ಧಾರ್ಮಿಕ ಕಾರ್ಯಕ್ರಮಗಳ ನಡೆಯುವುದರಿಂದ ರಾಜ್ಯ ಸುಭೀಕ್ಷವಾಗಿರುತ್ತದೆ. ಮನುಷ್ಯ ತನ್ನ ಮನಸ್ಸನ್ನ ಸ್ಥಿರವಾಗಿರಿಸಲು ಧಾರ್ಮಿಕ ಕಾರ್ಯಕ್ರಮಗಳತ್ತ ಹೋದರೆ ದುಶ್ಚಟಗಳಿಂದ ದೂರ ಉಳಿಯಲು ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಕನ್ನಡಪ್ರಭ ವಾರ್ತೆ ಕೊರಟಗೆರೆ
ಧಾರ್ಮಿಕ ಕಾರ್ಯಕ್ರಮಗಳ ನಡೆಯುವುದರಿಂದ ರಾಜ್ಯ ಸುಭೀಕ್ಷವಾಗಿರುತ್ತದೆ. ಮನುಷ್ಯ ತನ್ನ ಮನಸ್ಸನ್ನ ಸ್ಥಿರವಾಗಿರಿಸಲು ಧಾರ್ಮಿಕ ಕಾರ್ಯಕ್ರಮಗಳತ್ತ ಹೋದರೆ ದುಶ್ಚಟಗಳಿಂದ ದೂರ ಉಳಿಯಲು ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಪಟ್ಟಣದಲ್ಲಿ ಶ್ರೀ ಗ್ರಾಮದೇವತೆ ಕೋಟೆ ಮಾರಮ್ಮದೇವಿ ಹಾಗೂ ಶ್ರೀ ಕೊಲ್ಲಾಪುರದಮ್ಮನವರ ನೂತನ ದೇವಾಲಯ ಮತ್ತು ಮೂಲ ದೇವರುಗಳ ಪುನರ್ ಪ್ರತಿಷ್ಠಾಪನಾ ಮಹೊತ್ಸವದ ಎರಡನೇ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಪ್ರತಿ ಗ್ರಾಮಗಳಲ್ಲೂ ಗ್ರಾಮದೇವತೆಗಳು ಇದ್ದು. ಈ ದೇವತೆಗಳು ಹೆಚ್ಚಿನ ಮಹತ್ವ ಪಡೆದಿರುತ್ತವೆ . ಜನ ತಮ್ಮ ಜೀವನದಲ್ಲಿ ಶಾಂತಿ, ನೆಮ್ಮದಿ ಕಾಣಬೇಕಾದರೆ ದೇವಾಲಯಗಳಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು, ಗ್ರಾಮಗಳಲ್ಲಿ ದೇವಾಲಯಗಳ ಜೀರ್ಣೋದ್ಧಾರ ಮಾಡುವುದು ಬಹಳ ಕಷ್ಠದ ಕೆಲಸ ಆದರೂ ದೇವಾಲಯ ಸಮಿತಿಯ ಪದಾಧಿಕಾರಿಗಳು ಪ್ರಾಮಾಣಿಕತೆ ಹಾಗೂ ಶ್ರದ್ಧೆಯಿಂದ ದೇವಾಲಯ ಉತ್ತಮವಾಗಿ ನಿರ್ಮಿಸಿ ದೇವತೆಗಳ ಪುನರ್ ಪ್ರತಿಷ್ಠಾಪನೆ ಮಾಡುತ್ತಿರುವುದು ಶ್ಲಾಘನೀಯ ಎಂದು ಅಭಿನಂದಿಸಿದ ಅವರು ಈ ದೇವತಾ ಕಾರ್ಯಕ್ರಮಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದರು. ಮುಂದಿನ ದಿನಗಳಲ್ಲಿ ದೇವಾಲಯ ಅಭಿವೃದಿ ಹೊಂದಬೇಕಾದರೆ ಆರ್ಥಿಕವಾಗಿ ಸದೃಢವಾಗಿರಬೇಕು ಆರ್ಥಿಕ ಸಹಕಾರ ಅವಶ್ಯಕವಾಗಿದ್ದು ಕೊರಟಗೆರೆ ಕೋಟೆ ಮಾರಮ್ಮದೇವಿಯ ದೇವಾಲಯ ಅಭಿವೃದ್ಧಿಗೆ ಸರ್ಕಾರದಿಂದ ಜಮೀನು ಮುಂಜೂರು ಮಾಡಿಸಿ ಅದರಲ್ಲಿ ಸಮುದಾಯ ಭವನ ನಿರ್ಮಾಣ ಮಾಡಿ ದೇವಾಲಯಕ್ಕೆ ಆರ್ಥಿಕವಾಗಿ ಆದಾಯ ಬರುವಂತೆ ಮಾಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ನೂತನ ದೇವಾಲಯವನ್ನು ವೀಕ್ಷಿಸಿದರು. ನೂತನ ದೇವಾಲಯ ನಿಮಾರ್ಣ ಮಾಡಿದ ಶಿಲ್ಪಿ ಮಹಾಲಿಂಗಯ್ಯ ನವರನ್ನು ಅಭಿನಂದಿಸಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ತಹಸೀಲ್ದಾರ್ ಮಂಜುನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೊಡ್ಲಹಳ್ಳಿ ಅಶ್ವತ್ಥನಾರಾಯಣ್, ಪ.ಪಂ.ಅಧ್ಯಕ್ಷೆ ಅನಿತಾ, ಸ್ಥಾಯಿ ಸಮಿತಿ ಅಧ್ಯಕ್ಷೆ ಹೇಮಲತಾ ಮಂಜುನಾತ್, ಸದಸ್ಯರಾದ ಭಾಗ್ಯಾಮ್ಮ ಗಣೇಶ್, ಕೆ.ಆರ್.ಓಬಳರಾಜು, ದೇವಾಲಯ ಸಮಿತಿ ಅಧ್ಯಕ್ಷ ಎ.ಡಿ.ಬಲರಾಮಯ್ಯ, ಕಾರ್ಯದರ್ಶಿ ಕೆ.ವಿ.ಮಂಜುನಾಥ್, ಖಜಾಂಚಿ ಕೆ.ಎನ್.ಲಕ್ಷ್ಮೀನಾರಾಯಣ್, ಸದಸ್ಯರಾದ ಎಸ್.ಪಿ.ಎಲ್.ರಾವ್, ಮುರಳಿಗೌಡ, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ವಿ.ಪುರುಷೋತ್ತಮ್, ಕೆ.ಬಿ.ಲೋಕೇಶ್, ಪುನೀತ್, ರಾಘವೇಂದ್ರ ಅರ್ಚಕ ಶ್ರೀಧರಾಚಾರ್, ದೀಪಕ್‌ಆಚಾರ್, ಹರೀಶಾಚಾರ್, ಸೇರಿದಂತೆ ಇನ್ನಿತರರು ಹಾಜರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.