ಕನ್ನಡಪ್ರಭ ವಾರ್ತೆ ಬೆಳಗಾವಿ
ಸುವರ್ಣ ಸೌಧದ ಆವರಣದಲ್ಲಿ ಸ್ಥಾಪಿಸಿರುವ ಬೃಹತ್ ಗಾಂಧಿ ಪುತ್ಥಳಿ ಅನಾವರಣ ಸಮಾರಂಭದಲ್ಲಿ ಈ ಕೃತಿಗಳನ್ನು ಲೋಕಾರ್ಪಣೆ ಮಾಡಲಾಯಿತು.
1924ರ ಕಾಂಗ್ರೆಸ್ ಅಧಿವೇಶನದ ನಿರ್ಣಯಗಳು, ಕೊಲ್ಕತ್ತಾ ಒಪ್ಪಂದ ಮತ್ತು ನೇಯ್ಗೆಯ ಮತಾಧಿಕಾರ, ಸರೋಜಿನಿ ನಾಯ್ಡು ಅವರ ವಿದೇಶಾಂಗ ಸೇವೆ, ಅಕಾಲಿಗಳಿಗೆ ಅಭಿನಂದನೆ, ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳು, ಬರ್ಮಾದ ಜನರಿಗೆ ಸಹಾನುಭೂತಿ, ಕೋಹತ್ ಹಾಗೂ ಗುಲಬರ್ಗಾ ಗಲಭೆಗಳು, ಅಸ್ಪೃಶ್ಯತೆ ನಿವಾರಣೆ, ಅಧಿವೇಶನದ ಲೆಕ್ಕಪರಿಶೋಧನೆ ಸೇರಿದಂತೆ ಐತಿಹಾಸಿಕ ಮಾಹಿತಿಗಳು ಹಾಗೂ ಛಾಯಾಚಿತ್ರಗಳನ್ನು ಈ ಪುಸ್ತಕಗಳು ಒಳಗೊಂಡಿವೆ.ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಂಸದರಾದ ಪ್ರಿಯಾಂಕ ಗಾಂಧಿ, ಕೆ.ಸಿ.ವೇಣುಗೋಪಾಲ, ರಣದೀಪ್‌ಸಿಂಗ್ ಸುರ್ಜೇವಾಲಾ, ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಸಚಿವರಾದ ಎಚ್.ಕೆ.ಪಾಟೀಲ, ಡಾ.ಜಿ.ಪರಮೇಶ್ವರ, ಸತೀಶ ಜಾರಕಿಹೊಳಿ ಮತ್ತಿತರ ಇದ್ದರು.