ಹಿಂದೂಗಳಲ್ಲಿ ಧರ್ಮ ಪ್ರಜ್ಞೆ ಜಾಗೃತಗೊಂಡಿದೆ: ಈಶ್ವರಪ್ಪ

KannadaprabhaNewsNetwork |  
Published : Sep 18, 2025, 02:00 AM IST
ಪಟ್ಟಣದ ಊರ ಬಾಗಿಲ ಹನುಮಂತ ದೇವರ ದೇವಾಸ್ಥಾನದ ಆವರಣದಲ್ಲಿ ವಿಶ್ವಹಿಂದೂ ಪರಿಷದ್-ಬಜರಂಗದಳದ ವತಿಯಿಂದ ಪ್ರತಿಷ್ಠಾಪಿಸಿದ್ದ ಗಣಪತಿ ಮಂಟಪಕ್ಕೆ ಭೇಟಿನೀಡಿ ಪೂಜೆ ಸಲ್ಲಿಸಿದ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ | Kannada Prabha

ಸಾರಾಂಶ

ದೇಶದಲ್ಲಿ ಜಾತಿ ಮೀರಿ ಹಿಂದೂಗಳು ಒಗ್ಗಟ್ಟಾಗುವುದು ಗಣೇಶೋತ್ಸವ ಕಾರ್ಯಕ್ರಮದಲ್ಲಾಗಿದೆ. ಪ್ರತಿಯೊಬ್ಬ ಭಾರತೀಯನ ಮನಸ್ಸಿನಲ್ಲಿ ಹಿಂದೂ ಧರ್ಮ ಉಳಿಸಬೇಕು ಎನ್ನುವ ಮನಸ್ಥಿತಿ ಬಂದಿದೆ. ಹಿಂದೂ ಸಮಾಜ ಈಗ ಸಂಘಟಿತವಾಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಚನ್ನಗಿರಿ: ದೇಶದಲ್ಲಿ ಜಾತಿ ಮೀರಿ ಹಿಂದೂಗಳು ಒಗ್ಗಟ್ಟಾಗುವುದು ಗಣೇಶೋತ್ಸವ ಕಾರ್ಯಕ್ರಮದಲ್ಲಾಗಿದೆ. ಪ್ರತಿಯೊಬ್ಬ ಭಾರತೀಯನ ಮನಸ್ಸಿನಲ್ಲಿ ಹಿಂದೂ ಧರ್ಮ ಉಳಿಸಬೇಕು ಎನ್ನುವ ಮನಸ್ಥಿತಿ ಬಂದಿದೆ. ಹಿಂದೂ ಸಮಾಜ ಈಗ ಸಂಘಟಿತವಾಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು.

ಅವರು ಬುಧವಾರ ಪಟ್ಟಣದ ಊರಬಾಗಿಲ ಹನುಮಂತ ದೇವರ ದೇವಸ್ಥಾನ ಆವರಣದಲ್ಲಿ ವಿಶ್ವ ಹಿಂದೂ ಪರಿಷದ್-ಬಜರಂಗದಳ ವತಿಯಿಂದ ಪ್ರತಿಷ್ಠಾಪಿಸಿದ್ದ ಗಣಪತಿ ಮಂಟಪಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಕಳೆದ ಮಂಗಳವಾರ ಶಿವಮೊಗ್ಗ ನಗರದಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿ.ಜೆ. ಬಳಸಿದ್ದು ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಗಮನಕ್ಕೆ ತಂದಿದ್ದೇನೆ. ಡಿ.ಜೆ. ಬಳಸಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದ್ದಾರೆ. ಅದನ್ನು ಕಾದುನೋಡೋಣ ಎಂದರು.

ಡಿಜೆ ಸೌಂಡ್‌ ಸಿಸ್ಟಂ ಬಳಕೆ ವಿಚಾರವಾಗಿ ಮಾದಾರ ಚನ್ನಯ್ಯ ಸ್ವಾಮೀಜಿ ಬೆಂಗಳೂರಿಗೆ ಹೋಗಿ, ಚಿತ್ರದುರ್ಗದಲ್ಲಿ ಡಿ.ಜೆ. ಬಳಕೆಗೆ ಪರವಾನಿಗೆ ನೀಡುವಂತೆ ಮುಖ್ಯಮಂತ್ರಿ, ಗೃಹ ಮಂತ್ರಿಗೆ ಕೇಳಿದರೂ ರಾಜ್ಯ ಸರ್ಕಾರ ಸ್ಪಂದಿಸಲಿಲ್ಲ. ಮದ್ದೂರಿನಲ್ಲಿ ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ, ಪಾಕಿಸ್ತಾನ ಜಿಂದಾಬಾದ್ ಅಂತಾ ಘೋಷಣೆ ಕೂಗಿರುವ ಮುಸ್ಲಿಮರ ವಿರುದ್ಧವೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಶಿವಮೊಗ್ಗದಲ್ಲಿ ಈದ್ ಮಿಲಾದ್‌ ವೇಳೆ ಡಿ.ಜೆ. ಸೌಂಡ್ಸ್‌ ಬಳಸಿದ್ದಕ್ಕೆ ಏನು ಕ್ರಮ ಕೈಗೊಂಡಿದೆ ಎಂದು ಈಶ್ವರಪ್ಪ ಪ್ರಶ್ನಿಸಿದರು.

ಈ ಸಂದರ್ಭ ತಾಲೂಕು ವಿಎಚ್‌ಪಿ ಅಧ್ಯಕ್ಷ ಮಾಚನಾಯ್ಕನಹಳ್ಳಿ ಜಯಣ್ಣ, ಗಣಪತಿ ಸಮಿತಿಯ ಅಧ್ಯಕ್ಷ ಮಂಜುನಾಥ್ ಕಾಳೆ, ಪ್ರಮುಖರಾದ ಮಂಜುನಾಥ್, ಚಿಕ್ಕಣ್ಣ, ಮೊಟ್ಟೆ ಚಿಕ್ಕಣ್ಣ, ರಾಜು ಕರಡೇರ್, ರವಿಚಂದ್ರ ಮೊದಲಾದವರು ಹಾಜರಿದ್ದರು.

- - -

-17ಕೆಸಿಎನ್ಜಿ1:

ಚನ್ನಗಿರಿ ಪಟ್ಟಣದ ಊರಬಾಗಿಲ ಹನುಮಂತ ದೇವರ ದೇವಾಸ್ಥಾನ ಆವರಣದಲ್ಲಿ ವಿಶ್ವಹಿಂದೂ ಪರಿಷದ್- ಬಜರಂಗದಳ ವತಿಯಿಂದ ಪ್ರತಿಷ್ಠಾಪಿಸಿದ್ದ ಗಣಪತಿ ಮಂಟಪಕ್ಕೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಭೇಟಿ ನೀಡಿ ಪೂಜೆ ಸಲ್ಲಿಸಿದರು.

PREV

Recommended Stories

ದೇಶದ ನಾಯಕರಾಗಲು ಶಾಲೆಯಲ್ಲಿ ನಾಯಕತ್ವ ವಹಿಸಿಕೊಳ್ಳಿ
ಪರಿಷ್ಕೃತ ಜಿಎಸ್‌ಟಿ ಬಡ ಜನತೆಗೆ ಅನುಕೂಲ