ್ವೇಷಭಾವನೆ ಮೂಡಿಸುವಂತಹ ಹೇಳಿಕೆ ನೀಡಿರುವ ಕನೇರಿ ಸ್ವಾಮಿಜಿ ಏಳು ದಿನಗಳೊಳಗಾಗಿ ಬಹಿರಂಗ ವಾಗಿ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ದೇಶದ ಅಂಬೇಡ್ಕರ್‌ ವಾದಿಗಳು ಹಾಗೂ ಸಂವಿಧಾನ ಪ್ರೇಮಿಗಳು ಅವರ ವಿರುದ್ಧ ದೊಡ್ಡ ಮಟ್ಟದ ಹೋರಾಟ ನಡೆಸುವುದರ ಜತೆಗೆ ಎಲ್ಲೆಡೆ ಘೇರಾವ್ ಹಾಕಲಿದ್ದಾರೆ ಎಂದು ಎಚ್ಚರಿಸಿದರು.

ಸಾಮಾಜಿಕ ಕಾರ್ಯಕರ್ತ ಜಗದೀಶ್ವರ ಬಿರಾದಾರ ಮಾತನಾಡಿದರು. ಸಾಮಾಜಿಕ ಚಿಂತಕ ರಾಜಕುಮಾರ ಪಾಟೀಲ್ ಹಾಗೂ ಪ್ರಕಾಶ ರಾವಣ ಪತ್ರಿಕಾಗೋಷ್ಠಿಯಲ್ಲಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳ ಸರ್ವತೋಮುಖ ಪ್ರಗತಿಗೆ ಶ್ರಮಿಸಿ
ಎಸಿಯಾಗಿ ಪದೋನ್ನತಿ ಹೊಂದಿದ ತಹಸೀಲ್ದಾರ್‌ ಬೋಸಗಿ