ಮಣಿಪಾಲ್ ಆರೋಗ್ಯ ಕಾರ್ಡ್-2025ರ ನೋಂದಣಿ ಆರಂಭ

KannadaprabhaNewsNetwork |  
Published : Jun 25, 2025, 01:18 AM IST
ಪೋಟೋ:24ಎಸ್‌ಎಂಜಿಕೆಪಿ02ಶಿವಮೊಗ್ಗದ ಪತ್ರಿಕಾಭವನದಲ್ಲಿ ಮಂಗಳವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಣಿಪಾಲದ ಕಸ್ತೂರಬಾ ಆಸ್ಪತ್ರೆಯ ವ್ಯವಸ್ಥಾಪಕ ಮೋಹನ್ ಶೆಟ್ಟಿ ಮಾತನಾಡಿದರು. | Kannada Prabha

ಸಾರಾಂಶ

ಎಲ್ಲಾ ವರ್ಗದ ಜನರಿಗೂ ಆರೋಗ್ಯ ಕಲ್ಪಿಸುವ ನಿಟ್ಟಿನಲ್ಲಿ ಮಣಿಪಾಲದ ಕಸ್ತೂರಬಾ ಆಸ್ಪತ್ರೆಯು ಎಂದಿನಂತೆ ಮಣಿಪಾಲ್ ಆರೋಗ್ಯ ಕಾರ್ಡ್-2025ರ ನೋಂದಣಿಯನ್ನು ಆರಂಭಿಸಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ಮೋಹನ್ ಶೆಟ್ಟಿ ತಿಳಿಸಿದರು.

ಶಿವಮೊಗ್ಗ: ಎಲ್ಲಾ ವರ್ಗದ ಜನರಿಗೂ ಆರೋಗ್ಯ ಕಲ್ಪಿಸುವ ನಿಟ್ಟಿನಲ್ಲಿ ಮಣಿಪಾಲದ ಕಸ್ತೂರಬಾ ಆಸ್ಪತ್ರೆಯು ಎಂದಿನಂತೆ ಮಣಿಪಾಲ್ ಆರೋಗ್ಯ ಕಾರ್ಡ್-2025ರ ನೋಂದಣಿಯನ್ನು ಆರಂಭಿಸಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ಮೋಹನ್ ಶೆಟ್ಟಿ ತಿಳಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಳೆದ 25 ವರ್ಷಗಳಿಂದ ಮಣಿಪಾಲ್ ಆರೋಗ್ಯ ಕಾರ್ಡನ್ನು ಪರಿಚಯಿಸಲಾಗುತ್ತಿದೆ. ಈ ಬಾರಿ ಸುಮಾರು 6.82 ಲಕ್ಷ ಸದಸ್ಯರು ಕಾರ್ಡನ್ನು ಹೊಂದಿದ್ದಾರೆ. ಸುಮಾರು 7.50 ಲಕ್ಷ ಗುರಿಮುಟ್ಟುವ ಉದ್ದೇಶವನ್ನು ಇಟ್ಟುಕೊಂಡಿದ್ದೇವೆ. ಕಳೆದ ಬಾರಿ 22.8 ಕೋಟಿ ಮೊತ್ತದಷ್ಟು ರಿಯಾಯಿತಿಯನ್ನು ಮಣಿಪಾಲ್ ಆಸ್ಪತ್ರೆ ನೀಡಿದೆ ಎಂದು ಮಾಹಿತಿ ನೀಡಿದರು.

ಕಾರ್ಡ್ ಸಣ್ಣದು-ಪ್ರಯೋಜನ ದೊಡ್ಡದು ಎಂಬ ನಿಟ್ಟಿನಲ್ಲಿ ಈ ಕಾರ್ಡನ್ನು ಪರಿಚಯಿಸಲಾಗುತ್ತಿದ್ದು, ಸಮಾಜದ ಎಲ್ಲಾ ವರ್ಗಗಳಿಗೂ ಇದು ಅನುಕೂಲವಾಗುತ್ತದೆ. ಒಂದು ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ ಯಾರಾದರೂ ಸದಸ್ಯರಾಗಿ ಪ್ರಯೋಜನಗಳನ್ನು ಪಡೆಯಬಹುದು. ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ ಎಂಬುದು ಮಣಿಪಾಲ್ ಆರೋಗ್ಯ ಕಾರ್ಡಿನ ಧ್ಯೇಯವಾಕ್ಯವಾಗಿದೆ ಎಂದರು.

ಸದಸ್ಯತ್ವ ವಿವರಗಳು:

ಮಣಿಪಾಲ್ ಆರೋಗ್ಯ ಕಾರ್ಡ್ 2025ರ ಯೋಜನೆಯು ಒಂದು ವರ್ಷದ ಯೋಜನೆಯಲ್ಲಿ ಕಾರ್ಡಿನ ಸದಸ್ಯತ್ವವು ಒಬ್ಬರಿಗೆ 350 , ಕೌಟಂಬಿಕ ಕಾರ್ಡ್ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳಿಗೆ 700 ರು. ಮತ್ತು ಕುಟುಂಬ ಪ್ಲಸ್ ಯೋಜನೆಗೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳು ಮತ್ತು 4 ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ) 900 ರು. ಇದೊಂದು ಹೆಚ್ಚುವರಿ ಲಾಭವಾಗಿದೆ. 2 ವರ್ಷದ ಯೋಜನೆಯಲ್ಲಿ ಒಬ್ಬರಿಗೆ 600 ರು., ಕುಟುಂಬಕ್ಕೆ 950 ರು. ಮತ್ತು ಕೌಟಂಬಿಕ ಪ್ಲಸ್ ಯೋಜನೆಗೆ 1100 ರು. ಆಗಿರುತ್ತದೆ ಎಂದು ತಿಳಿಸಿದರು.

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಕಾರ್ಡ್‌ದಾರರಿಗೆ ರಿಯಾಯಿತಿ ಪ್ರಯೋಜನಗಳು ತಜ್ಞ ಮತ್ತು ಸೂಪರ್-ಸ್ಪೆಷಲಿಸ್ಟ್ ಸಮಾಲೋಚನೆ ಶುಲ್ಕಗಳಲ್ಲಿ ಶೇ.50 ರಿಯಾಯಿತಿ (ಓಪಿಡಿ ದಿನಗಳು), ರೋಗನಿರ್ಣಯ ಮತ್ತು ಪ್ರಯೋಗಾಲಯ ಪರೀಕ್ಷೆಗಳ ಮೇಲೆ ಶೇ.25 ರಿಯಾಯಿತಿ, ರೇಡಿಯಾಲಜಿ, ಓಪಿಡಿ ಕಾರ್ಯವಿಧಾನಗಳು ಮತ್ತು ಮಧುಮೇಹ ಪಾದದ ಆರೈಕೆಯ ಮೇಲೆ ಶೇ.20 ರಿಯಾಯಿತಿ, ಡಯಾಲಿಸಿಸ್‌ನಲ್ಲಿ ರು.100 ರಿಯಾಯಿತಿ, ಆಸ್ಪತ್ರೆ ಔಷಧಗಳ ಮೇಲೆ ಶೇ.10 ವರೆಗೆ ರಿಯಾಯಿತಿ, ಸಾಮಾನ್ಯ ವಾರ್ಡ್ ಒಳರೋಗಿಗಳ ಬಿಲ್‌ಗಳಲ್ಲಿ ೨೫% ರಿಯಾಯಿತಿ (ಉಪಭೋಗ್ಯ ವಸ್ತುಗಳು ಮತ್ತು ಪ್ಯಾಕೇಜ್‌ಗಳನ್ನು ಹೊರತುಪಡಿಸಿ) ನೀಡಲಾಗುತ್ತದೆ ಎಂದರು.

ಕಾರ್ಡ್‌ದಾರರು ಕಸ್ತೂರ್ಬಾ ಆಸ್ಪತ್ರೆ-ಮಣಿಪಾಲ, ಡಾ.ಟಿಎಂಎ ಪೈ ಆಸ್ಪತ್ರೆ-ಉಡುಪಿ, ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆ-ಕಾರ್ಕಳ, ಕೆಎಂಸಿ ಆಸ್ಪತ್ರೆ-ಮಂಗಳೂರು ಮತ್ತು ಅತ್ತಾವರ, ದುರ್ಗಾ ಸಂಜೀವನಿ ಮಣಿಪಾಲ ಆಸ್ಪತ್ರೆ-ಕಟೀಲು, ಮಣಿಪಾಲ ಆಸ್ಪತ್ರೆ-ಗೋವಾ ಮತ್ತು ಮಣಿಪಾಲ ಹಾಗೂ ಮಂಗಳೂರಿನಲ್ಲಿನ ದಂತ ಕಾಲೇಜುಗಳಲ್ಲಿ ಪ್ರಯೋಜನಗಳನ್ನು ಪಡೆಯಬಹುದು. ಮಣಿಪಾಲ ಮತ್ತು ಮಂಗಳೂರಿನಲ್ಲಿ ಇತರ ಆಸ್ಪತ್ರೆಗಳಲ್ಲಿನ ರಿಯಾಯಿತಿಗಳು ಮತ್ತು ಹೆಚ್ಚಿನ ಮಾಹಿತಿಗಾಗಿ, 9980854700 , 8202923748 ಅನ್ನು ಸಂಪರ್ಕಿಸಿ. ಎಲ್ಲಾ ನಮ್ಮ ಅಧಿಕೃತ ಪ್ರತಿನಿಧಿಗಳ ಮೂಲಕ ನೋಂದಣಿ ಮಾಡಬಹುದು ಎಂದರು.

2025ರ ನೋಂದಾವಣಿಗಾಗಿ ಶಿವಮೊಗ್ಗ: ಕಸ್ತೂರ್ಬಾ ಆಸ್ಪತ್ರೆ ಮಾಹಿತಿ ಕೇಂದ್ರ, ನವೀನ ಟೈಯರ್ಸ್, ನವೀನ್ ಕೆ.ಆರ್. 7829540338 , ಪ್ರತಿನಿಧಿಗಳಾದ ವಿಜಯ್ ಆನಂದ್, 9844383344 ಅಧಿಕೃತ ಪ್ರತಿನಿಧಿಗಳಲ್ಲಿ ನೋಂದಾಯಿಸಿಕೊಳ್ಳಬಹುದು ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮಾರುಕಟ್ಟೆ ವಿಭಾಗದ ಪ್ರತಿನಿಧಿ ಅನಿಲ್, ಸಂದೀಪ್, ಪ್ರತಿನಿದಿಗಳಾದ ನವೀನ್ ಮತ್ತು ವನಿತಾ, ಬಾಲಕೃಷ್ಣ ಭಟ್ ಮುಂತಾದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ