‘ಮಹಾತ್ಮೆ ಕುದ್ಮುಲ್’ ತುಳು ನಾಟಕ ಕೃತಿ ಬಿಡುಗಡೆ

KannadaprabhaNewsNetwork |  
Published : Nov 25, 2026, 02:45 AM IST
ಎಸ್‌.ಅಪ್ಪಿ ಅವರು ‘ಮಹಾತ್ಮೆ ಕುದ್ಮುಲ್’ ತುಳು ನಾಟಕ ಕೃತಿ ಬಿಡುಗಡೆ ಮಾಡಿದರು | Kannada Prabha

ಸಾರಾಂಶ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ‘ಮಹಾತ್ಮೆ ಕುದ್ಮುಲ್’ ತುಳು ನಾಟಕ ಕೃತಿಯನ್ನು ತುಳು ಭವನದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಾಯಿತು.

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ‘ಮಹಾತ್ಮೆ ಕುದ್ಮುಲ್’ ತುಳು ನಾಟಕ ಕೃತಿಯನ್ನು ತುಳು ಭವನದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಾಯಿತು.

ಹಿರಿಯ ರಂಗ ನಿರ್ದೇಶಕ ಜಗನ್ ಪವಾರ್ ಬೇಕಲ್ ಅವರು ಬರೆದ ‘ಮಹಾತ್ಮೆ ಕುದ್ಮುಲ್’ ತುಳು ನಾಟಕ ಕೃತಿಯನ್ನು ದ.ಕ.ಜಿಲ್ಲಾ ಧಾರ್ಮಿಕ ಪರಿಷತ್‌ ಸದಸ್ಯ ಲಕ್ಷ್ಮೀಶ ಗಬ್ಲಡ್ಕ ಬಿಡುಗಡೆಗೊಳಿಸಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸಿದ್ದರು.

ನಾಟಕ ಕೃತಿ ಬಿಡುಗಡೆ ಬಳಿಕ ವಿದ್ದು ಉಚ್ಚಿಲ್ ನಿರ್ದೇಶನದಲ್ಲಿ, ಜರ್ನಿ ಥಿಯೇಟರ್ ಗ್ರೂಪ್ ಪ್ರಸ್ತುತಿಯಲ್ಲಿ ನಾಟಕದ ಪ್ರಥಮ ರಂಗ ಪ್ರದರ್ಶನ ನಡೆಯಿತು. ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ನಗರ ಅಧ್ಯಕ್ಷೆ ಎಸ್.ಅಪ್ಪಿ ನಾಟಕ ಪ್ರದರ್ಶನಕ್ಕೆ ಚಾಲನೆ

ನೀಡಿದರು.

ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ, ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ರಾಜ್ಯ ಉಪಾಧ್ಯಕ್ಷ ಡಾ.ಕೃಷ್ಣಪ್ಪ ಕೊಂಚಾಡಿ, ಅತ್ತಾವರ ಕೋರ್ದಬ್ಬು ದೈವಸ್ಥಾನದ ಗುರಿಕಾರ ಟಿ.ಹೊನ್ನಯ್ಯ ಅತ್ತಾವರ ಬಾಬುಗುಡ್ಡೆ, ದ.ಕ. ಜಿಲ್ಲಾ ಕೊರಗ ಸಂಘದ ಅಧ್ಯಕ್ಷ ಸುಂದರ ಕೊರಗ ಬೆಳುವಾಯಿ, ಗೋವಿಂದದಾಸ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ಕೃಷ್ಣಮೂರ್ತಿ, ನಿರ್ದೇಶಕ ವಿದ್ದು ಉಚ್ಚಿಲ್, ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಉದ್ಯಾವರ ನಾಗೇಶ್ ಕುಮಾರ್, ಪಾಂಗಾಳ ಬಾಬು ಕೊರಗ ಇದ್ದರು.ಅಕಾಡೆಮಿ ಸದಸ್ಯ ಸಂತೋಷ್ ಶೆಟ್ಟಿ ಹಿರಿಯಡ್ಕ ನಿರೂಪಿಸಿ, ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯ ಮದ್ಯಪಾನ ಸಂಯಮ ಮಂಡಳಿ ಗೌರವ ಸಲಹೆಗಾರರಾಗಿ ಡಾ.ಗುರುಮಹಾಂತ ಶ್ರೀ ನೇಮಕ
ಜಿಲ್ಲೆಯ 8 ಉಪನೋಂದಣಿ ಕಚೇರಿಗಳಲ್ಲಿ ಲೋಕಾ ಶೋಧಕಾರ್ಯ