ಕನ್ನಡಪ್ರಭ ವಾರ್ತೆ ಶ್ರೀನಿವಾಸಪುರಇತ್ತೀಚೆಗೆ ಕರ್ನಾಟಕ ರಾಜ್ಯದಲ್ಲಿ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದರಿಂದ ವಿಧಾನಸೌಧದಲ್ಲಿಯೇ ಪಾಕಿಸ್ತಾನಕ್ಕೆ ಜೈಕಾರ ಕೂಗಿದರು, ಇನ್ನು ಇಡೀ ಲೋಕಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದರೆ ನಮ್ಮ ಶತೃ ರಾಷ್ಟ್ರ ಪಾಕಿಸ್ತಾನ ಪ್ರೇಮಿಗಳ ಸಂಖ್ಯೆ ಹೆಚ್ಚಾಗಿ ನಮ್ಮ ಭಾರತ ದೇಶವನ್ನು ಯಾವ ಮಟ್ಟಕ್ಕೆ ಕೊಂಡೊಯ್ಯುತ್ತಾರೆ ಎನ್ನುವುದನ್ನು ಊಹಿಸಿ, ಈ ಭಾರಿಯ ಲೋಕಸಭೆ ಚುನಾವಣೆಯಲ್ಲಿ ಮತಗಟ್ಟೆಗೆ ಹೋಗಿ ಮತ ಚಲಾಯಿಸುವ ಮುನ್ನ ಯೋಚಿಸಿ ದೇಶದ ಭದ್ರತೆಗಾಗಿ ಇರುವ ಅಭ್ಯರ್ಥಿಗಳಿಗೆ ಮತ ಹಾಕಬೇಕು, ದೇಶ ವಿರೋಧಿ ಪಕ್ಷ ಕಾಂಗ್ರೆಸ್ ನ್ನು ತಿರಸ್ಕರಿಸಬೇಕು ಎಂದು ಮಾಜಿ ಸಚಿವ ಸಿ.ಟಿ.ರವಿ ಕರೆ ನೀಡಿದರು. ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಯಲ್ದೂರು, ಹೋಳೂರು, ದಳಸನೂರು ಮತ್ತು ಸುಗಟೂರು ಗ್ರಾಮಗಳಲ್ಲಿ ಕೋಲಾರ ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ದೇಶದ ಭದ್ರತೆಗೆ ಮತ್ತು ದೇಶದ ಅಭಿವೃದ್ಧಿಗೆ ಮೋದಿ ತುಂಬಾ ಮುಖ್ಯ, ಕುಕ್ಕರ್ ಬಾಂಬ್ ಇಟ್ಟವರನ್ನು ನನ್ನ ಬ್ರದರ್ಸ್ ಎಂದು ಸಮರ್ಥಿಸಿಕೊಳ್ಳುವ ಕಾಂಗ್ರೆಸ್ ನಾಯಕರು ದೇಶವನ್ನು ಯಾವ ರೀತಿ ಕಾಪಾಡಬಲ್ಲರು ಎಂಬುದನ್ನು ಜನರ ವಿವೇಚನೆಗೆ ಬಿಡುತ್ತೇವೆ, ಒಬ್ಬ ಶಾಸಕರ ಮನೆ ಮತ್ತು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿ ಸುಟ್ಟು ಹಾಕಿದವರು ಅಮಾಯಕರು ಅವರನ್ನು ಬಿಡುಗಡೆ ಮಾಡಬೇಕು ಎಂದು ಕಾಂಗ್ರೆಸ್ ಶಾಸಕರು ಗೃಹ ಸಚಿವರಿಗೆ ಪತ್ರ ಕೊಡುತ್ತಾರೆ ಎಂದರೆ ಎಂತಹ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿದೆ ಎಂಬುದನ್ನು ಜನತೆ ಚಿಂತಿಸಬೇಕಿದೆ ಎಂದರು.
ಪ್ರಧಾನಿ ಅಭ್ಯರ್ಥಿ ಹೆಸರಲ್ಲಿ ಕಾಂಗ್ರೆಸ್ ಮತ ಕೇಳುತ್ತಿಲ್ಲ :
ಬಿಜೆಪಿಯವರು 10 ವರ್ಷಗಳ ಆಡಳಿತದ ಅಭಿವೃದ್ಧಿ ಕೆಲಸಗಳು, ಭ್ರಷ್ಟಾಚಾರ ರಹಿತ ಆಡಳಿತದ ವಿಷಯಗಳ ಆಧಾರದ ಮೇಲೆ ಮೋದಿರನ್ನು ಮತ್ತೊಮ್ಮೆ ಪ್ರಧಾನ ಮಂತ್ರಿ ಮಾಡಬೇಕೆಂದು ಮತಯಾಚನೆ ಮಾಡುತ್ತಿದ್ದೇವೆ ಆದರೆ ಕಾಂಗ್ರೆಸ್‌ನ ಅಧಿಕಾರ ಅವಧಿಯಲ್ಲಿ ಮಾಡಿದ ಸಾಧನೆಗಳ ಬಗ್ಗೆ ಜನರ ಮುಂದಿಟ್ಟು ಮತ ಕೇಳುತ್ತಿಲ್ಲ, ಕಾಂಗ್ರೆಸ್ ಪಕ್ಷದ ಮುಂದಿನ ಪ್ರಧಾನಿ ಅಭ್ಯರ್ಥಿ ಹೆಸರು ಹೇಳಿ ಮತ ಕೇಳುತ್ತಿಲ್ಲ ಕೇವಲ ಜಾತಿ, ಧರ್ಮಗಳ ಹೆಸರಿನಲ್ಲಿ ಮತ ಕೇಳುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.ಮಲ್ಲೇಶ್ ಬಾಬುಗೂ ಅವಕಾಶ ಕೊಡಿ: