21 ದಿನಗಳೊಳಗೆ ಜನನ-ಮರಣಗಳ ನೋಂದಣಿ ಮಾಡಿ

KannadaprabhaNewsNetwork |  
Published : Jun 23, 2025, 12:33 AM IST
ಜಿಲ್ಲಾಧಿಕಾರಿಗಳ ಕೇಸ್ವಾನ್ ಕಚೇರಿ ಸಭಾಂಗಣದಲ್ಲಿ ವಿಡಿಯೋ ಸಂವಾದದ ಮೂಲಕ ನಡೆದ ಜನನ-ಮರಣ ನೊಂದಣಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಮಾತನಾಡಿದರು. | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯಲ್ಲಿ ಜರುಗುವ ಪ್ರತಿಯೊಂದು ಜನನ ಮರಣ ಘಟನೆಗಳನ್ನು ನಿಗದಿತ ೨೧ ದಿನಗಳೊಳಗಾಗಿ ನೋಂದಣಿಗೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಜಿಲ್ಲೆಯಲ್ಲಿ ಜರುಗುವ ಪ್ರತಿಯೊಂದು ಜನನ ಮರಣ ಘಟನೆಗಳನ್ನು ನಿಗದಿತ ೨೧ ದಿನಗಳೊಳಗಾಗಿ ನೋಂದಣಿಗೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕೇಸ್ವಾನ್ ಕಚೇರಿ ಸಭಾಂಗಣದಲ್ಲಿ ವಿಡಿಯೋ ಸಂವಾದದ ಮೂಲಕ ನಡೆದ ಜನನ-ಮರಣ ನೋಂದಣಿಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ತಾಲೂಕಾ ಪಂಚಾಯತಿ ಕಾರ್ಯನಿವಾಹಕ ಅಧಿಕಾರಿಗಳು, ಪುರಸಭೆ ಮುಖ್ಯಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ೨೧ ದಿನಗಳೊಳಗಾಗಿ ಜನನ-ಮರಣ ನೋಂದಣಿಗೆ ಅಗತ್ಯ ಕ್ರಮ ವಹಿಸಬೇಕು. ತಾಲೂಕಾ ಮಟ್ಟದಲ್ಲಿ ತರಬೇತಿಯನ್ನು ಆಯೋಜಿಸಿ. ನೋಂದಣಿಯಾಗದೇ ಇರುವುದರಿಂದ ಉಂಟಾಗುವ ತೊಡಕುಗಳ ಕುರಿತು ಸೂಕ್ತ ತಿಳುವಳಿಕೆ ಮೂಡಿಸಿ ನಿಗದಿತ ಕಾಲಾವಧಿಯಲ್ಲಿ ಜನನ-ಮರಣ ನೋಂದಣಿಯಾಗುವಂತೆ ನೋಡಿಕೊಳ್ಳಬೇಕು. ವಿಶೇಷವಾಗಿ ಪಾಲಕರ ವಿದ್ಯಾರ್ಹತೆ, ಉದ್ಯೋಗ, ಮರಣ ಹೊಂದಿದವರ ವಯಸ್ಸು ಸರಿಯಾಗಿ ನಿರ್ವಹಿಸದೇ ಇರುವುದರಿಂದ ಮಾಹಿತಿ ಕ್ರೋಢಿಕರಣಕ್ಕೆ ಸಮಸ್ಯೆಯಾಗುತ್ತದೆ. ಮಾಹಿತಿದಾರರ ಕಾಲಂನಲ್ಲಿ ಜನನ ಹಾಗೂ ಮರಣ ಸಂಬಂಧಿಸಿದಂತೆ ಅವರ ಸಂಬಂಧಿಕರಿಂದ ಕಡ್ಡಾಯವಾಗಿ ಸಹಿ ಪಡೆಯಬೇಕು ಎಂದು ಸೂಚಿಸಿದರು.

ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಾಗುವ ಜನನ-ಮರಣ ಹಾಗೂ ನಿರ್ಜೀವ ಜನನ ಘಟನೆಗಳನ್ನು ನಿಗದಿತ ಅವಧಿಯಲ್ಲಿಯೇ ದಾಖಲಿಸಿ, ಅನುಮೋದಿಸಬೇಕು. ಆರೋಗ್ಯ ಸಂಸ್ಥೆಗಳ ವೈದ್ಯಾಧಿಕಾರಿಗಳು ಹಾಗೂ ನಗರ ಸ್ಥಳೀಯ ಸಂಸ್ಥೆಯ ಆರೋಗ್ಯ ನಿರೀಕ್ಷಕರು ಯಾವುದೇ ಕಾರಣಕ್ಕೂ ಜನನ-ಮರಣ ಘಟನೆ ಸಂಭವಿಸಿ ೩೦ ದಿನಗಳ ನಂತರ ದಾಖಲಿಸಬಾರದು. ಅನಿವಾರ್ಯವಾಗಿ ೩೦ ದಿನಗಳ ನಂತರ ೩೬೫ ದಿನಗಳ ಒಳಗಾಗಿ ದಾಖಲಿಸಬೇಕಾಗಿ ಅನಿವಾರ್ಯತೆ ಇದ್ದಲ್ಲಿ ಗ್ರಾಮಾಂತರ ಪ್ರದೇಶಕ್ಕೆ ಸಂಬಂಧಿಸಿದಂತೆ ತಹಸೀಲ್ದಾರ್‌ರು ಹಾಗೂ ನಗರ/ಪಟ್ಟಣ ಪ್ರದೇಶಕ್ಕೆ ಸಂಬಂಧಪಟ್ಟಲ್ಲಿ ಆಯುಕ್ತರು, ಮಹಾನಗರ ಪಾಲಿಕೆ, ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿಯವರ ಲಿಖಿತ ಅನುಮತಿ ಪಡೆದು ದಾಖಲಿಸಲು ಕ್ರಮ ವಹಿಸಬೇಕು ಎಂದು ಹೇಳಿದರು.

ಜನನ-ಮರಣ, ನಿರ್ಜೀವ ಜನನ ಘಟನೆಗಳ ನೋಂದಣಿ ನಮೂನೆಗಳಾದ ೧, ೨ ಹಾಗೂ ೩ರ ಕಾನೂನು ಭಾಗ ಹಾಗೂ ಸಾಂಖ್ಯಿಕ ಭಾಗದ ಎಲ್ಲ ಕಾಲಂಗಳನ್ನು ಸ್ಪಷ್ಟವಾದ ಬರವಣಿಗೆಯಲ್ಲಿ ಹಾಗೂ ಪೂರ್ಣ ಪ್ರಮಾಣದಲ್ಲಿ ಭರ್ತಿ ಮಾಡಬೇಕು. ಗ್ರಾಮಾಂತರ ಪ್ರದೇಶದ ಎಲ್ಲಾ ನೋಂದಣಿ ಹಾಗೂ ಉಪನೋಂದಣಾಧಿಕಾರಿಗಳಿಂದ ಆರೋಗ್ಯ ಸಂಸ್ಥೆಗಳು, ಸಂಬಂಧಿಸಿದ ತಹಸೀಲ್ದಾರ್‌ರರು ಹಾಗೂ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರತಿ ತಿಂಗಳ ೫ ರೊಳಗಾಗಿ ಸಾಂಖ್ಯಿಕ ಭಾಗದ ಮಾಹಿತಿಯನ್ನು ಸ್ವೀಕರಿಸಿ, ಆ ಮಾಹೆಯ ೧೦ರೊಳಗಾಗಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿಗೆ ಮಾಹಿತಿ ಸಲ್ಲಿಸಬೇಕು. ಪಟ್ಟಣ ಪ್ರದೇಶದ ನೋಂದಣಿದಾರರು ೧೦ನೇ ದಿನಾಂಕದೊಳಗಾಗಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಜಿಲ್ಲೆಯ ನೋಂದಣಾಧಿಕಾರಿಗಳು ಹಾಗೂ ಉಪನೋಂದಣಾಧಿಕಾರಿಗಳಿಗೆ ನಿಗದಿತ ಸಮಯದಲ್ಲಿ ಸಾಂಖ್ಯಿಕ ಭಾಗದ ಮಾಹಿತಿಯನ್ನು ಒದಗಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯತಿ ಸಿಇಒ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಇಂಡಿ ಉಪವಿಭಾಗಾಧಿಕಾರಿ ಅನುರಾಧಾ ವಸ್ತ್ರದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಕೆ.ಕೆ.ಚವ್ಹಾಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸಂಪತ ಗುಣಾರಿ, ಜಿಲ್ಲಾ ಸಂಖ್ಯಾ ಸಂಗ್ರಹಾಣಾಧಿಕಾರಿ ಅಲ್ತಾಫಅಹ್ಮದ ಬಾಶಾಲಾಲ ಮನಿಯಾರ್‌, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೆಶಕ ಬಿ.ಎ.ಸೌದಾಗರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಅಮರೇಶ ದೊಡ್ಡಮನಿ ಸೇರಿದಂತೆ ಮುಂತಾದವರು ಸಭೆಯಲ್ಲಿ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ