ಅವಿರತ ಪರಿಶ್ರಮವೇ ಸಾಧನೆಯ ಮೆಟ್ಟಿಲು: ಡಾ.ಓಂಕಾರ್

KannadaprabhaNewsNetwork |  
Published : Sep 11, 2025, 12:03 AM IST
ದೊಡ್ಡಬಳ್ಳಾಪುರದ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದ ಅಲೈಡ್‌ ಸೈನ್ಸ್‌ ವಿಭಾಗದಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಐಐಎಸ್‌ಸಿ ವಿಜ್ಞಾನಿ ಡಾ.ಓಂಕಾರ್‌ ಮಾತನಾಡಿದರು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ಪರಿಶ್ರಮ ಮತ್ತು ಅವಿರತ ಪ್ರಯತ್ನದಿಂದ ಯಾವುದೇ ಸಾಧನೆಯನ್ನಾದರೂ ಮಾಡಬಹುದು. ಸಾಧನೆಯ ಹಾದಿಯಲ್ಲಿ ಸೋಲುಗಳ ಬಗ್ಗೆ ಹೆದರಿಕೆ ಸಲ್ಲ ಎಂದು ಭಾರತೀಯ ವಿಜ್ಞಾನ ಸಂಸ್ಥೆ- ಐಐಎಸ್‌ಸಿಯ ಮುಖ್ಯ ಸಂಶೋಧನಾ ವಿಜ್ಞಾನಿ ಡಾ.ಎಸ್.ಎನ್.ಓಂಕಾರ್ ಅಭಿಪ್ರಾಯಪಟ್ಟರು.

ದೊಡ್ಡಬಳ್ಳಾಪುರ: ಪರಿಶ್ರಮ ಮತ್ತು ಅವಿರತ ಪ್ರಯತ್ನದಿಂದ ಯಾವುದೇ ಸಾಧನೆಯನ್ನಾದರೂ ಮಾಡಬಹುದು. ಸಾಧನೆಯ ಹಾದಿಯಲ್ಲಿ ಸೋಲುಗಳ ಬಗ್ಗೆ ಹೆದರಿಕೆ ಸಲ್ಲ ಎಂದು ಭಾರತೀಯ ವಿಜ್ಞಾನ ಸಂಸ್ಥೆ- ಐಐಎಸ್‌ಸಿಯ ಮುಖ್ಯ ಸಂಶೋಧನಾ ವಿಜ್ಞಾನಿ ಡಾ.ಎಸ್.ಎನ್.ಓಂಕಾರ್ ಅಭಿಪ್ರಾಯಪಟ್ಟರು.

ಇಲ್ಲಿನ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದ ಅಲೈಡ್‌ ಸೈನ್ಸ್‌ ವಿಭಾಗದಿಂದ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಪ್ರಥಮ ವರ್ಷದ ಎಂಜಿನಿಯರಿಂಗ್‌ ವಿದ್ಯಾರ್ಥಿಗಳ ಪ್ರೇರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಮಕಾಲೀನ ಜಗತ್ತಿನ ಆಶೋತ್ತರಗಳನ್ನು ಅರ್ಥಮಾಡಿಕೊಂಡು ಅಧ್ಯಯನಶೀಲರಾಗಬೇಕು. ಸೋಮಾರಿತನ ಮನುಷ್ಯನ ಬಹುದೊಡ್ಡ ಶತೃ ಎಂಬುದನ್ನು ಮನನ ಮಾಡಿಕೊಂಡು ಸದಾ ಕಾಲ ಚಟುವಟಿಕೆಯಿಂದ ಇರುವ ಮೂಲಕ ಹೊಸತನ್ನು ಶೋಧಿಸುವ ಕಾರ್ಯದಲ್ಲಿ ನಿರಂತರತೆಯನ್ನು ಕಾಯ್ದುಕೊಳ್ಳಬೇಕು. ಎಲ್ಲವೂ ಸರಿಯಿದ್ದವರು ಮಾತ್ರ ಸಾಧಕರಾಗುವುದಿಲ್ಲ. ಅಚಲ ಶ್ರದ್ದೆ ಮತ್ತು ತಮ್ಮ ಮೇಲೆ ಹೊಂದಿರುವ ನಂಬಿಕೆ ಯಶಸ್ಸಿನ ಹಾದಿಯಲ್ಲಿ ಹೊಸ ಸ್ಪೂರ್ತಿಯನ್ನು ಒದಗಿಸುತ್ತದೆ ಎಂದರು.

ಎಂಜಿನಿಯರಿಂಗ್‌ ವಿದ್ಯಾರ್ಥಿಗಳು ದೇಶದ ಭವಿಷ್ಯತ್ತನ್ನು ಸದೃಢಗೊಳಿಸುವ ಹೊಣೆಯಾಧಾರಿತ ಕರ್ತವ್ಯವನ್ನು ನಿಭಾಯಿಸಬೇಕು. ಆ ನಿಟ್ಟಿನಲ್ಲಿ ತಮ್ಮ ವ್ಯಕ್ತಿತ್ವವನ್ನು ಸಶಕ್ತವಾಗಿ ಕಟ್ಟಿಕೊಳ್ಳುವ ಪ್ರಯತ್ನ ಆಗಬೇಕು. ಮೊಬೈಲ್‌ ಬಳಕೆಯಿಂದ ಆದಷ್ಟೂ ದೂರವಿದ್ದು ಸೃಜನಶೀಲವಾಗಿ ಯೋಚಿಸುವ ಚಿಂತನ ಕ್ರಮವನ್ನು ಬೆಳೆಸಬೇಕು ಎಂದು ತಿಳಿಸಿದರು.

ಶ್ರೀ ದೇವರಾಜ್‌ ಅರಸ್‌ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ ಆರ್.ಎಲ್.ಜಾಲಪ್ಪನವರು ಇಂತಹ ದೊಡ್ಡ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿದ್ದು, ಅವರ ಆಶಯಕ್ಕೆ ಪೂರಕವಾಗಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಲಾಗಿದೆ. ಅವಕಾಶಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳು ಉನ್ನತ ಸಾಧನೆಯತ್ತ ಗಮನವನ್ನು ಕೇಂದ್ರೀಕರಿಸಬೇಕು ಎಂದರು.

ಸಂಸ್ಥೆಯ ಮಾನವ ಸಂಪನ್ಮೂಲ ನಿರ್ದೇಶಕ ಎನ್.ಎಸ್.ಬಾಬುರೆಡ್ಡಿ, ಪ್ರಾಂಶುಪಾಲ ಡಾ.ವಿಜಯ್‌ಕಾರ್ತಿಕ್‌, ಉಪಪ್ರಾಂಶುಪಾಲ ಡಾ.ಶಿವಪ್ರಸಾದ್, ಶೈಕ್ಷಣಿಕ ನಿರ್ದೇಶಕ ಡಾ.ಶ್ರೀನಿವಾಸರೆಡ್ಡಿ, ಅಲೈಡ್‌ ಸೈನ್ಸ್‌ ವಿಭಾಗ ಮುಖ್ಯಸ್ಥೆ ಮೀನಾಕ್ಷಿ ಸೇರಿದಂತೆ ವಿವಿಧ ವಿಭಾಗಗಳ ಮುಖ್ಯಸ್ಥರು ಹಾಗೂ ಬೋಧಕ ಸಿಬ್ಬಂದಿ ಉಪಸ್ಥಿತರಿದ್ದರು.

ಫೋಟೋ-

8ಕೆಡಿಬಿಪಿ1- ದೊಡ್ಡಬಳ್ಳಾಪುರದ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದ ಅಲೈಡ್‌ ಸೈನ್ಸ್‌ ವಿಭಾಗದಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಐಐಎಸ್‌ಸಿ ವಿಜ್ಞಾನಿ ಡಾ.ಓಂಕಾರ್‌ ಮಾತನಾಡಿದರು.

PREV

Recommended Stories

ವಿಶ್ವಾದ್ಯಂತ ಒಂದೇ ದಿನ ಕಾಂತಾರ ಚಾಪ್ಟರ್ 1 ಬಿಡುಗಡೆ
ಈರುಳ್ಳಿ, ಹೂ, ಪಚ್ಚ ಬಾಳೆ ಬೆಲೆ ಧರೆಗೆ!