ನೆಲಮಂಗಲ: ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಮಾಡಿದ್ದು ಅರ್ಹ ಮತದಾರರು ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ನ.6 ಕೊನೆಯ ದಿನವಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ ಬಿ.ಜಿ.ಮಂಜುಳಾ ಮನವಿ ತಿಳಿಸಿದ್ದಾರೆ.
ಅರ್ಜಿ ಸ್ವೀಕಾರ:
ಕರಡು ಮತದಾರರ ಪಟ್ಟಿಯನ್ನು ಅ.25ರಂದು ಪ್ರಕಟಿಸಲಾಗಿದೆ. ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಹಕ್ಕು ಮತ್ತು ಆಕ್ಷೇಪಣಾ ಅರ್ಜಿಗಳನ್ನು ಸಲ್ಲಿಸಲು ನ.25ರಿಂದ ಡಿ.10ರವರೆಗೆ ಕಾಲಾವಕಾಶವಿದೆ. ಡಿ.30ರಂದು ಅಂತಿಮ ಮತದಾರರ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಮೂನೆ-19ರ ಅರ್ಜಿಗಳನ್ನು ಆಯಾ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ತಹಸೀಲ್ದಾರ್ ಕಚೇರಿಗಳಲ್ಲಿ ಸ್ವೀಕರಿಸಲಾಗುತ್ತದೆ. ಯಾವುದೇ ರೀತಿಯ ಗೊಂದಲವಿದ್ದಲ್ಲಿ ತಾಲೂಕು ಕಚೇರಿಗೆ ಬೇಟಿ ನೀಡಿ ಬಗ್ಗೆ ಹರಿಸಿಕೊಳ್ಳಬಹುದು ಎಂದರು.ಬೆಂಗಳೂರು ಶಿಕ್ಷಕರ ಕ್ಷೇತ್ರದ ವ್ಯಾಪ್ತಿಯ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಹಾಗೂ ರಾಮನಗರ ಜಿಲ್ಲೆಯಲ್ಲಿ ವಾಸವಾಗಿರಬೇಕು. ಸುಮಾರು 3 ವರ್ಷಗಳ ಅವಧಿಯಲ್ಲಿ ರಾಜ್ಯ ಸರ್ಕಾರದಿಂದ ಮಾನ್ಯತೆ ಹೊಂದಿರುವ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿನ ಪ್ರೌಢಶಾಲೆ ವಿಭಾಗದಲ್ಲಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸಿರಬೇಕು. ಯಾವುದೇ ಶಿಕ್ಷಣ ಸಂಸ್ಥೆಯಲ್ಲಿ ಖಾಯಂ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಚುನಾವಣಾ ಶಿರಸ್ತೆದಾರ್ ಚೇತನ್, ಸಿಬ್ಬಂದಿ ಸೌಮ್ಯ, ಸಿದ್ದಗಂಗಮ್ಮ, ಈಶ್ವರ್ ಮತ್ತಿತರರು ಉಪಸ್ಥಿತರಿದ್ದರು.ಪೊಟೊ-29ಕೆಎನ್ಎಲ್‌ಎಮ್ 2-
ನೆಲಮಂಗಲ ತಾಲೂಕು ಕಚೇರಿಯಲ್ಲಿ ಸಹಾಯಕ ಚುನಾವಣಾಧಿಕಾರಿ ಬಿ.ಜಿ.ಮಂಜುಳಾ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.