ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲು ಕೊಡಗು ಜಿಲ್ಲೆಯಲ್ಲಿ ಕಾಳು ಮೆಣಸು ಅಡಕೆ ಬೆಳೆಗಳನ್ನು ಆಯ್ಕೆ ಮಾಡಲಾಗಿದೆ.
ಕನ್ನಡಪ್ರಭ ವಾರ್ತೆ ಮಡಿಕೇರಿ
ಕರ್ನಾಟಕ ಸರ್ಕಾರವು 2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲು ಕೊಡಗು ಜಿಲ್ಲೆಯಲ್ಲಿ ಕಾಳುಮೆಣಸು ಹಾಗೂ ಅಡಕೆ ಬೆಳೆಗಳನ್ನು ಆಯ್ಕೆ ಮಾಡಲಾಗಿದೆ. ಹವಾಮಾನ ಆಧಾರಿತ ಅಂಶಗಳಾದ ಮಳೆಯ ಪ್ರಮಾಣ, ತಾಪಮಾನ ಇತ್ಯಾದಿ ಮಾಹಿತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಟೆಲಿಮೆಟ್ರಿಕ್ ಮಳೆ ಮಾಪನ ಕೇಂದ್ರಗಳಲ್ಲಿ ದಾಖಲಿಸುವ ಅಂಶಗಳ ಆಧಾರದ ಮೇಲೆ ಬೆಳೆ ವಿಮೆ ನಷ್ಟವನ್ನು ತೀರ್ಮಾನಿಸಲಾಗುತ್ತದೆ. 2025-26ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಬೆಳೆವಾರು ವಿಮಾ ಮೊತ್ತ ಕಾಳುಮೆಣಸು ಬೆಳೆಗೆ ಒಟ್ಟು 47, 000 ರು. ಹಾಗೂ ಅಡಕೆ ಬೆಳೆಗೆ 1,28, 000 ಆಗಿರುತ್ತದೆ. ವಿಮಾ ಕಂಪನಿಗೆ ಒಟ್ಟು ವಿಮಾ ಮೊತ್ತಕ್ಕೆ ರೈತರು ಕಾಳುಮೆಣಸು ಬೆಳೆಗೆ ಶೇ.5ರ ವಿಮಾ ಮೊತ್ತ 2, 350 ರು. ಹಾಗೂ ಅಡಿಕೆ ಬೆಳೆಗೆ 6, 400 ರು. ಪ್ರತಿ ಹೆಕ್ಟೇರ್ ಪಾವತಿಸಬೇಕಾಗಿರುತ್ತದೆ. ವಿಮಾ ನೋಂದಣಿಗೆ 2025 ರ ಆ. 11 ಕೊನೆಯ ದಿನವಾಗಿದೆ. ಬೆಳೆ ಸಾಲ ಪಡೆದ ಮತ್ತು ಬೆಳೆ ಸಾಲ ಪಡೆಯದ ರೈತರು ವಿಮಾ ಮೊತ್ತವು ಪಾವತಿಸಬೇಕಾದ ವಿಮಾ ಕಂತಿನ ಮೊತ್ತವು ಒಂದೇ ಆಗಿರುತ್ತದೆ. ಜಿಲ್ಲೆಯಲ್ಲಿ ಬೆಳೆ ಸಾಲ ಪಡೆದ ರೈತರು ಹಾಗೂ ಸಾಲ ಪಡೆಯದ ರೈತರು ವಿಮೆ ಯೋಜನೆಯಡಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ವಿಮೆ ಮಾಡಿಸಲು ಇಚ್ಚಿಸುವ ರೈತರು ನಿಗದಿತ ಅರ್ಜಿಯೊಂದಿಗೆ ಪಹಣಿ ಪತ್ರ, ಬ್ಯಾಂಕ್ ಖಾತೆ ಪಾಸ್ ಪುಸ್ತಕ, ಆಧಾರ್ ಕಾರ್ಡ್ ನಕಲು ಪ್ರತಿಗಳನ್ನು ಮತ್ತು ಸ್ವಯಂ ಘೋಷಿತ ಬೆಳೆ ವಿವರಗಳನ್ನು ಲಗತ್ತಿಸಿ ತಮ್ಮ ಹತ್ತಿರದ ಬ್ಯಾಂಕ್‌ಗಳಲ್ಲಿ ಅಥವಾ ಬೆಳೆ ಸಾಲ ಪಡೆಯದ ರೈತರು ಮಾತ್ರ ಗ್ರಾಮ ಪಂಚಾಯತ್ ಮಟ್ಟದಲ್ಲಿರುವ ಗ್ರಾಮ ಒನ್ ಕೇಂದ್ರಗಳಲ್ಲಿ ಅಥವಾ ಸಾಮಾನ್ಯ ಸೇವಾ ಕೇಂದ್ರಗಳಲ್ಲಿಯೂ ಸಹ ವಿಮೆ ಯೋಜನೆಯಡಿ ನೊಂದಾಯಿಸಿಕೊಳ್ಳಬಹುದು.
ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಅನುಷ್ಠಾನಗೊಳಿಸಲು ಕೊಡಗು ಜಿಲ್ಲೆಗೆ ಯುನೈಟೆಡ್ ಇಂಡಿಯಾನ್ ಇನ್ಸುರೆನ್ಸ್ ಕಂಪನಿ ವಿಮಾ ಸಂಸ್ಥೆಯು ಹಂಚಿಕೆಯಾಗಿರುತ್ತದೆ. ಹೆಚ್ಚಿನ ಮಾಹಿತಿಗೆ ಸಮೀಪದ ಬ್ಯಾಂಕ್ ಶಾಖೆ ಅಥವಾ ಯುನೈಟೆಡ್ ಇಂಡಿಯಾ ಇನ್ಸುರೆನ್ಸ್ ಕಂಪನಿ(ಮೊ.9789887181 ಮತ್ತು 9789;928175), ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಮಡಿಕೇರಿ ಮೊ.ನಂ.9448407816 ಸೋಮವಾರಪೇಟೆ ಮೊ.ನಂ.9448407816, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಪೊನ್ನಂಪೇಟೆ ಮೊ.ನಂ.9448049020, ಸಾಮಾನ್ಯ ಸೇವಾ ಕೇಂದ್ರಗಳನ್ನು ಹಾಗೂ ತೋಟಗಾರಿಕೆ ಉಪನಿರ್ದೇಶಕರು (ಜಿಪಂ) ಮಡಿಕೇರಿ, ಕೊಡಗು ಮೊ.ನಂ. 9448999227 ನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.