ಮಾವು, ಟೊಮೆಟೋ ಬೆಳೆ ವಿಮೆಗೆ ನೋಂದಣಿ

KannadaprabhaNewsNetwork |  
Published : Jul 10, 2024, 12:37 AM IST

ಸಾರಾಂಶ

ದೊಡ್ಡಬಳ್ಳಾಪುರ: ತೋಟಗಾರಿಕಾ ಇಲಾಖೆಯಿಂದ 2024-25ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ (rwbcis)ಯಡಿ ವಿವಿಧ ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಸಬಹುದಾಗಿದೆ.

ದೊಡ್ಡಬಳ್ಳಾಪುರ: ತೋಟಗಾರಿಕಾ ಇಲಾಖೆ ವತಿಯಿಂದ 2024-25ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ(RWBCIS)ಯಡಿ ವಿವಿಧ ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಸಬಹುದಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕನ್ನು ವಿಮೆ ವ್ಯಾಪ್ತಿಗೆ ಒಳಪಡಿಸಲಾಗಿದೆ. ಹವಾಮಾನ ಅಂಶಗಳಾದ ತಾಪಮಾನ, ಗಾಳಿ ವೇಗ, ಮಳೆ ಪ್ರಮಾಣ, ಆರ್ದ್ರತೆ ಇತ್ಯಾದಿ ಮಾಹಿತಿಗಳನ್ನು ಸರ್ಕಾರದಿಂದ ಅಧಿಸೂಚಿತ ಟೆಲಿ ಮೆಟ್ರಿಕ್ ಮಳೆ ಮಾಪನ ಕೇಂದ್ರ ಮತ್ತು ಸ್ವಯಂಚಾಲಿತ ಹವಾಮಾನ ಕೇಂದ್ರಗಳಲ್ಲಿ ದಾಖಲಾಗುವ ಅಂಶಗಳ ಆಧಾರದ ಮೇಲೆ ಬೆಳೆ ವಿಮೆ ನಷ್ಟವನ್ನು ತೀರ್ಮಾನಿಸಲಾಗುತ್ತದೆ.

ಬೆಳೆ ಸಾಲ ಪಡೆಯದ ರೈತರು ನಿಗದಿತ ಅರ್ಜಿಯೊಂದಿಗೆ ಪ್ರಸಕ್ತ ಸಾಲಿನ ಪಹಣಿ, ಕಂದಾಯ ರಶೀದಿ, ಖಾತೆ ಪುಸ್ತಕ, ಬ್ಯಾಂಕ್ ಖಾತೆ ಪುಸ್ತಕ, ಆಧಾರ್ ನಕಲು ಪ್ರತಿ ಮತ್ತು ಸ್ವಯಂಘೋಷಿತ ಬೆಳೆ ವಿವರಗಳನ್ನು ಹತ್ತಿರದ ರಾಷ್ಟ್ರೀಯ ಅಧಿಕೃತ ಬ್ಯಾಂಕು, ಸಾಮಾನ್ಯ ಸೇವಾ ಕೇಂದ್ರ, ಗ್ರಾಮ ಒನ್ ಕೇಂದ್ರಗಳಲ್ಲಿ ನೋಂದಾಯಿಸುವುದು. ವಿಮೆ ಮಾಡಿಸುವ ರೈತರು ಫ್ರೂಟ್ಸ್ ತಂತ್ರಾಂಶದ ನೋಂದಣಿ ಸಂಖ್ಯೆ ಹೊಂದಿರಬೇಕು, ನೋಂದಣಿ ಸಂಖ್ಯೆಗೆ ಪಹಣಿ ವಿವರಗಳನ್ನು ಜೋಡಿಸಬೇಕಿದೆ. ನೋಂದಣಿ ಸಂಖ್ಯೆ ಇಲ್ಲದ ರೈತರು ನೋಂದಣಿ ಸಂಖ್ಯೆಯನ್ನು ಮಾಡಿಕೊಂಡು ವಿಮೆಯಲ್ಲಿ ಪಾಲ್ಗೊಳ್ಳಬೇಕಿರುತ್ತದೆ.

ಬೆಳೆ ಸಾಲ ಪಡೆದ ರೈತರನ್ನು ಸಂಬಂಧಿಸಿದ ಬ್ಯಾಂಕಿನವರು ವಿಮೆ ವ್ಯಾಪ್ತಿಗೆ ನೋಂದಾಯಿಸಲಿದ್ದು, ಯೋಜನೆಯಲ್ಲಿ ನೋಂದಾಯಿಸಿಕೊಳ್ಳಲು ಇಚ್ಚಿಸದ ರೈತರು ಸಂಬಂಧಿಸಿದ ಬ್ಯಾಂಕ್ ಶಾಖೆಯ ವ್ಯವಸ್ಥಾಪಕರಿಗೆ ನೋಂದಣಿಯ ಅಂತಿಮ ದಿನಾಂಕಕ್ಕಿಂತ 7 ದಿನಗಳು ಮುಂಚಿತವಾಗಿ ಮುಚ್ಚಳಿಕೆ ಪತ್ರ ನೀಡಿದ್ದಲ್ಲಿ ಅಂತಹ ರೈತರನ್ನು ಯೋಜನೆಯಿಂದ ಕೈಬಿಡಲು ಅವಕಾಶವಿರುತ್ತದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ KSHEMA(ಕ್ಷೇಮ) ಅಧಿಸೂಚಿತ ವಿಮಾ ಸಂಸ್ಥೆಯಾಗಿದೆ. ಮಾವು ಬೆಳೆ ವಿಮೆ ನೋಂದಣಿಗೆ ಜುಲೈ 31, ಟೊಮೆಟೋ ಬೆಳೆ ವಿಮೆಗೆ ಜುಲೈ 15 ಕೊನೆಯ ದಿನಾಂಕ ಆಗಿದೆ. ಹೆಚ್ಚಿನ ಮಾಹಿತಿಗೆ ನೆಲಮಂಗಲ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿಪಂ): 9880461607, ರೈತ ಸಂಪರ್ಕ ಕೇಂದ್ರದ ಅಧಿಕಾರಿ, ಹತ್ತಿರದ ಬ್ಯಾಂಕ್ ಶಾಖೆ ಹಾಗೂ ವಿಮಾ ಕಂಪನಿ ಸಹಾಯವಾಣಿ ಸಂಖ್ಯೆ: 080 26564537, ಕಸಬಾ ಹೋಬಳಿ ಸಹಾಯಕ ತೋಟಗಾರಿಕೆ ಅಧಿಕಾರಿ -7337866626, ಸೋಂಪುರ ಹೋಬಳಿ ಸಹಾಯಕ ತೋಟಗಾರಿಕೆ ಅಧಿಕಾರಿ: 8884829971, ತ್ಯಾಮಗೊಂಡ್ಲು ಹೋಬಳಿ ಸಹಾಯಕ ತೋಟಗಾರಿಕೆ ಅಧಿಕಾರಿ: 8197655732, ನೆಲಮಂಗಲ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ): 9902581832 ಈ ಸಂಖ್ಯೆಗಳಿಗೆ ಸಂಪರ್ಕಿಸಬಹುದು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

1.7 ಕೋಟಿಯ ಮೊಬೈಲ್‌ಗಳುಮರಳಿ ಮಾಲಿಕರಿಗೆ ಹಸ್ತಾಂತರ
ಕೆಲಸಕ್ಕಿದ್ದ ಉದ್ಯಮಿ ಮನೆಯಲ್ಲಿ43 ಲಕ್ಷದ ಆಭರಣ ಕದ್ದ ದಂಪತಿ