ರಾಮನಗರದ ರೆಸಾರ್ಟ್‌ನಲ್ಲಿ ನಡೆದಿದ್ದ ಪ್ರಕರಣ । ಬೇಲ್ ಕೇಳದಿದ್ರೂ ಕೊಲೆ ಆರೋಪಿಗಳು ಜೈಲಿನಿಂದ ಬಿಡುಗಡೆ
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದೆ ನಿರ್ಲಕ್ಷ್ಯ ತೋರಿದ ಪೊಲೀಸರ ನಡೆಯಿಂದ ಬೇಸರಗೊಂಡ ನ್ಯಾಯಾಧೀಶರು ಪ್ರಕರಣದ ಮೂವರು ಆರೋಪಿಗಳನ್ನು ಬಿಡುಗಡೆಗೊಳಿಸಿ ಆದೇಶ ಹೊರಡಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ.
ರಾಮನಗರದ ಹೊರ ವಲಯದ ರೆಸಾರ್ಟ್ ನಲ್ಲಿ 21 ವರ್ಷದ ಬಿಕಾಂ ವಿದ್ಯಾರ್ಥಿ ಪುನೀತ್ ಕೊಲೆ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರ ಗ್ರಾಮಾಂತರ ಠಾಣೆ ಪೊಲೀಸರು ಚಂದು, ಮುರಳಿ, ನಾಗೇಶ್ ಅವರನ್ನು ಬಂಧಿಸಿ ನ್ಯಾಯಾಲಯದ ಎದುರು ಹಾಜರು ಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.
ಪ್ರಕರಣದ ಹಿನ್ನೆಲೆ:
ಸ್ವಿಮ್ಮಿಂಗ್ ಪೂಲ್ನಲ್ಲಿ ಆಟವಾಡುತ್ತಿದ್ದ ಯುವತಿಯರ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ಮೂವರಿಗು ಪುನೀತ್ ಹಾಗೂ ಸ್ನೇಹಿತರು ವಿಡಿಯೋ ಮಾಡಬೇಡಿ ಎಂದು ಹೇಳಿದ್ದಾರೆ. ಆಗ ಮೂವರು ನಾವು ಲೋಕಲ್ ಹುಡುಗರು, ಇಲ್ಲಿ ನಮ್ಮದೇ ಹವಾ ಎಂದು ವಾಗ್ವಾದಕ್ಕೆ ಇಳಿದಿದ್ದಾರೆ. ನಾವು ಏನು ಬೇಕಾದರೂ ಮಾಡುತ್ತೇವೆ. ಇಲ್ಲಿಗೆ ಯಾರ ಪರ್ಮಿಷನ್ ತಗೊಂಡು ಬಂದಿದ್ದೀರಾ ಎಂದು ಹೆಣ್ಣು ಮಕ್ಕಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.
ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಕೆಂಗೇರಿಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಪುನೀತ್ ಸಾವನ್ನಪ್ಪಿದ್ದಾನೆ.
ಆರೋಪಿಗಳನ್ನು ಕಸ್ಟಡಿಗೆ ಪಡೆಯಲು ಪೊಲೀಸರು ರಿಮ್ಯಾಂಡ್ (ಪೊಲೀಸ್ ಬಂಧನ ವಿಸ್ತರಣಾ) ಅರ್ಜಿಯನ್ನು ರಾಮನಗರದ ಅಪರ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಸಲ್ಲಿಸಬೇಕಿತ್ತು.
ಆದರೆ, ರಿಮ್ಯಾಂಡ್ ಅರ್ಜಿಯನ್ನು ಸಲ್ಲಿಸಲು ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಮತ್ತು ನ್ಯಾಯಾಲಯದ ಕಲಾಪ ಪ್ರಾರಂಭವಾದರೂ ಪಬ್ಲಿಕ್ ಪ್ರಾಸಿಕ್ಯೂಟರ್ ಹಾಗೂ ಪೊಲೀಸರು ಹಾಜರಾಗಲಿಲ್ಲ. ಇದರಿಂದ ಕೋಪಗೊಂಡು ತನಿಖೆ ಏಕೆ ಬೇಕು ಅಂತ ಪ್ರಶ್ನಿಸಿ ಕೊಲೆ ಆರೋಪ ಎದುರಿಸುತ್ತಿದ್ದ ಮೂವರನ್ನೂ ಬಿಟ್ಟು ಕಳಿಸುವಂತೆ ನ್ಯಾಯಾಧೀಶ ಗುಲ್ಜಾರ್ ಲಾಲ್ ಡಿ ಮಹಾವರ್ಕರ್ ಡಿಸೆಂಬರ್ 6ರಂದು ಆದೇಶ ಹೊರಡಿಸಿದರು.ಒಂದು ವೇಳೆ, ಪೊಲೀಸರು ಅರ್ಜಿ ಸಲ್ಲಿಸಿದರೆ ಆಗ ಬಂಧಿಸುವಂತೆ ಆದೇಶಿಸಿದರು. ನ್ಯಾಯಾಲಯದ ಆದೇಶ ಸಿಕ್ಕ ಬೆನ್ನಲ್ಲೆ ಮೂವರು ಕೊಲೆ ಆರೋಪಿಗಳನ್ನು ರಾಮನಗರ ಕಾರಾಗೃಹ ಅಧಿಕಾರಿಗಳು ಬಿಟ್ಟು ಕಳುಹಿಸಿದ್ದಾರೆ. ಜಾಮೀನಿಗೆ ಅರ್ಜಿ ಸಲ್ಲಿಸದೆಯೇ ಮೂವರು ಆರೋಪಿಗಳು ಜೈಲಿನಿಂದ ಹೊರ ಬಂದಿದ್ದಾರೆ. ನ್ಯಾಯಾಧೀಶರ ಈ ಆದೇಶ ದೇಶದಲ್ಲೇ ಅತಿ ಅಪರೂಪ ಎನ್ನಲಾಗಿದೆ.