ಹೊಸಪೇಟೆ: ಪ್ರಜಾಪ್ರಭುತ್ವ ಯಶಸ್ವಿಗೆ ಯುವ ಮತದಾರರು ತಮ್ಮ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗರೀಮಾ ಪನ್ವರ್ ಹೇಳಿದರು.
ಪ್ರಜಾಪ್ರಭುತ್ವ ಯಶಸ್ವಿಗೆ ಯುವ ಮತದಾರರು ಹೆಚ್ಚು ಹೆಚ್ಚು ನೊಂದಣಿ ಕಡ್ಡಾಯವಾಗಿ ಮಾಡಿಸಬೇಕು. ಹೊಸ ಮತದಾರರ ಸೇರ್ಪಡೆಗೆ ಸೆ 19 ಮತ್ತು 20 ರಂದು ಎರಡು ದಿನಗಳ ಕಾಲ ಅವಕಾಶ ಕಲ್ಪಿಸಲಾಗಿದೆ. ಆದ್ದರಿಂದ ಎಲ್ಲ ಯುವ ಮತದಾರರು ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಬೇಕು. Voter help line (VHA ) ಆಪ್ ಮೂಲಕ ಅಥವಾ ECINET ವೆಬ್‌ಸೈಟ್ ಮೂಲಕ ಹೊಸ ಮತದಾರರಾಗಿ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದರು.
ಜಿಪಂ ಉಪ ಕಾರ್ಯದರ್ಶಿ ಕೆ.ತಿಮ್ಮಪ್ಪ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎಂ.ಡಿ. ಆಲಂ ಭಾಷಾ, ಡಿಡಿಪಿಯು ನಾಗರಾಜ್ ಹವಾಲ್ದಾರ್, ಶಂಕರ್ ಆನಂದ್ ಸಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಬಾಬು ರಾಜೇಂದ್ರ ಪ್ರಸಾದ್, ಜಿಲ್ಲಾ ಸ್ವೀಪ್ ಸಮಿತಿಯ ಡಿ.ಎಲ್.ಎಂ. ಟಿ ಸಿದ್ದಪ್ಪ, ಟಿ.ಎಲ್.ಎಂ.ಟಿ . ಹೊಸಪೇಟೆ ತಾಲೂಕಿನ ಶಿವಪ್ರಸಾದ್, ರಾಘವೇಂದ್ರ, ನಾಗರತ್ನ, ಮಲ್ಲಿಕಾರ್ಜುನ ಸೇರಿದಂತೆ ಆನಂದ್ ಸಿಂಗ್ ಪ್ರಥಮ ದರ್ಜೆ ಕಾಲೇಜಿನ ಯುವ ಮತದಾರ ವಿದ್ಯಾರ್ಥಿಗಳು ಭಾಗವಹಿಸಿದ್ದರು.