ಜಾನುವಾರು ಗಣತಿಯ ಪ್ರಚಾರ ಸಾಮಗ್ರಿ ಬಿಡುಗಡೆ

KannadaprabhaNewsNetwork |  
Published : Sep 03, 2024, 01:33 AM IST
2ಕೆಪಿಎಲ್21 ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು  ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಾನುವಾರು ಗಣತಿ ಪ್ರಚಾರಕ್ಕೆ ಚಾಲನೆ ನೀಡಿದರು. | Kannada Prabha

ಸಾರಾಂಶ

21ನೇ ರಾಷ್ಟ್ರೀಯ ಜಾನುವಾರು ಗಣತಿ ಕಾರ್ಯಕ್ರಮದ ಪಶುಸಂಜೀವಿನಿ ಯೋಜನೆ ಹಾಗೂ ಲಿಂಗ ನಿರ್ಧಾರಿತ ತಳಿ ಅಭಿವೃದ್ಧಿ ಯೋಜನೆಗಳ ಪ್ರಚಾರ ಸಾಮಗ್ರಿಗಳನ್ನು ಜಿಲ್ಲಾಧಿಕಾರಿ ನಲಿನ್ ಅತುಲ್ ಬಿಡುಗಡೆ ಮಾಡಿದರು.

ಕನ್ನಡಪ್ರಭ ವಾರ್ತೆ ಕೊಪ್ಪಳ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ 21ನೇ ರಾಷ್ಟ್ರೀಯ ಜಾನುವಾರು ಗಣತಿ ಕಾರ್ಯಕ್ರಮದ ಪಶುಸಂಜೀವಿನಿ ಯೋಜನೆ ಹಾಗೂ ಲಿಂಗ ನಿರ್ಧಾರಿತ ತಳಿ ಅಭಿವೃದ್ಧಿ ಯೋಜನೆಗಳ ಪ್ರಚಾರ ಸಾಮಗ್ರಿಗಳನ್ನು ಜಿಲ್ಲಾಧಿಕಾರಿ ನಲಿನ್ ಅತುಲ್ ಡಿಸಿ ಕಚೇರಿ ಸಭಾಂಗಣದಲ್ಲಿ ಬಿಡುಗಡೆ ಮಾಡಿದರು.

ಬಳಿಕ ಮಾತನಾಡಿದ ಅವರು, ಜಿಲ್ಲೆಯಾದ್ಯಂತ ಜಾನುವಾರು ಗಣತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಗಣತಿದಾರರು ಮನೆ-ಮನೆಗೆ ಭೇಟಿ ನೀಡಿ ಜಾನುವಾರು ಗಣತಿಯ ಮಾಹಿತಿ ಸಂಗ್ರಹಿಸಲಿದ್ದಾರೆ. ಆದ್ದರಿಂದ ಸಾರ್ವಜನಿಕರು ಸಹಕರಿಸಿ ನಿಖರವಾದ ಮಾಹಿತಿಗಳನ್ನು ಗಣತಿದಾರರಿಗೆ ನೀಡಲು ತಿಳಿಸಿದರು. ಪಶುಪಾಲನಾ ಇಲಾಖೆಯ ಪಶುಸಂಜೀವಿನಿ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು 8 ಸಂಚಾರಿ ಪಶು ಚಿಕಿತ್ಸಾ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ತುರ್ತು ಜಾನುವಾರು ಚಿಕಿತ್ಸೆಗಳಿಗಾಗಿ ಟೋಲ್-ಫ್ರೀ ನಂ.1962 ಕರೆ ಮಾಡುವ ಮೂಲಕ ತಮ್ಮ ಜಾನುವಾರುಗಳ ಆರೋಗ್ಯ ಕಾಪಾಡಿಕೊಳ್ಳಲು ಜಿಲ್ಲೆಯ ರೈತರಿಗೆ ಪರೋಕ್ಷವಾಗಿ ತಿಳಿಸಿದರು.

ಅದೇ ರೀತಿ ಜಿಲ್ಲೆಯಲ್ಲಿ ಲಿಂಗ ನಿರ್ಧಾರಿತ ತಳಿ ಅಭಿವೃದ್ಧಿ ಯೋಜನೆಯಡಿ ಕೃತಕ ಗರ್ಭಧಾರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಹೈನುಗಾರಿಕೆಯ ರೈತರು ಇದರ ಲಾಭ ಪಡೆಯುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ಈ ಸಂದರ್ಭದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ. ಪಿ.ಎಂ. ಮಲ್ಲಯ್ಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ. ಲಿಂಗರಾಜು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಇದ್ದರು.ಜಾನುವಾರು ಗಣತಿ ಪೋಸ್ಟರ್ ಬಿಡುಗಡೆ:

ಜಾನುವಾರು ಗಣತಿ ಕಾರ್ಯಕ್ರಮದ ಪೋಸ್ಟರ್‌ನ್ನು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಯಲಬುರ್ಗಾ ಪಟ್ಟಣದ ಶಾಸಕರ ಕಾರ್ಯಾಲಯದಲ್ಲಿ ಸಾಂಕೇತಿಕವಾಗಿ ಬಿಡುಗಡೆಗೊಳಿಸಿದರು.೨೧ನೇ ರಾಷ್ಟ್ರೀಯ ಜಾನುವಾರು ಗಣತಿ ಕಾರ್ಯಕ್ರಮ ನಿಮಿತ್ತ ಸಂಚಾರಿ ಪಶುಚಿಕಿತ್ಸಾ ಘಟಕ ಹಾಗೂ ಲಿಂಗ ನಿರ್ಧರಿತ ಕೃತಕ ಗರ್ಭಧಾರಣೆ ಕಾರ್ಯಕ್ರಮದ ಪೋಸ್ಟರ್‌ಗಳನ್ನು ಬಿಡುಗಡೆಗೊಳಿಸಲಾಯಿತು.ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಸವರಾಜ ಉಳ್ಳಾಗಡ್ಡಿ, ಹನುಮಂತಗೌಡ ಪಾಟೀಲ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಯಂಕಣ್ಣ ಯರಾಶಿ, ಡಾ. ಶಿವನಗೌಡ ದಾನರಡ್ಡಿ, ಈಶ್ವರ ಅಟಮಾಳಗಿ ಹಾಗೂ ಜಿಲ್ಲಾ ಉಪನಿರ್ದೇಶಕ ಡಾ. ಪಿ.ಎಂ. ಮಲ್ಲಯ್ಯ, ಸಹಾಯಕ ನಿರ್ದೇಶಕ ಡಾ. ಪ್ರಕಾಶ ಚೂರಿ, ಪಶುವೈದ್ಯಾಧಿಕಾರಿ ಡಾ. ಸವಿತಾ ರಾಠೋಡ, ಸಿಬ್ಬಂದಿ ಸಂಜಯ್ ಚಿತ್ರಗಾರ, ಮಹ್ಮದ್ ರಫಿ ಮತ್ತಿತರರು ಇದ್ದರು.

PREV

Recommended Stories

ಬಾಗಲಕೋಟೆ ತೋಟಗಾರಿಕಾ ವಿಜ್ಞಾನ ವಿವಿಗೆ ಅನುದಾನ: ಸಚಿವ
ಸಂಭ್ರಮದ ಮೌನೇಶ್ವರ ಜಾತ್ರಾ ಮಹೋತ್ಸವ