ಎಸ್‌ಐಆರ್ ಪ್ರಕ್ರಿಯೆಯಲ್ಲಿ ಹೆಸರು ನೋಂದಾಯಿಸಿ: ಎಂ.ಎಸ್.ವೀಣಾ

KannadaprabhaNewsNetwork |  
Published : Jul 16, 2026, 02:00 AM IST
15ಕೆಎಂಎನ್ ಡಿ12 | Kannada Prabha

ಸಾರಾಂಶ

ಎಸ್‌ಐಆರ್ ಕಾರ್ಯಕ್ರಮ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಹೀಗಾಗಿ ಬಿಎಲ್‌ಒಗಳು ನಿಮ್ಮ ಮನೆ ಬಾಗಿಲಿಗೆ ಬಂದಾಗ ಅವರಿಗೆ ಸಂಪೂರ್ಣ ಮಾಹಿತಿ ನೀಡಿ ಸಹಕರಿಸಬೇಕು. ಜೊತೆಗೆ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಎಲ್ಲರೂ ಭಾಗವಹಿಸಬೇಕು.

ಕನ್ನಡಪ್ರಭ ವಾರ್ತೆ ಪಾಂಡವಪುರ

ಮತದಾರರು ಮತದಾನದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ರಮ ನಡೆಸುತ್ತಿದೆ. ಹೀಗಾಗಿ ಪ್ರತಿಯೊಬ್ಬ ಮತದಾರರು ಎಸ್‌ಐಆರ್ ಪ್ರಕ್ರಿಯೆಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ತಾಪಂ ಇಒ ಎಂ.ಎಸ್.ವೀಣಾ ಹೇಳಿದರು.

ಪಟ್ಟಣದ ತಾಪಂ ಆವರಣದಲ್ಲಿ ಜಿಲ್ಲಾ ಸ್ವೀಪ್ ಸಮಿತಿ, ತಾಪಂ, ವಿಕಲಚೇತನರ ಹಾಗೂ ಜಿಲ್ಲಾ ಹಿರಿಯ ನಾಗರಿಕರ ಸಬಲೀಕರ ಆಶ್ರಯದಲ್ಲಿ ನಡೆದ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 ವಿಕಲಚೇತನರು ಹಾಗೂ ಹಿರಿಯ ನಾಗರಿಕ ಮತದಾರರಿಗೆ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.

ಎಸ್‌ಐಆರ್ ಕಾರ್ಯಕ್ರಮ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಹೀಗಾಗಿ ಬಿಎಲ್‌ಒಗಳು ನಿಮ್ಮ ಮನೆ ಬಾಗಿಲಿಗೆ ಬಂದಾಗ ಅವರಿಗೆ ಸಂಪೂರ್ಣ ಮಾಹಿತಿ ನೀಡಿ ಸಹಕರಿಸಬೇಕು. ಜೊತೆಗೆ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಎಲ್ಲರೂ ಭಾಗವಹಿಸಬೇಕು ಎಂದರು.

ಎರಡು ಕಡೆ ಮತಪಟ್ಟಿ ಇರುವವರು, ಮೃತಪಟ್ಟವರಿದ್ದರೆ ಅಥವಾ ಬೇರೆ ಕಡೆ ವಾಸವಿದ್ದರೆ ಅಂತಹವರ ಹೆಸರು ಡಿಲೀಟ್ ಮಾಡಬೇಕಾಗಿರುತ್ತದೆ. ವಿಕಲಚೇತನರು ತಪ್ಪದೇ ಮತಪಟ್ಟಿಯಲ್ಲಿ ಹೆಸರು ನೋಂದಾಯಿಸುವ ಮೂಲಕ ಎಲ್ಲಾ ಮತದಾರರಿಗೆ ಅರಿವು ಮೂಡಿಸಬೇಕು ಎಂದರು.

ಜಾಥಾದಲ್ಲಿ ಪಾಲ್ಗೊಂಡಿದ್ದ ವಿಕಲಚೇತನರು ‘ನಮ್ಮ ಮತ ನಮ್ಮ ಹಕ್ಕು ನಮ್ಮ ಜವಾಬ್ದಾರಿ, 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಮತಪಟ್ಟಿ ಪರಿಷ್ಕರಣೆಯಾಗಬೇಕು, ಕಡ್ಡಾಯವಾಗಿ ಮತದಾರರು ನೋಂದಣಿಯಲ್ಲಿ ಭಾಗವಹಿಸಿ 18 ವರ್ಷ ತುಂಬಿದ ವಿಶೇಷ ಚೇತನರು ಮತಪಟ್ಟಿಯಲ್ಲಿ ನೋಂದಾಯಿಸುವುದು, ಗಣತಿ ನಮೂನೆಯಲ್ಲಿ ತಮ್ಮ ಇತ್ತೀಚಿನ ಭಾವಚಿತ್ರ ಬದಲಾಯಿಸಿಕೊಳ್ಳಬೇಕು ಎಂದರು.

ಉದಾಸೀನ ತೋರದೆ ಎಸ್‌ಐಆರ್ ನೋಂದಣಿ ಪ್ರಕ್ರಿಯೆಯಲ್ಲಿ ಭಾಗವಹಿಸಿ, ವಿಕಲಚೇತನ ಮತದಾರರು ಮತದಾರರ ನೋಂದಣಿ ಪಟ್ಟಿಯಲ್ಲಿ ನೋಂದಾಯಿಸುವುದು ಎಂಬುದು ಸೇರಿದಂತೆ ವಿವಿಧ ಬರಹಗಳನ್ನೊಳಗೊಂಡ ನಾಮಫಲಕಗಳನ್ನಿಡಿದು ಘೋಷಣೆಗಳನ್ನು ಕೂಗುತ್ತಾ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ರಮ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಿದರು.

ಈ ವೇಳೆ ತಾಪಂ ಕಚೇರಿ ಎಡಿಪಿಆರ್ ಮಹೇಶ್, ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತೆ ಸ್ವಾತಿ, ತಾಪಂ ಸಿಬ್ಬಂದಿ, ವಿಕಲಚೇತನರು ಹಾಗೂ ಹಿರಿಯ ನಾಗರಿಕರು ಭಾಗಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದಿನಪತ್ರಿಕೆ ಓದುವ ಹವ್ಯಾಸದಿಂದ ಜ್ಞಾನದ ವೃದ್ಧಿ: ಅಷ್ಟೂರೆ
ರೈತ ಸಂಘದ ಹನೂರು ತಾಲೂಕು ಅಧ್ಯಕ್ಷರಾಗಿ ಅಜ್ಜಿಪುರ ರಾಜಣ್ಣ ಆಯ್ಕೆ