ಹಾವೇರಿ: ಬಿಜೆಪಿ ಎಲ್ಲ ಪಕ್ಷಗಳಿಗಿಂತಲೂ ವಿಭಿನ್ನವಾಗಿದ್ದು, ಕಾರ್ಯಕರ್ತರ ಕೇಂದ್ರಿತ ಪಕ್ಷವಾಗಿದೆ. ಪ್ರತಿ ಬಾರಿಯೂ ಬಿಜೆಪಿ ನೂತನ ಸದಸ್ಯತ್ವವನ್ನು ನೋಂದಾಯಿಸುವ ಮೂಲಕ ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಪಕ್ಷದ ಕಾರ್ಯಕ್ಕೆ ಸಜ್ಜುಗೊಳಿಸಲಾಗುತ್ತದೆ ಎಂದು ಮಾಜಿ ಶಾಸಕ, ಬಿಜೆಪಿ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ ಹೇಳಿದರು.
ಇದೇ ಸಂದರ್ಭದಲ್ಲಿ ಸದಸ್ಯತ್ವ ಅಭಿಯಾನದ ಉಚಿತ ಮಿಸ್ ಕಾಲ್ಡ್ ಸಂಖ್ಯೆಯಾದ ೮೮೦೦೦೦೨೦೨೪ ಸಂಖ್ಯೆಯ ಫಲಕವನ್ನು ಬಿಡುಗಡೆಗೊಳಿಸಿದರು.
ನಿಕಟಪೂರ್ವ ರಾಜ್ಯ ಪ್ರಧಾನ ಕಾರ್ಯದರ್ಶಿ, ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಸದಸ್ಯತ್ವ ಅಭಿಯಾನದ ವಿಭಾಗ ಪ್ರಭಾರಿ ಮಹೇಶ್ ತೆಂಗಿನಕಾಯಿ ಮಾತನಾಡಿ, ಸದಸ್ಯತ್ವ ಅಭಿಯಾನ ಇಡಿ ದೇಶಾದ್ಯಂತ ಸೆ. ೨ರಂದು ಉದ್ಘಾಟನೆಗೊಳ್ಳಲಿದ್ದು, ಜಿಲ್ಲಾ ಮಟ್ಟದಲ್ಲಿ ಸೆ. ೬ರಂದು ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಬೇಕು. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಒಂದೂವರೆ ಲಕ್ಷಕ್ಕೂ ಅಧಿಕ ಜನರನ್ನು ಬಿಜೆಪಿಯ ಸದಸ್ಯರನ್ನಾಗಿ ನೋಂದಾಯಿಸಬೇಕು ಎಂದರು.ಸದಸ್ಯತ್ವ ಅಭಿಯಾನದ ಜಿಲ್ಲಾ ಪ್ರಭಾರಿ ಪ್ರಕಾಶ ಶೃಂಗೇರಿ, ಜಿಲ್ಲಾ ಸಂಚಾಲಕ ಮಂಜುನಾಥ ಗಾಣಿಗೇರ ಮಾತನಾಡಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಡಾ. ಸಂತೋಷ ಆಲದಕಟ್ಟಿ, ನಂಜುಂಡೇಶ ಕಳ್ಳೇರ, ರಾಜ್ಯ ಉಪಾಧ್ಯಕ್ಷ ಡಾ. ಬಸವರಾಜ ಕೇಲಗಾರ, ಹಾವೇರಿ ವಿಧಾನಸಭಾ ಕ್ಷೇತ್ರದ ಮುಖಂಡ ಗವಿಸಿದ್ದಪ್ಪ ದ್ಯಾಮಣ್ಣವರ, ಜಿಲ್ಲೆ ಮತ್ತು ಮಂಡಲದ ಪದಾಧಿಕಾರಿಗಳು, ಮೋರ್ಚಾ ಪದಾಧಿಕಾರಿಗಳು, ಪ್ರಕೋಷ್ಠಗಳ ಸಂಚಾಲಕರು, ಸಹ ಸಂಚಾಲಕರು ಹಾಗೂ ಅಭಿಯಾನದ ಸಂಚಾಲಕ, ಸಹ ಸಂಚಾಲಕರು ಇದ್ದರು.