ರಕ್ತದಾನ ಶಿಬಿರ ನಿಯಮಿತ ಆಯೋಜನೆ: ಡಾ.ಸತೀಶ್ ಕುಮಾರ್

KannadaprabhaNewsNetwork |  
Published : Oct 08, 2026, 02:45 AM IST
ರಕ್ತದಾನ ಶಿಬಿರ ನಡೆಯಿತು. | Kannada Prabha

ಸಾರಾಂಶ

ಜಿಲ್ಲೆಯಲ್ಲಿ ನಿಯಮಿತವಾಗಿ ರಕ್ತದಾನ ಶಿಬಿರ ಆಯೋಜಿಸುವ ಮೂಲಕ ಅಗತ್ಯವಿರುವ ರೋಗಿಗಳಿಗೆ ಸಕಾಲದಲ್ಲಿ ರಕ್ತ ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಹೇಳಿದರು.

ಮಡಿಕೇರಿ: ಜಿಲ್ಲೆಯಲ್ಲಿ ನಿಯಮಿತವಾಗಿ ರಕ್ತದಾನ ಶಿಬಿರ ಆಯೋಜಿಸುವ ಮೂಲಕ ಅಗತ್ಯವಿರುವ ರೋಗಿಗಳಿಗೆ ಸಕಾಲದಲ್ಲಿ ರಕ್ತ ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಹೇಳಿದರು.

ಕೊಡಗು ಜಿಲ್ಲೆಯಲ್ಲಿ ಸ್ವಯಂಪ್ರೇರಿತ ರಕ್ತದಾನ ಕುರಿತು ಜಾಗೃತಿ ಮೂಡಿಸುವ ಹಾಗೂ ರಕ್ತದ ಅವಶ್ಯಕತೆ ಪೂರೈಸುವ ಉದ್ದೇಶದಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ರಕ್ತನಿಧಿ ಕೇಂದ್ರ ಹಾಗೂ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಸಹಯೋಗದಲ್ಲಿ ಮಂಗಳವಾರ ರಾಷ್ಟ್ರೀಯ ರಕ್ತದಾನ ದಿನಾಚರಣೆ ವೇಳೆ ಮಾತನಾಡಿದರು.

ಡಾ.ಕರುಂಬಯ್ಯ ಮಾತನಾಡಿ ರಕ್ತದಾನವು ಅತ್ಯಂತ ಮಹತ್ವದ ಮಾನವೀಯ ಸೇವೆಯಾಗಿದ್ದು, ಜಿಲ್ಲೆಯಲ್ಲಿನ ವಿವಿಧ ಸಂದರ್ಭಗಳಲ್ಲಿ ರಕ್ತದ ಅಗತ್ಯತೆ ಹೆಚ್ಚಿರುವುದರಿಂದ ಅಗತ್ಯ ಪ್ರಮಾಣದ ರಕ್ತದ ಘಟಕಗಳನ್ನು ಸಂಗ್ರಹಿಸುವುದು ಅವಶ್ಯಕವಾಗಿದೆ ಎಂದರು. ಜಿಲ್ಲೆಯಲ್ಲಿ ನಿಯಮಿತವಾಗಿ ರಕ್ತದಾನ ಶಿಬಿರ ಆಯೋಜಿಸುವುದರ ಜೊತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು ಮುಂದೆ ಬರುವಂತೆ ಪ್ರೇರೇಪಿಸಬೇಕು ಎಂ ದರು.ರವೀಂದ್ರ ರೈ ಮಾತನಾಡಿ, ಕಾಲೇಜುಗಳಲ್ಲಿ ಯೂತ್ ರೆಡ್‍ಕ್ರಾಸ್ ಘಟಕಗಳ ಸಹಯೋಗದೊಂದಿಗೆ ರಕ್ತದಾನ ಶಿಬಿರ ಆಯೋಜಿಸುವ ಮೂಲಕ ಯುವಜನರಲ್ಲಿ ರಕ್ತದಾನದ ಮಹತ್ವದ ಕುರಿತು ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು. ಯುವಕರು ಸ್ವಯಂ ಪ್ರೇರಿತ ರಕ್ತದಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸುವ ಅಗತ್ಯವಿದೆ ಎಂದರು.

ಸಾರ್ವಜನಿಕರು ಹಾಗೂ ಯುವಜನರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಜೀವ ಉಳಿಸುವ ಮಹತ್ವದ ಮಾನವೀಯ ಸೇವೆಯಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದರು.

ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಿದ ಭರತ್, ಯಶೋಧರ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಡಿಟಿಸಿ ಪ್ರಾಂಶುಪಾಲರಾದ ಡಾ.ಅಜೀಜ್ ಹಾಗೂ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಅರುಣ್ ಕುಮಾರ್ ಉಪಸ್ಥಿತರಿದ್ದರು. ಕೊಡಗು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ಸ್ವಾಗತಿಸಿದರು.

ಉದ್ಘಾಟನೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಸನತ್ ಕುಮಾರ್, ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ಕರುಂಬಯ್ಯ ಹಾಗೂ ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ರವೀಂದ್ರ ರೈ ಅವರು ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

12ರಂದು ದೆಹಲಿಯಲ್ಲಿ ಕಬ್ಬು ಬೆಳೆಗಾರರ ಸಭೆ
ತಾಪಂ: ಬೆಳಗಾವಿಯಲ್ಲಿ ಮಹಿಳೆಯರಿಗೆ ಸಿಂಹಪಾಲು