ಪತ್ರಕರ್ತರ ಗ್ರಾಮ ವಾಸ್ತವ್ಯದ ಆಮಂತ್ರಣ ಪತ್ರಿಕೆ ಬಿಡುಗಡೆ

KannadaprabhaNewsNetwork |  
Published : Feb 06, 2024, 01:35 AM IST
ಹೆಗ್ಗಡೆ  | Kannada Prabha

ಸಾರಾಂಶ

ಬೆಳ್ತಂಗಡಿ ಕೊಲ್ಲಮೊಗ್ರ ಬಂಗ್ಲೆಗುಡ್ಡೆ ಸರ್ಕಾರಿ ಶಾಲಾ ವಠಾರದಲ್ಲಿ ಫೆ.10ರಂದು ನಡೆಯಲಿರುವ ಪತ್ರಕರ್ತರ 5ನೇ ಗ್ರಾಮ ವಾಸ್ತವ್ಯದ ಆಮಂತ್ರಣ ಪತ್ರವನ್ನು ಅರಣ್ಯ ಹಾಗೂ ಪರಿಸರ ಸಚಿವ ಈಶ್ವರ ಖಂಡ್ರೆ ಹಾಗೂ ರಾಜ್ಯ ಸಭಾ ಸದಸ್ಯ, ಶ್ರೀ ಧರ್ಮಸ್ಥಳ ಕ್ಷೇತ್ರ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಧರ್ಮಸ್ಥಳದಲ್ಲಿ ಸೋಮವಾರ ನಡೆದ ಏಕಬಳಕೆ ಪ್ಲಾಸ್ಟಿಕ್ ನಿಷೇಧ ಘೋಷಣೆ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ಸಹಿತ ಸಂಘಟನೆಗಳು ಸಹಯೋಗ ನೀಡಿದವು.

ಕನ್ನಡಪ್ರಭ ವಾರ್ತೆ ಬೆಳ್ತಂಗಡಿ

ಕೊಲ್ಲಮೊಗ್ರ ಬಂಗ್ಲೆಗುಡ್ಡೆ ಸರ್ಕಾರಿ ಶಾಲಾ ವಠಾರದಲ್ಲಿ ಫೆ.10ರಂದು ನಡೆಯಲಿರುವ ಪತ್ರಕರ್ತರ 5ನೇ ಗ್ರಾಮ ವಾಸ್ತವ್ಯದ ಆಮಂತ್ರಣ ಪತ್ರವನ್ನು ಅರಣ್ಯ ಹಾಗೂ ಪರಿಸರ ಸಚಿವ ಈಶ್ವರ ಖಂಡ್ರೆ ಹಾಗೂ ರಾಜ್ಯ ಸಭಾ ಸದಸ್ಯ, ಶ್ರೀ ಧರ್ಮಸ್ಥಳ ಕ್ಷೇತ್ರ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಧರ್ಮಸ್ಥಳದಲ್ಲಿ ಸೋಮವಾರ ನಡೆದ ಏಕಬಳಕೆ ಪ್ಲಾಸ್ಟಿಕ್ ನಿಷೇಧ ಘೋಷಣೆ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಿದರು.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ ಜಿಲ್ಲಾ ಪಂಚಾಯತ್, ಸುಳ್ಯ ತಾ.ಪಂ., ದ.ಕ ಜಿಲ್ಲಾ ಪೊಲೀಸ್ ಇಲಾಖೆ. ಹರಿಹರ, ಕೊಲ್ಲಮೊಗರು ಗ್ರಾ.ಪಂ. ಮತ್ತು ಸ್ಥಳೀಯಾಡಳಿತ ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಬಿಡುಗಡೆ ಮಾಡಲಾಯಿತು. ಈ ಸಂದರ್ಭ ಡಾ. ಡಿ. ವೀರೇಂದ್ರ ಹೆಗ್ಗಡೆ ಮಾತನಾಡಿ, ಮಹಾತ್ಮಗಾಂಧಿಯವರು ಸಮಸ್ಯೆ ತಿಳಿಯಲು ದೇಶಾದ್ಯಂತ ಜನ ಸಾಮಾನ್ಯರು ಸಂಚರಿಸುತ್ತಿದ್ದ ತೃತೀಯ ದರ್ಜೆಯ ರೈಲು ಬೋಗಿಯಲ್ಲಿ ಜನರ ಬಳಿ ತೆರಳು ತ್ತಿದ್ದರು. ಅವರು ಜನರೊಂದಿಗೆ ಇದ್ದಾಗ ಜನ ಜೀವನ ಸಮಸ್ಯೆ ಅರ್ಥ ಮಾಡಿಕೊಳ್ಳಲು ಸಾಧ್ಯ. ಪತ್ರಕರ್ತರು ಗ್ರಾಮದ ಜನರ ಸಮಸ್ಯೆ ಬಗ್ಗೆ ಅರಿತು ಕೊಳ್ಳಲು ಗ್ರಾಮಕ್ಕೆ ತೆರಳಲು ಚಿಂತನೆ ಮಾಡಿರುವ ಪತ್ರಕರ್ತರ ಗ್ರಾಮ ವಾಸ್ತವ್ಯ ಶ್ಲಾಘನೀಯ ಎಂದು ಶುಭ ಹಾರೈಸಿದರು.ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಹಾ ರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಧಿಕಾರಿ ಭಾಸ್ಕರ ರೈ ಕಟ್ಟ, ಕಾರ್ಯ ಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ ಬೆಳ್ತಂಗಡಿ ತಾಲೂಕು ಕಾರ್ಯ ನಿರತ ಪತ್ರ ಕರ್ತರ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ,ಧರ್ಮಸ್ಥಳ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಮಲ, ಉಪಾಧ್ಯಕ್ಷ ಶ್ರೀನಿವಾಸ ರಾವ್, ಪಂಚಾಯಿತಿ ಕಾರ್ಯ ದರ್ಶಿ ಡಾ.ರಘು ಮೊದಲಾದವರು ಉಪಸ್ಥಿತರಿದ್ದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ