ಕನ್ನಡಪ್ರಭ ವಾರ್ತೆ ಮಳವಳ್ಳಿ
ಕಾವೇರಿ ನದಿಗೆ 2 ಲಕ್ಷಕ್ಕೂ ಹೆಚ್ಚು ಕ್ಯುಸೆಕ್ ನೀರು ಹರಿದು ಬರುತ್ತಿರುವುದರಿಂದ ಜಿಲ್ಲೆಯ ಗಡಿಯ ಭಾಗದ ಸತ್ತೇಗಾಲ ಸೇತುವೆ, ಬೆಳಕವಾಡಿ, ಬಿಳಿಜಗಲೆ ಮೊಳೆಯ ಪೂರಿಗಾಲಿ ಹನಿ ಮತ್ತು ತುಂತುರು ನೀರಾವರಿ ಯೋಜನೆಯ ಭಾಗವಾಗಿರುವ ಪಂಪ್ ಹೌಸ್ ಸೇರಿದಂತೆ ವಿವಿಧ ಪ್ರದೇಶಗಳಿಗೆ ಭೇಟಿಕೊಟ್ಟು ಪ್ರವಾಹ ಪರಿಸ್ಥಿತಿ ಅವಲೋಕಿಸಿದರು.
ನಂತರ ಸಂಬಂಧಪಟ್ಟ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದುಕೊಂಡು ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನಚ್ಚರಿಕೆ ವಹಿಸುವಂತೆ ಸ್ಥಳೀಯರಿಗೆ ಸೂಚನೆ ನೀಡಿದರು.ಕಾವೇರಿ ನದಿ ಪ್ರದೇಶದಲ್ಲಿ ಉಂಟಾಗಿರುವ ಪ್ರವಾಹದಿಂದ ಕೆಲವು ಕೃಷಿ ಜಮೀನುಗಳು ಜಲಾವೃತವಾಗಿವೆ. ಬೆಳೆ ನಷ್ಟ ಅನುಭವಿಸುವ ರೈತರಿಗೆ ಪರಿಹಾರ ನೀಡುವ ಬಗ್ಗೆ ಕೂಡಲೇ ವರದಿ ಸಿದ್ಧಪಡಿಸಿ ಕಳುಹಿಸಿ ಕೊಡುವಂತೆ ತಹಸೀಲ್ದಾರ್‌ಗೆ ತಿಳಿಸಿದರು.
ಈ ವೇಳೆ ಡಿವೈಎಸ್ಪಿ ವಿ.ಕೃಷ್ಣಪ್ಪ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಎಸ್.ದೀಪಕ್, ಕಂದಾಯ ನಿರೀಕ್ಷಕ ಯೋಗೇಶ್, ಕೃಷಿ ಅಧಿಕಾರಿ ರಾಜೇಶ್, ಸಬ್ ಇನ್ಸ್ ಪೆಕ್ಟರ್ ವಿ.ಸಿ.ಅಶೋಕ್ ಸೇರಿದಂತೆ ಇತರರು ಇದ್ದರು.ಕೆಆರ್ ಎಸ್ ನೀರಿನ ಮಟ್ಟ
ಗರಿಷ್ಠ ಮಟ್ಟ - 124.80 ಅಡಿಇಂದಿನ ಮಟ್ಟ – 122.60 ಅಡಿ
ಒಳ ಹರಿವು – 1,12,451 ಕ್ಯುಸೆಕ್
ಹೊರ ಹರಿವು – 99,501 ಕ್ಯುಸೆಕ್
ನೀರಿನ ಸಂಗ್ರಹ – 46.434 ಟಿಎಂಸಿ