ತಾಲೂಕು ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ

KannadaprabhaNewsNetwork |  
Published : Nov 28, 2024, 12:31 AM IST
೨೬ಬಿಎಸ್ವಿ೦೩- ಬಸವನಬಾಗೇವಾಡಿತಾಲೂಕಿನ ಇವಣಗಿ ಗ್ರಾಮದಲ್ಲಿ ಸೋಮವಾರ ಸಂಜೆ ಬಸವನಬಾಗೇವಾಡಿ ತಾಲೂಕಿನ ಹತ್ತನೇ ಕನ್ನಡ ಸಾಹಿತ್ಯಸಮ್ಮೇಳನದ ಲಾಂಛನವನ್ನು ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಬಿಡುಗಡೆಗೊಳಿಸಿದರು.  | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ತಾಲೂಕಿನ ಇವಣಗಿ ಗ್ರಾಮದಲ್ಲಿ ಡಿ.೨ ರಂದು ನಡೆಯಲಿರುವ ತಾಲೂಕು ಹತ್ತನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಎಲ್ಲರೂ ಭಾಗಿಯಾಗುವ ಮೂಲಕ ಕನ್ನಡ ಅಕ್ಷರ ಜಾತ್ರೆಯನ್ನು ಯಶಸ್ವಿಗೊಳಿಸಬೇಕೆಂದು ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಹೇಳಿದರು.

ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ

ತಾಲೂಕಿನ ಇವಣಗಿ ಗ್ರಾಮದಲ್ಲಿ ಡಿ.೨ ರಂದು ನಡೆಯಲಿರುವ ತಾಲೂಕು ಹತ್ತನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಎಲ್ಲರೂ ಭಾಗಿಯಾಗುವ ಮೂಲಕ ಕನ್ನಡ ಅಕ್ಷರ ಜಾತ್ರೆಯನ್ನು ಯಶಸ್ವಿಗೊಳಿಸಬೇಕೆಂದು ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಹೇಳಿದರು.ತಾಲೂಕಿನ ಇವಣಗಿ ಗ್ರಾಮದ ಆರಾಧ್ಯದೈವ ವರದಾನಿ ಲಕ್ಕಮ್ಮದೇವಿ ದೇವಸ್ಥಾನ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲೂಕು ಹತ್ತನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಅನಾವರಣಗೊಳಿಸಿ ಮಾತನಾಡಿದರು. ಕನ್ನಡ ನಮ್ಮೆಲ್ಲರ ಅನ್ನದ ಭಾಷೆಯಾಗಿದ್ದು, ಕನ್ನಡದ ಜಾತ್ರೆಯನ್ನು ವೈವಿಧ್ಯಮಯವಾಗಿ ಆಚರಿಸುವ ಮೂಲಕ ಮಾದರಿ ಸಮ್ಮೇಳನಕ್ಕೆ ಎಲ್ಲರೂ ಸಾಕ್ಷಿಯಾಗಬೇಕೆಂದರು. ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲೀಕಾರ ಮಾತನಾಡಿ, ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಜರುಗುವ ಇವಣಗಿ ಗ್ರಾಮವು ಭಕ್ತಿ, ಸಹಕಾರಕ್ಕೆ ಹೆಸರುವಾಸಿಯಾಗಿದೆ. ನಾಡು-ನುಡಿ-ನೆಲ-ಜಲ-ಸಂಸ್ಕೃತಿ-ಪರಂಪರೆಯಿಂದ ಸಂಪದ್ಭರಿತವಾಗಿದೆ. ಈ ಸಮ್ಮೇಳನದಲ್ಲಿ ವಿವಿಧ ವಿದ್ವಾಂಸರಿಂದ ವಿಶೇಷ ಉಪನ್ಯಾಸ ಗೋಷ್ಠಿ ಹಮ್ಮಿಕೊಳ್ಳಲಾಗುವದು. ಖ್ಯಾತ ಕಲಾವಿದರಿಂದ ಸಾಂಸ್ಕ್ರತಿಕ ಕಾರ್ಯಕ್ರಮ ಆಯೋಜನೆ ಮಾಡಲಾಗುವದು. ಈ ಸಮ್ಮೇಳನಕ್ಕೆ ಎಲ್ಲ ಸಾಹಿತಿಗಳು, ಕನ್ನಡಾಭಿಮಾನಿಗಳು, ಜನರು ಭಾಗವಹಿಸುವ ಮೂಲಕ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕೆಂದರು.ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಡಾ.ಮಾಧವ ಗುಡಿ, ಸಾಹಿತಿ ವಿವೇಕಾನಂದ ಕಲ್ಯಾಣಶೆಟ್ಟಿ, ಶಿವಯ್ಯ ಹಿರೇಮಠ, ಶಿವಾನಂದ ಮಂಗಾನವರ, ಲತಾ ಬಿರಾದಾರ, ಬಸವರಾಜ ಕಳ್ಳಿಗುಡ್ಡ, ರಾಜೇಸಾಬ ಶಿವನಗುತ್ತಿ ಮಾತನಾಡಿದರು. ಲಾಯಪ್ಪ ಪೂಜಾರಿ ಸಾನಿಧ್ಯ ವಹಿಸಿದ್ದರು. ತಾಲೂಕು ಕಸಾಪ ಅಧ್ಯಕ್ಷ ಶಿವಾನಂದ ಡೋಣೂರ, ಬಸವರಾಜ ಸೋಮಪುರ, ರಾಮಣ್ಣ ಪೂಜಾರಿ, ಎಸ್.ಎಲ್.ಓಂಕಾರ, ಎಸ್.ಬಿ.ಅಂಕದ, ಶಿವು ಮಡಿಕೇಶ್ವರ, ಬಸವರಾಜ ಮೇಟಿ, ಎಚ್.ಬಿ.ಬಾರಿಕಾಯಿ, ಬಿ.ವ್ಹಿ.ಚಕ್ರಮನಿ, ಕೊಟ್ರೇಶ ಹೆಗ್ಡಾಳ, ಸಿ.ಎಲ್.ಮುರಾಳ, ಪರಸಪ್ಪ ಕಳ್ಳಿಗುಡ್ಡ, ಗುರುಸಂಗಪ್ಪ ಕುಂಬಾರ, ಸುಭಾಸ ಚಕ್ರಮನಿ, ಗುರುಲಿಂಗಪ್ಪ ಕುಂಬಾರ, ಸಿದ್ದಪ್ಪ ಅವಟಿ, ವೈ.ಎನ್.ಮಿಣಜಗಿ, ಕಾಂತಪ್ಪ ಹಿರೇಕುರಬರ, ಸುರೇಶ ಚಿಗರಿ, ಬಸವರಾಜ ನಾವಿ, ಮಹಾದೇವಿ ಬಿರಾದಾರ, ನಿರ್ಮಲಾ ಅಂಡಗಿ, ಜಯಶ್ರೀ ಗುಬ್ಬಾ ಸೇರಿದಂತೆ ಇತರರು ಇದ್ದರು.

PREV

Recommended Stories

ಸಾಂಬ್ರಾ ವಿಮಾನ ನಿಲ್ದಾಣದವರೆಗೆ ಚತುಷ್ಪಥ ರಸ್ತೆ
ಮುಷ್ಕರಕ್ಕೆ ನೌಕರರಿಂದ ಮಿಶ್ರ ಪ್ರತಿಕ್ರಿಯೆ