ಬೋರ್ ವೆಲ್ ಕೊರೆಯುವ ಲಾರಿಗಳಿಗೆ ನೋಂದಣಿ ಕಡ್ಡಾಯ: ಡಿಸಿ ಮೀನಾ ನಾಗರಾಜ್‌

KannadaprabhaNewsNetwork |  
Published : Mar 31, 2024, 02:00 AM IST
 ಜಿಲ್ಲಾಧಿಕಾರಿ ಮೀನಾ ನಾಗರಾಜ್  | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಕೊಳವೆಬಾವಿ ಕೊರೆಯುವ ಲಾರಿಗಳು ಕಡ್ಡಾಯವಾಗಿ ಅಂತರ್ಜಲ ಇಲಾಖೆಯಿಂದ 7 (ಎ) ಯಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೊಳವೆ ಬಾವಿ ಕೊರೆಯುವ ಲಾರಿ ಮಾಲೀಕರು, ಏಜೆಂಟರು, ಅಧಿಕಾರಿಗಳ ಸಭೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಜಿಲ್ಲೆಯಲ್ಲಿ ಕೊಳವೆಬಾವಿ ಕೊರೆಯುವ ಲಾರಿಗಳು ಕಡ್ಡಾಯವಾಗಿ ಅಂತರ್ಜಲ ಇಲಾಖೆಯಿಂದ 7 (ಎ) ಯಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಹೇಳಿದರು.ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಕೊಳವೆ ಬಾವಿ ಕೊರೆಯುವ ಲಾರಿ ಮಾಲೀಕರು, ಏಜೆಂಟರು ಹಾಗೂ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ 7(ಎ) ರಂತೆ ನೋಂದಾಯಿಸಿಕೊಂಡಿರುವ ಲಾರಿ ಮಾಲೀಕರು ಕೊಳವೆಬಾವಿಯನ್ನು ಕೊರೆಯತಕ್ಕದ್ದು ನೋಂದಾಯಿಸಿಕೊಳ್ಳದೆ ಇರುವ ಕೊಳವೆಬಾವಿ ಕೊರೆಯುವ ಲಾರಿ ಮಾಲೀಕರು ಒಂದು ವಾರದೊಳಗೆ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು ಒಂದು ವಾರದೊಳಗೆ ನೋಂದಾಯಿಸಿಕೊಳ್ಳದೆ ಇರುವ ಮಾಲೀಕರ ವಿರುದ್ಧ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದಲ್ಲದೆ ವಾಹನವನ್ನು ಮುಟ್ಟುಗೋಲು ಹಾಕಿ ಕೊಳ್ಳಲಾಗುವುದು ಎಂದರು.

ಗಂಗಾ ಕಲ್ಯಾಣ ಯೋಜನೆ ಸೇರಿದಂತೆ ವಿವಿಧ ಯೋಜನೆಗಳಡಿ ಸರ್ಕಾರದಿಂದ ಮಂಜೂರಾಗಿರುವ ಕೊಳವೆಬಾವಿಗಳನ್ನು ಅತಿ ಶೀಘ್ರವಾಗಿ ಕೊರೆದು ಪೂರ್ಣಗೊಳಿಸಬೇಕು, ಕೊಳವೆಬಾವಿ ಕೊರೆದು ವಿಫಲವಾದ ಕೊಳವೆ ಬಾವಿಗಳನ್ನು ಸುರಕ್ಷಿತ ವಾಗಿ ಮುಚ್ಚಿ ಯಾವುದೇ ಅವಘಡಗಳು ಸಂಭವಿಸದಂತೆ ಕ್ರಮ ವಹಿಸಬೇಕು, ತಪ್ಪಿದಲ್ಲಿ ಸಂಬಂಧಿಸಿದ ನಿವೇಶನ ಮಾಲೀಕರು, ಕೊಳವೆಬಾವಿ ಕೊರಸುವ ಗುತ್ತಿಗೆದಾರರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.ಕೊಳವೆ ಬಾವಿಗಳನ್ನು ಸರ್ಕಾರ ನಿಗದಿಪಡಿಸಿರುವ ದರದಂತೆ ಕೊರಿಯಬೇಕು, ಒಂದು ವೇಳೆ ನಿಗದಿಪಡಿಸಿದ ದರಕ್ಕಿಂತ ಹೆಚ್ಚು ದರ ಪಡೆದರೆ ಅಂತವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದರು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗೋಪಾಲಕೃಷ್ಣ ಮಾತನಾಡಿ, ಕೊಳವೆ ಬಾವಿ ಕೊರೆಯುವ ತಂತ್ರಗಳ ಮಾಲೀಕರು ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು. ಈಗಾಗಲೇ ಜಿಲ್ಲೆಯ ಕಡೂರು, ತರೀಕೆರೆ ತಾಲೂಕುಗಳನ್ನು ಬರ ಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದ್ದು, ಉಳಿದ ತಾಲೂಕುಗಳಲ್ಲೂ ಕೂಡ ಕುಡಿಯುವ ನೀರಿಗೆ ಅಭಾವ ಕಂಡು ಬರುತ್ತಿದೆ. ಸರ್ಕಾರದಿಂದ ಮಂಜೂರಾಗಿರುವ ಕೊಳವೆ ಬಾವಿಗಳನ್ನು ಶೀಘ್ರವಾಗಿ ಕೊರೆಯಬೇಕು, 2 ವರ್ಷಗಳಿಂದ ಮಂಜೂರಾಗಿರುವ ಕೊಳವೆ ಬಾವಿಗಳನ್ನು ಇದುವರೆವಿಗೂ ಕೊರೆದಿರುವುದಿಲ್ಲ. ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಕೊಳವೆ ಬಾವಿ ಕೊರೆದಿರುವ ಹಣವನ್ನು ಮಂಜೂರು ಮಾಡುವಂತೆ ತಿಳಿಸಿದ ಅವರು, ಸರ್ಕಾರ ನಿಗಧಿ ಪಡಿಸುವ ದರದಲ್ಲಿಯೇ ಕೊಳವೆ ಬಾವಿ ಕೊರೆಯಬೇಕು. ರೈತರಿಗೆ ತೊಂದರೆ ಕೊಡಬಾರದೆಂದು ಹೇಳಿದರು.ಸಭೆಯಲ್ಲಿ ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯ ಪಾಲಕ ಅಭಿಯಂತರರಾದ ವಿನಾಯಕ ಉಲ್ಲೂರು, ಜಿಲ್ಲಾ ಅಂತರ್ಜಲ ಕಚೇರಿ ಹಿರಿಯ ಭೂ ವಿಜ್ಞಾನಿ ಎನ್‌.ಆರ್‌. ನಂದಿನಿ ಹಾಗೂ ಜಿಲ್ಲೆಯ ಕೊಳವೆಬಾವಿ ಯಂತ್ರದ ಮಾಲೀಕರು ಹಾಗೂ ಏಜೆಂಟರು ಉಪಸ್ಥಿತರಿದ್ದರು.ಪೋಟೋ ಫೈಲ್ ನೇಮ್‌ 30 ಕೆಸಿಕೆಎಂ 4

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!